ಬೆಂಗಳೂರು : ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ಪೊಲೀಸರು ಅವರನ್ನು ಒದ್ದು ಒಳಗೆ ಹಾಕುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.


COMMERCIAL BREAK
SCROLL TO CONTINUE READING

ಹಿಮಾಚಲ ಪ್ರದೇಶಕ್ಕೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ನಿನ್ನೆ ವಿಧಾನಸೌಧದಲ್ಲಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿಯವರು ಇದನ್ನು ತಿರುಚುತ್ತಿದ್ದಾರೆ. ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ಈ ರೀತಿ ಮಾಡುತ್ತಿದ್ದಾರೆ ಎಂದರು.


ಇದನ್ನೂ ಓದಿ:ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು!


ಅಲ್ಲದೆ, ಈ ವಿಚಾರವಾಗಿ ತನಿಖೆ ಮಾಡುವಂತೆ ನಾವು ಸೂಚಿಸಿದ್ದೇವೆ. ತನಿಖೆ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಸುಳ್ಳು ಹಬ್ಬಿಸಿದ್ದರೆ, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


ಹಿಮಾಚಲ ಪ್ರದೇಶಕ್ಕೆ ವೀಕ್ಷರಾಗಿ ತೆರಳುತ್ತಿರುವ ಬಗ್ಗೆ ಕೇಳಿದಾಗ, ನಾನು ಅಲ್ಲಿಗೆ ಹೋಗುವ ಬಗ್ಗೆ ಕಾಂಗ್ರೆಸ್ ಪಕ್ಷ ನನಗೆ ಸೂಚನೆ ನೀಡಿದ್ದು, ಅದರಂತೆ ತೆರಳುತ್ತಿದ್ದೇನೆ. ಎರಡು ಮೂರು ರಾಜ್ಯಗಳಲ್ಲಿ ಸರ್ಕಾರ ಕೆಡವಲು  ಬಿಜೆಪಿ ಆತುರದಲ್ಲಿದೆ. ಪ್ರಜಾಪ್ರಭುತ್ವದಲ್ಲಿ ಬಲಿಷ್ಠ ವಿರೋಧ ಪಕ್ಷ ಇರಬೇಕು. ಈ ದೇಶದಲ್ಲಿ ಕೆಟ್ಟ ಸಂಪ್ರದಾಯವನ್ನು ಬಿಜೆಪಿ ಪಾಲಿಸುತ್ತದೆ. ನಮ್ಮ ಪಕ್ಷದ ಎಲ್ಲಾ ಶಾಸಕರು ನಮ್ಮ ಜತೆಯೇ ಇರುತ್ತಾರೆ. ಪಕ್ಷಕ್ಕೆ ನಿಷ್ಠರಾಗಿ ಇರುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