ಬೆಂಗಳೂರು : ದೇಶಾದ್ಯಂತ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸಲು ಮೂಲಭೂತ ಹಕ್ಕಾದ ಶಿಕ್ಷಣವನ್ನು ಉತ್ತಮ ರೀತಿಯಲ್ಲಿ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆ, ಆ ಮೂಲಕ ಮಕ್ಕಳ ಮೇಲಾಗುವ ವ್ಯತಿರಿಕ್ತ ಪರಿಣಾಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಡಿ.ಕೆ ಶಿವಕುಮಾರ್ ಬಿಡುಗಡೆಗೊಳಿಸಿರುವ ವಿಡಿಯೋದಲ್ಲಿ ಕರ್ನಾಟಕದ ಪ್ರಸ್ತುತ ಶಿಕ್ಷಣ ಪರಿಸ್ಥಿತಿಯ ಮೇಲೆ ಬೆಳಕು ಚೆಲ್ಲಲಾಗಿದೆ. ಶಿಕ್ಷಣ ಇಲಾಖೆ ಏಕೀಕೃತ ಜಿಲ್ಲಾ ಶಿಕ್ಷಣ ವ್ಯವಸ್ಥೆ (ಯುಡಿಎಸ್ಇ+) ವರದಿಯನ್ನು ಬಿಡುಗಡೆ ಮಾಡಿದ್ದು, ವರದಿಯಲ್ಲಿ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಹೆಚ್ಚಿದ್ದರೂ ಶಿಕ್ಷಕರ ಸಂಖ್ಯೆ ಕಡಿಮೆಯಿರುವುದು ಉಲ್ಲೇಖವಾಗಿದೆ. ಇದು ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುವುದರಲ್ಲಿ ಅನುಮಾನವಿಲ್ಲ.


ಇದನ್ನೂ ಓದಿ : ಸರ್ಕಾರಿ ಶಾಲೆ ಏಕಲವ್ಯರು... ಹಿರಿಯರನ್ನು ನೋಡಿ ದೊಣ್ಣೆವರಸೆ ಕಲಿತ ವಿದ್ಯಾರ್ಥಿಗಳು..!


ರಾಜ್ಯದಲ್ಲಿ ಒಟ್ಟು ಶಾಲೆಗಳ ಸಂಖ್ಯೆ 76,450. ಅದರಲ್ಲಿ 49,679 ಸರ್ಕಾರಿ ಶಾಲೆಗಳು, 7,110 ಸರ್ಕಾರಿ ಅನುದಾನಿತ ಶಾಲೆಗಳು, 19,650 ಖಾಸಗಿ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳಿವೆ. ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ 2021ರಲ್ಲಿ 1.18 ಕೋಟಿ ಇದ್ದದ್ದು 2022ರ ವೇಳೆಗೆ 1.20 ಕೋಟಿಯಾಗಿದೆ. 2021-22ನೇ ಸಾಲಿನಲ್ಲಿ 8 ಲಕ್ಷಕ್ಕೂ ಹೆಚ್ಚು ಹೊಸ ವಿದ್ಯಾರ್ಥಿನಿಯರು ದಾಖಲಾಗುವುದರ ಜೊತೆಗೆ ಇದೇ ಸಾಲಿನಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಸಿಡಬ್ಲ್ಯೂಎಸ್ಎನ್ ಅಡಿಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.


2020-21 ಯುಡಿಐಎಸ್ಇ+ ವರದಿಗೆ ಹೋಲಿಸಿದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ 2.08 ಲಕ್ಷದಿಂದ 1.99 ಲಕ್ಷಕ್ಕೆ ಇಳಿಕೆಯಾಗಿದ್ದು, ಪ್ರಾಥಮಿಕ ಹಂತದಲ್ಲಿ ಸುಮಾರು 23 ವಿದ್ಯಾರ್ಥಿಗಳಿಗೆ ಓರ್ವ ಶಿಕ್ಷಕರು ಇರುವಂತಾಗಿರುವುದು ಕಳವಳಕಾರಿಯಾಗಿದೆ.


ವಿಧಾನಸಭೆ ಚುನಾವಣೆ 2023: ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಕೊರತೆ!; ಕೈ ಪಾಲಯದ ತಂತ್ರ ಏನು?


ಇನ್ನು, ಶಿವಮೊಗ್ಗ ಜಿಲ್ಲೆಯಲ್ಲಿ 2,001 ಸರ್ಕಾರಿ ಶಾಲೆಗಳಿದ್ದು, 11,842 ತರಗತಿ ಕೊಠಡಿಗಳಿವೆ. ಅವುಗಳಲ್ಲಿ ಸುಮಾರು 2,000 ತರಗತಿ ಕೊಠಡಿಗಳಿಗೆ ನಿರ್ವಹಣಾ ಕಾರ್ಯದ ಅಗತ್ಯವಿದೆ. ದಾವಣಗೆರೆ ಜಿಲ್ಲೆಯಲ್ಲಿ ಬಹಳಷ್ಟು ಕೊಠಡಿಗಳು ತರಗತಿ ನಡೆಸಲು ಯೋಗ್ಯವಾಗಿಲ್ಲ. ಜಿಲ್ಲೆಯಲ್ಲಿ 72 ತರಗತಿ ಕೊಠಡಿಗಳನ್ನು ಕೆಡವಲು ಗುರುತಿಸಲಾಗಿದೆ. ಚಿತ್ರದುರ್ಗದ ಸರ್ಕಾರಿ ಬಾಲಕರ ಪ್ರೌಢಶಾಲೆ ಮತ್ತು ಜೂನಿಯರ್ ಕಾಲೇಜು ಕಟ್ಟಡ ಯಾವಾಗ ಬೀಳುತ್ತದೆಯೋ ಗೊತ್ತಿಲ್ಲ.


ಈ ಎಲ್ಲ ಅಂಶಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಬಿಡುಗಡೆಗೊಳಿಸಿರುವ ವಿಡಿಯೋದಲ್ಲಿ ವಿವರವಾಗಿ ತಿಳಿಸಲಾಗಿದ್ದು, ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲಾಗಿದೆ. ಅಲ್ಲದೇ 2023ರಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಶಾಲೆಗಳ ಪರಿಸ್ಥಿತಿಯನ್ನು ಸುಧಾರಿಸುವುದು ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.