ಚನ್ನಪಟ್ಟಣ : ನಾವು ಮೂಲತಃ ಬೆಂಗಳೂರಿನವರು. ಬೆಂಗಳೂರು ಎಂಬುದು ನಮ್ಮ ಗುರುತು ಹಾಗೂ ನಮ್ಮ ಸ್ವಾಭಿಮಾನ. ಇದನ್ನು ನಾವು ಕಳೆದುಕೊಳ್ಳಬಾರದು. ಹೀಗಾಗಿ ಬಿಜೆಪಿ ಮತ್ತು ಜೆಡಿಎಸ್ ಏನಾದರೂ ಟೀಕೆ ಮಾಡಲಿ ಈ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಿಯೇ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.


COMMERCIAL BREAK
SCROLL TO CONTINUE READING

ಚನ್ನಪಟ್ಟಣದಲ್ಲಿ ಶುಕ್ರವಾರ ನಡೆದ ಸರ್ಕಾರಿ ನೌಕರರ ಸಂಘದ ಸಮ್ಮೇಳನದಲ್ಲಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು, ಜಿಲ್ಲೆಯ ಹೆಸರು ಮಾತ್ರ ಬದಲಾಗುತ್ತದೆ ಹೊರತು ರಾಮನಗರದ ಹೆಸರು, ಆಡಳಿತ ಕೇಂದ್ರ ಹಾಗೆಯೇ ಉಳಿಯಲಿದೆ. ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ, ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಮಾಡಲಾಗುತ್ತದೆ. ನಾನು ಜಿಲ್ಲಾ ಪರಿಷತ್ ಸದಸ್ಯನಾಗಿದ್ದಾಗ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಷತ್ ಎಂದು ಇತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾಗಿತ್ತು. ಆಡಳಿತಾತ್ಮಕವಾಗಿ ಪ್ರತ್ಯೇಕ ಜಿಲ್ಲೆ ಮಾಡುವಾಗ ಬೆಂಗಳೂರು ಹೆಸರನ್ನು ಕಳೆದುಕೊಳ್ಳುವುದು ಬೇಡ ಎಂದು ಸಲಹೆ ನೀಡಿದ್ದೆ. 


ಇದನ್ನೂ ಓದಿ:ಲೋಕಾಯುಕ್ತ ದಾಳಿ : 2 ಕೆಜಿ ಚಿನ್ನವನ್ನ ಪಕ್ಕದ ಮನೆಗೆ ಎಸೆದ ಭ್ರಷ್ಟ ಅಧಿಕಾರಿ ಪುತ್ರಿ


ನನ್ನನ್ನು ದೊಡ್ಡಾಲಹಳ್ಳಿ ಕೆಂಪೇಗೌಡನ ಮಗ ಶಿವಕುಮಾರ್ ಎಂದು ಗುರುತಿಸಿಕೊಳ್ಳುತ್ತೇವೆ. ದೇವೇಗೌಡರು ಕೂಡ ತಮ್ಮ ಹೆಸರಿನಲ್ಲಿ ತಮ್ಮ ಊರು, ತಂದೆಯ ಹೆಸರನ್ನು ಇಟ್ಟುಕೊಂಡಿದ್ದಾರೆ. ಎಲ್ಲರೂ ಕೂಡ ಈ ರೀತಿ ತಮ್ಮ ಮೂಲ ಗುರುತನ್ನು ಉಳಿಸಿಕೊಳ್ಳುತ್ತಾರೆ. ನಾವು ಯಾಕೆ ನಮ್ಮ ಬೆಂಗಳೂರು ಗುರುತನ್ನು ಬಿಟ್ಟುಕೊಡಬೇಕು? ಕನಕಪುರ ಲೋಕಸಭೆ ಕ್ಷೇತ್ರವನ್ನು ಬೆಂಗಳೂರು ಗ್ರಾಮಾಂತರ ಎಂದು ಮರು ನಾಮಕರಣ ಮಾಡಿದ್ದು ಏಕೆ? ಬೆಂಗಳೂರು ಎಂಬುದು ಒಂದು ಬ್ರ್ಯಾಂಡ್. ಅದು ನಮ್ಮ ಹೆಗ್ಗುರುತು. ಅದನ್ನು ನಾವು ಏಕೆ ಕಳೆದುಕೊಳ್ಳಬೇಕು? ನಮ್ಮ ಈ ಗುರುತನ್ನು ಉಳಿಸಿಕೊಳ್ಳಲು ನಾವು ಪ್ರಯತ್ನಿಸುತ್ತಿದ್ದು, ನಾನು ಇದನ್ನು ಮಾಡೇ ಮಾಡುತ್ತೇನೆ.


2003ರಲ್ಲಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಬೆಂಗಳೂರಿಗೆ ಬಂದು, ‘ಇಷ್ಟು ದಿನಗಳ ಕಾಲ ವಿಶ್ವದ ನಾಯಕರು ಮೊದಲು ದೆಹಲಿಗೆ ಬಂದು ನಂತರ ದೇಶದ ಇತರೆ ನಗರಗಳಿಗೆ ಹೋಗುತ್ತಿದ್ದರು. ಈಗ ಮೊದಲು ಬೆಂಗಳೂರಿಗೆ ಬಂದು ನಂತರ ದೇಶದ ಬೇರೆ ನಗರಗಳಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದ್ದರು. ಅಲ್ಲದೆ, ಬಿಜೆಪಿ ಹಾಗೂ ಜೆಡಿಎಸ್ ನವರು ಏನಾದರೂ ಟ್ವೀಟ್ ಮಾಡಲಿ, ಟೀಕೆ ಮಾಡಲಿ, ನಮ್ಮ ಸ್ವಾಭಿಮಾನವನ್ನು ನಾವು ಬಿಡುವ ಪ್ರಶ್ನೆಯೇ ಇಲ್ಲ. ಜನ ನಮ್ಮ ನಿರ್ಧಾರದಿಂದ ಸಂತೋಷವಾಗಿದ್ದಾರೆ ಎಂದು ಡಿಸಿಎಂ ಹೇಳಿದರು..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.