ಬೆಂಗಳೂರು : ಮುಂದಿನ ದಿನಗಳಲ್ಲಿ ಹೊಸ ಮೆಟ್ರೊ ಮಾರ್ಗಗಳನ್ನು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.


COMMERCIAL BREAK
SCROLL TO CONTINUE READING

ಜಯನಗರದ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ವರೆಗೆ ಡಬಲ್ ಡೆಕ್ಕರ್ ಮಾರ್ಗದಲ್ಲಿ ವಾಹನಗಳ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡುವ ಮುನ್ನ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಇಂದಿನ ದಿನಗಳಲ್ಲಿ ಭೂಸ್ವಾಧೀನ ಮಾಡಿಕೊಳ್ಳುವುದು ಕಷ್ಟದ ಕೆಲಸ. ಡಬಲ್ ಡೆಕ್ಕರ್ ಮಾದರಿಯಿಂದ ಸಂಚಾರ ದಟ್ಟಣೆ ಸೇರಿದಂತೆ ಅನೇಕ ಉಪಯೋಗಗಳಿವೆ. ಹೆಚ್ಚು ಖರ್ಚಾದರೂ ಈ ಮಾದರಿ ಬೆಂಗಳೂರಿಗೆ ಅನುಕೂಲ ಎಂದರು.


ಪ್ರಸ್ತುತ ಐದು ಕಾಲು ಕಿ.ಮೀ ಉದ್ದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಸುಮಾರು 450  ಕೋಟಿ ರೂಪಾಯಿ ಖರ್ಚಾಗಿದೆ. ಈಗಿನ ಲೆಕ್ಕಾಚಾರ ನೋಡಿದರೆ ಹೆಚ್ಚೇನಿಲ್ಲ‌ ನಾನು, ಮುಖ್ಯಮಂತ್ರಿಗಳು ಹಾಗೂ ರಾಮಲಿಂಗಾರೆಡ್ಡಿ ಅವರು ಅನೇಕ ವಿಚಾರಗಳನ್ನು ಚರ್ಚೆ ನಡೆಸಿದ್ದೇವೆ. ಬೆಂಗಳೂರಿನಲ್ಲಿ 100 ಕಿ.ಮೀ ಉದ್ದ ಸಿಗ್ನಲ್‌ ಫ್ರೀ ಕಾರಿಡಾರ್ ಮಾಡಲು 120- 150 ಕೋಟಿ ಖರ್ಚಾಗುತ್ತದೆ ಎಂದು ಅಧಿಕಾರಿಗಳು ಅಂದಾಜು ವೆಚ್ಚ ತಿಳಿಸಿದ್ದಾರೆ‌. ವಿಶ್ವದರ್ಜೆ ಗುಣಮಟ್ಟದ ಡಬಲ್ ಡೆಕ್ಕರ್ ನಿರ್ಮಾಣ ಮಾಡಿದ್ದೇವೆ. ಬಿಬಿಎಂಪಿ ಮತ್ತು ಬಿಎಂಆರ್ ಸಿಎಲ್ ಈ ಯೋಜನೆಯ ವೆಚ್ಚವನ್ನು ಹಂಚಿಕೊಳ್ಳುತ್ತಾರೆ" ಎಂದರು.


ಇದನ್ನೂ ಓದಿ:ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಯಿಂದಲೇ ಬಿಲ್‌ ಬಾಕಿ


5, 745 ಕೋಟಿ ವೆಚ್ಚದಲ್ಲಿ ಪೇಸ್ 2 ಯೋಜನೆ : ಹೊಸೂರು ರಸ್ತೆ ಕಡೆ ತೆರಳುವ ಸುಮಾರು ಶೇ 30 ರಷ್ಟು ನಾಗರೀಕರಿಗೆ ಡಬಲ್ ಡೆಕ್ಕರ್ ನಿಂದ ಉಪಯೋಗವಾಗಲಿದೆ. ಎಲೆಕ್ಟ್ರಾನಿಕ್ ಸಿಟಿ, ಎಚ್ ಎಸ್, ಆರ್ ಲೇಔಟ್, ಮಹದೇವಪುರ ವಾಸಿಗಳಿಗೆ ಬಹಳ ಅನುಕೂಲವಾಗಲಿದೆ. 5 ಪಥಗಳುಳ್ಳ ಸುಮಾರು 9.5 ಕಿಮೀ ಉದ್ದವಿರುವ 5,745 ಕೋಟಿ ವೆಚ್ಚದಲ್ಲಿ ಆರ್ ವಿ ನಗರ ಮಹದೇವಪುರ ಎಲಿವೇಟೆಡ್ ಪೇಸ್ 2 ಯೋಜನೆಯನ್ನು ಜಾರಿಗೆ ಕಾರ್ಯಕ್ರಮ ರೂಪಿಸಲಾಗಿದೆ" ಎಂದರು.


