ನಾನು ಹುಟ್ಟುತ್ತಲೇ ಕಾಂಗ್ರೆಸಿಗ, ಬೇರೆ ಪಕ್ಷಕ್ಕೆ ಹೋಗಲು ಹುಚ್ಚನಲ್ಲ

ಪ್ರಭಾವಿ ಸಚಿವರು 50-60 ಶಾಸಕರ ಸಮೇತ ಬಿಜೆಪಿ ಸೇರುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ ಎಂದು ತಿರುಗೇಟು ನೀಡಿದ್ದಾರೆ.

Written by - Prashobh Devanahalli | Edited by - Krishna N K | Last Updated : Dec 12, 2023, 06:45 PM IST
  • ಪ್ರಭಾವಿ ಸಚಿವರು 50-60 ಶಾಸಕರ ಸಮೇತ ಬಿಜೆಪಿ ಸೇರುತ್ತಾರೆ.
  • ಹೆಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಉಪಮುಖ್ಯಮಂತ್ರಿ ಪ್ರತಿಕ್ರಿಯೆ.
  • ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ ಎಂದ ಡಿಸಿಎಂ ಡಿಕೆಶಿ.
ನಾನು ಹುಟ್ಟುತ್ತಲೇ ಕಾಂಗ್ರೆಸಿಗ, ಬೇರೆ ಪಕ್ಷಕ್ಕೆ ಹೋಗಲು ಹುಚ್ಚನಲ್ಲ title=

ಬೆಳಗಾವಿ : ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ. ನನಗೆ ನನ್ನದೇ ಆದ ಮೂಲ ಆದರ್ಶಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಪಕ್ಷಾಂತರ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಪ್ರತಿಕ್ರಿಯೆ ನೀಡಿದರು.

ಬೆಳಗಾವಿಯ ಸುವರ್ಣಸೌಧದ ಬಳಿ ಮಾಧ್ಯಮದವರು, ಲೋಕಸಭೆ ಚುನಾವಣೆ ನಂತರ ಪ್ರಭಾವಿ ಸಚಿವರು 50-60 ಶಾಸಕರ ಸಮೇತ ಬಿಜೆಪಿ ಸೇರುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆ ನಿಮ್ಮನ್ನೇ ಗುರಿ ಮಾಡಿರುವಂತಿದೆ ಎಂದು ಕೇಳಿದಾಗ, “ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ. ನನಗೆ ನನ್ನದೇ ಆದ ಮೂಲ ಆದರ್ಶಗಳಿವೆ. ನನಗೆ ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷದ ಮೇಲೆ ಅಪಾರವಾದ ನಂಬಿಕೆ ಇದೆ” ಎಂದು ತಿಳಿಸಿದರು. ಅಲ್ಲದೆ, ಅವರು ಮಾತನಾಡಿದ್ದಕ್ಕೆಲ್ಲ ನಾನು ಬಾಧ್ಯಸ್ಥನಲ್ಲ. ಅವರು ಏನಾದರೂ ಹೇಳಿಕೊಂಡು ತಿರುಗಲಿ, ಆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.

ಇದನ್ನೂ ಓದಿ:ಬಿಡಿಎ, ಬಿಬಿಎಂಪಿ ಆಸ್ತಿ ಒತ್ತುವರಿ ತೆರವಿಗೆ ನಿರ್ದಾಕ್ಷಿಣ್ಯ ಕ್ರಮ : ಡಿಸಿಎಂ

ಜಾತಿ ಗಣತಿಗೆ ವಿರೋಧವಿಲ್ಲ : ನಿನ್ನೆ ರಾಜ್ಯಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದಲ್ಲಿ ಜಾತಿ ಗಣತಿ ಜಾರಿ ವಿಚಾರವಾಗಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಿರುವ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಅವರು ಈ ರೀತಿ ಉತ್ತರಿಸಿದರು.

“ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ, ಮನೆಗೆ ತೆರಳಿ ಸಮೀಕ್ಷೆ ನಡೆಸಿಲ್ಲ ಎಂದು ದೂರುಗಳು ಬಂದಿವೆ. ಎಲ್ಲಾ ಸಮುದಾಯಗಳು ಅವರ ಜನಸಂಖ್ಯೆಗೆ ಅನುಗುಣವಾಗಿ ತಮ್ಮ ಹಕ್ಕನ್ನು ಪಡೆಯಬೇಕು. ಅಲ್ಪಸಂಖ್ಯಾತರು, ಪರಿಶಿಷ್ಟರು ಸೇರಿದಂತೆ ಎಲ್ಲರೂ ತಮ್ಮ ಜನಸಂಖ್ಯೆ ಅನುಗುಣವಾಗಿ ಹಕ್ಕು ಹಾಗೂ ಅನುದಾನ ಕೇಳುತ್ತಾರೆ. ಈ ಜಾತಿ ಗಣತಿಯನ್ನು ವೈಜ್ಞಾನಿಕವಾಗಿ ಮಾಡಲಾಗಿದೆಯೇ ಎಂಬ ವಿಚಾರವಾಗಿ ನಾವು ಸ್ಪಷ್ಟೀಕರಣ ಕೇಳಿದ್ದೇವೆ.

ಇದನ್ನೂ ಓದಿ:ಸ್ವಪಕ್ಷದ ವಿರುದ್ಧವೇ‌ ಯತ್ನಾಳ್ ಗಂಭೀರ ಆರೋಪ, ಸದನದಲ್ಲಿ ಬಿಜೆಪಿಗೆ ಮುಜುಗರ

ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಕಾಂಗ್ರೆಸ್ ಪಕ್ಷದ ಬದ್ಧತೆಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಕೇಂದ್ರ ಸರಕಾರದ ವರ್ಗಿಕರಣದ ಅನ್ವಯ ನಾನು ಕೂಡ ಇತರೆ ಹಿಂದುಳಿದ ವರ್ಗದ ಸಮುದಾಯದ ನಾಯಕ. ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು” ಎಂದು ತಿಳಿಸಿದರು.

ಜಾತಿ ಗಣತಿಯ ಕೆಲವು ದಾಖಲೆಗಳು ಕಾಣೆಯಾಗಿರುವ ಬಗ್ಗೆ ವರದಿಗಳಿವೆ ಎಂದು ಕೇಳಿದಾಗ, “ಈ ವಿಚಾರ ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಜಯಪ್ರಕಾಶ್ ಹೆಗ್ಡೆ ಅವರೊಂದಿಗೆ ಮಾತನಾಡಿದ್ದು, ಈ ವರದಿಗೆ ಕಾರ್ಯದರ್ಶಿಗಳ ಸಹಿ ಇಲ್ಲವೆಂಬ ಮಾಹಿತಿ ಪಡೆದಿದ್ದೇನೆ. ಕಾರ್ಯದರ್ಶಿಗಳ ಸಹಿ ಇಲ್ಲದೇ ಅದು ಹೇಗೆ ಸಿಂಧುವಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ” ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News