ರಾಜಕೀಯ ಕಾರಣಗಳಿಂದ ಮೇಕೆದಾಟುವಿಗೆ ಅನುಮತಿ ವಿಳಂಬ: ಡಿಸಿಎಂ ಡಿ. ಕೆ. ಶಿವಕುಮಾರ್

ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಮೇಕೆದಾಟು ಯೋಜನೆ ಅನುಮತಿ ದೊರೆಯುತ್ತಿಲ್ಲ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Written by - Krishna N K | Last Updated : Jan 9, 2025, 08:02 PM IST
    • ರಾಜಕೀಯ ಕಾರಣಗಳಿಗಾಗಿ ಮೇಕೆದಾಟು ಯೋಜನೆ ಅನುಮತಿ ದೊರೆಯುತ್ತಿಲ್ಲ.
    • ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ.
    • ಮೇಕೆದಾಟು ಯೋಜನೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮಾತು.
ರಾಜಕೀಯ ಕಾರಣಗಳಿಂದ ಮೇಕೆದಾಟುವಿಗೆ ಅನುಮತಿ ವಿಳಂಬ: ಡಿಸಿಎಂ ಡಿ. ಕೆ. ಶಿವಕುಮಾರ್ title=

ಕಾಂಚಿಪುರಂ : ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. 

ತಮಿಳುನಾಡಿನ ಕಾಂಚಿಪುರಂ ವರದಾರಾಜು ಪೆರುಮಾಳ್ ದೇಗುಲದಲ್ಲಿ ಗುರುವಾರ ಪೂಜೆ ಸಲ್ಲಿಸಿದ ನಂತರ ಮಾಧ್ಯಮದವರ ಜತೆ ಶಿವಕುಮಾರ್ ಅವರು ಮಾತನಾಡಿದರು. ಈ ವೇಳೆ, 400 ಟಿಎಂಸಿಗೂ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಈ ಹೆಚ್ಚುವರಿ ನೀರನ್ನು ಸಂಗ್ರಹ ಮಾಡಿದರೆ ಕಷ್ಟಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ. ಜೊತೆಗೆ, ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮ, ನಿಮ್ಮಲ್ಲಿಯೇ ಸಮಸ್ಯೆ ಇತ್ಯರ್ಥ ಪಡಿಸಿಕೊಂಡು ಬನ್ನಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ಜಲಶಕ್ತಿ ಸಚಿವರು ಸಹ ಸಮಸ್ಯೆಯನ್ನು ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:ದೇಸಿ ತಿನಿಸಿನ ಬೇಡಿಕೆ ಹೆಚ್ಚಿಸಲು ಕ್ರಮ: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ

ನಕ್ಸಲ್ ಮುಕ್ತ ರಾಜ್ಯ ಕರ್ನಾಟಕ : ನಮ್ಮ ಸರ್ಕಾರ ನಕ್ಸಲ್ ಹೋರಾಟಗಾರರ ಜೊತೆ ಶಾಂತಿಯುತ ಮಾತುಕತೆ ನಡೆಸಿದ ಪರಿಣಾಮ 6 ಮಂದಿ ಬುಧವಾರದಂದು ಶರಣಾಗಿದ್ದಾರೆ. ಇದರಲ್ಲಿ ಒಬ್ಬ ಸದಸ್ಯರು ತಮಿಳುನಾಡು ಮೂಲದವರು. ಬಿ ಟೆಕ್ ಪದವಿ ಪಡೆದಿದ್ದಾರೆ ಎಂದರು.

ಒಂದು ದೇಶ ಒಂದು ಚುನಾವಣೆ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ಹುನ್ನಾರ ಮಾಡುತ್ತಿದೆ. ಇದನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ. ಇದು ಬಿಜೆಪಿಯ ರಾಜಕೀಯ ಕುತಂತ್ರ. ನಾವು ಈಗ ಇರುವ ಚುನಾವಣಾ ವ್ಯವಸ್ಥೆಯ ಪರವಾಗಿ ನಿಲ್ಲುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ:ಪ್ರಯಾಣಿಕರಿಗೆ ಮತ್ತೊಂದು ಶಾಕ್​:ಬಸ್ ಟಿಕೆಟ್ ದರಗಳನ್ನು ಶೇಕಡಾ 15ರಷ್ಟು ಏರಿಕೆ ಮಾಡಿದ ಸಾರಿಗೆ ಇಲಾಖೆ

ತಿರುಪತಿಯಲ್ಲಿ ಕಾಲ್ತುಳಿತವಾಗಿರುವ ಬಗ್ಗೆ ಕೇಳಿದಾಗ, ಆ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಇನ್ನೊಂದು ರಾಜ್ಯದ ವಿಚಾರಕ್ಕೆ ಅವರ ಕಾನೂನು ಸುವ್ಯವಸ್ಥೆ ಬಗ್ಗೆ ಮಾತಾಡಲು ಹೋಗುವುದಿಲ್ಲ ಎಂದು ಹೇಳಿದರು.

ಡಿಸಿಎಂ ಅವರಿಂದ ಗೋವರ್ಧನ ಹೋಮ : ತಮಿಳುನಾಡು ದೇವಾಲಯಗಳ ಹಾಗೂ ಆಧ್ಯಾತ್ಮಿಕವಾದ ಭೂಮಿ. ನಮ್ಮ ಗುರುಗಳ ನಿರ್ದೇಶನದ ಮೇಲೆ ಗೋವರ್ಧನ ಹೋಮವನ್ನು ವರದರಾಜ ದೇವಾಲಯದಲ್ಲಿ ನೆರವೇರಿಸಿದ್ದೇನೆ. 2023 ರ ವಿಧಾನಸಭಾ ಚುನಾವಣೆ ವೇಳೆ ನಾನು ವರದರಾಜ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೆ. ಜೊತೆಗೆ ತಮಿಳುನಾಡಿನ ಅನೇಕ ದೇವಾಲಯಗಳಿಗೂ ಭೇಟಿ ಕೊಟ್ಟಿದ್ದೆ. ದೇವರ ಅನುಗ್ರಹದಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸಾಧನೆ ಮಾಡಿತು ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News