ರಾಮಲಿಂಗರೆಡ್ಡಿ ಮಾದರಿ ಜಾರಿ : ಡಬಲ್ ಡೆಕ್ಕರ್ ಮಾದರಿಯನ್ನು ಅಧ್ಯಯನ ಮಾಡಲು ರಾಜ್ಯದಿಂದ ಅಧಿಕಾರಿಗಳ ತಂಡವನ್ನು ನಾಗ್ಪುರಕ್ಕೆ ಕಳುಹಿಸಿದ್ದೇ. ಈ ಸಾಕ್ಷಿ ಗುಡ್ಡೆ ನಿರ್ಮಾಣವಾಗಲು ಹಿಂದೆ ಇರುವ ಶಕ್ತಿ ರಾಮಲಿಂಗಾರೆಡ್ಡಿ ಅವರು. ಬೆಂಗಳೂರಿನಲ್ಲಿ ಎಲ್ಲೆಲ್ಲಿ ಈ ಯೋಜನೆ ಜಾರಿಯಾದರೂ ಅದನ್ನು ರಾಮಲಿಂಗಾರೆಡ್ಡಿ ಮಾಡೆಲ್ ಎಂದು ಹೇಳುತ್ತೇನೆ. ಬೆಂಗಳೂರು ಅಭಿವೃದ್ಧಿ ಸಚಿವನಾಗಿದ್ದೇನೆ. ಈ ಸ್ಥಾನದಲ್ಲಿ ಕಳೆದ ಆಡಳಿತ ಅವಧಿಯಲ್ಲಿ ರಾಮಲಿಂಗಾರೆಡ್ಡಿ ಅವರು ಹಾಗು ಬಿಎಂಆರ್ ಸಿಎಲ್ ಎಂಡಿಯಾಗಿ ಕೊರೊಲಾ ಇದ್ದರು. ಇವರಿಬ್ಬರು ಚರ್ಚೆ ನಡೆಸಿ ಹೊಸತನದ  ಡಬಲ್ ಡೆಕ್ಕರ್ ಮಾಡಲ್ ಅನ್ನು ಪರಿಚಯಿಸಿದರು. ಇದನ್ನು ಉದ್ಘಾಟನೆ ಮಾಡುವ ಭಾಗ್ಯ ನನ್ನದಾಗಿದೆ. ನಾನು ನಾಗ್ಪುರದಲ್ಲಿ ಈ ಮಾದರಿಯನ್ನು ನೋಡಿಕೊಂಡು ಬಂದಿದ್ದೇ" ಎಂದು ತಿಳಿಸಿದರು. 


ಇದನ್ನೂ ಓದಿ:ಕಸ ವಿಲೇವಾರಿಗೆ ಜಾಗ ನಿಗದಿಯಾಗದೇ ಟೆಂಡರ್ ನೀಡಲು ಹೇಗೆ ಸಾಧ್ಯ: ಡಿಸಿಎಂ ಡಿ.ಕೆ. ಶಿವಕುಮಾರ್


ಡಬಲ್ ಡೆಕ್ಕರ್ ಯೋಜನೆಯ ಉಪಯೋಗ ತಿಳಿಯಲು ಜನರು ಮೇಲೆ ಹಾಗೂ ಕೆಳಗೆ ಸಂಚರಿಸಿ ಅನುಭವ ಪಡೆಯಬೇಕು. ಈ ಯೋಜನೆ ವೀಕ್ಷಿಸಲು ನೂತನ ಕೇಂದ್ರ ಸಚಿವರಾದ ಮನೋಹರ್ ಲಾಲ್ ಖಟ್ಟರ್ ಅವರಿಗೂ ಮನವಿ ಮಾಡಲಾಗುವುದು. ಪ್ರಾಯೋಗಿಕ ಸಂಚಾರ ನಡೆಸಿದ ಮೇಲೆ ಒಂದಷ್ಟು ಕುಂದುಕೊರತೆಗಳು ತಿಳಿಯುತ್ತವೆ. ಇದೆಲ್ಲವನ್ನು ಬಗೆಹರಿಸಿ ಜನರ ಓಡಾಟಕ್ಕೆ ಮುಕ್ತಗೊಳಿಸಲಾಗುವುದು ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.