ಯತ್ನಾಳ್ ಮಾನಸಿಕ ಅಸ್ವಸ್ಥ, ಹುಚ್ಚಾಸ್ಪತ್ರೆ ಸೇರಬೇಕಿರುವ ವ್ಯಕ್ತಿ : ಡಿಸಿಎಂ ಡಿಕೆಶಿ ಗುಡುಗು
ನಾವು ಜಾರಿಗೆ ತಂದಿರುವ ಜನಪರ ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಕ್ಷದವರಿಂದ ಮಾಡಲು ಆಗಲಿಲ್ಲ. ಅಕ್ಕ-ತಂಗಿ, ತಂದೆ-ಮಗ, ಅಪ್ಪ-ಮಕ್ಕಳ ನಡುವೆ ಜಗಳ ತಂದಿಟ್ಟು, ಭಾವನೆಗಳ ಮೇಲೆ ಆಟವಾಡುವುದೇ ಅವುಗಳ ಕೆಲಸ ಎಂದು ರಾಜ್ಯ ಬಿಜೆಪಿ ವಿರುದ್ಧ ಡಿಸಿಎಂ ಗುಡುಗಿದರು..
ಬೆಂಗಳೂರು : ಮಾನಸಿಕವಾಗಿ ಅಸ್ವಸ್ಥರಾಗಿರುವ, ಹುಚ್ಚಾಸ್ಪತ್ರೆ ಸೇರಬೇಕಿರುವ ವ್ಯಕ್ತಿಗಳ ಹೇಳಿಕೆಗಳ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಸನಗೌಡ್ ಪಾಟೀಲ್ ಯತ್ನಾಳ್ ವಿರುದ್ಧ ಕಿಡಿಕಾರಿದರು.
ಕಂಠೀರವ ಸ್ಟೇಡಿಯಂ ಬಳಿ ಮಾಧ್ಯಮಗಳಿಗೆ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.. ಈ ವೇಳೆ ವಕ್ಫ್ ವಿಚಾರವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿಗೆ ಪತ್ರ ಬರೆದಿರುವ ವಿಚಾರ ಕೇಳಿದಾಗ, ಮಾನಸಿಕವಾಗಿ ಅಸ್ವಸ್ಥರಾಗಿರುವ, ಹುಚ್ಚಾಸ್ಪತ್ರೆ ಸೇರಬೇಕಿರುವ ವ್ಯಕ್ತಿಗಳ ಹೇಳಿಕೆಗಳ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.
ನಾವು ಜಾರಿಗೆ ತಂದಿರುವ ಜನಪರ ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಕ್ಷದವರಿಂದ ಮಾಡಲು ಆಗಲಿಲ್ಲ. ಅಕ್ಕ-ತಂಗಿ, ತಂದೆ-ಮಗ, ಅಪ್ಪ-ಮಕ್ಕಳ ನಡುವೆ ಜಗಳ ತಂದಿಟ್ಟು, ಭಾವನೆಗಳ ಮೇಲೆ ಆಟವಾಡುವುದೇ ಅವುಗಳ ಕೆಲಸ. ಹೀಗೆ ಮಾಡಿ ಎಷ್ಟೋ ಮನೆಗಳನ್ನು ಒಡೆದು ಹಾಕಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಇದನ್ನೂ ಓದಿ:ರಾಜ್ಯ ಸರಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ: ಬಿ.ವೈ ವಿಜಯೇಂದ್ರ
ಮಲ್ಲಿಕಾರ್ಜುನ ಖರ್ಗೆ ಅವರು ಗ್ಯಾರಂಟಿ ವಿಚಾರವಾಗಿ ಗುರವಾರ ಪ್ರಸ್ತಾಪಿಸಿದ ಮಾತುಗಳ ಬಗ್ಗೆ ಕೇಳಿದಾಗ, ವಿರೋಧ ಪಕ್ಷದವರಿಗೆ ರಾಜಕೀಯ ಹೊರತಾಗಿ ಯಾವ ವಿಚಾರಗಳೂ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಸಂಸಾರಗಳನ್ನು ಹಾಳು ಮಾಡುತ್ತವೇ ಎಂದು ಹೇಳಿದ್ದರು. ಆದರೆ ಅವರು ಹೇಳಿದಂತೆ ಆಗಲಿಲ್ಲ. ನಮ್ಮ ಕೆಲಸಗಳನ್ನು ನೋಡಿ, ಹೊಟ್ಟೆಕಿಚ್ಚು ಪಡುತ್ತಿದ್ದಾರೆ ಎಂದರು.
ಹಿರಿಯರ ಬುದ್ಧಿ ಮಾತು ಕೇಳಬೇಕು : ಮಲ್ಲಿಕಾರ್ಜುನ ಖರ್ಗೆಯವರು ಹಿರಿಯರು. ಅವರು ಬುದ್ಧಿಮಾತು ಹೇಳಿದರೆ ನಾವು ಕೇಳಬೇಕು. ನಾನು ಶಕ್ತಿ ಯೋಜನೆ ವಿಚಾರವಾಗಿ ಹೇಳಿರುವ ಮಾತುಗಳನ್ನು ಮತ್ತೊಮ್ಮೆ ಎಲ್ಲರು ಕೇಳಿಸಿಕೊಂಡು ನೋಡಿ ಎಂದರು.
ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ : ಶಕ್ತಿ ಯೋಜನೆ ಕುರಿತು ಶೇ. 5-10 ರಷ್ಟು ಮಹಿಳೆಯರ ಅಭಿಪ್ರಾಯಗಳನ್ನು ನಾನು ಹೇಳಿದನೇ ಹೊರತು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಒಂದಷ್ಟು ಜನ ಮಹಿಳೆಯರು ಟಿಕೆಟ್ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರೂ ಬಸ್ ನಿರ್ವಾಹಕರು ಹಣ ತೆಗೆದುಕೊಳ್ಳಲು ಹೆದರುತ್ತಿದ್ದಾರೆ. ಇದರ ಬಗ್ಗೆ ಯೋಚನೆ ಮಾಡಬೇಕು ಎಂದು ಹೇಳಿದ್ದೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಯತ್ನಾಳ್ ಅವರಿಗೆ ಹಿಂದೂ -ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು
ಶೇ 70 ರಷ್ಟು ಸಂಸ್ಥೆಗಳಿಂದ ಆಚರಣೆ : ಈ ಬಾರಿ ರಾಜ್ಯೋತ್ಸವ ಕಾರ್ಯಕ್ರಮ ಮಾಡುವಂತೆ ಎಲ್ಲಾ ಖಾಸಗಿ ಸಂಸ್ಥೆಗಳು ಹಾಗೂ ವಿದ್ಯಾ ಸಂಸ್ಥೆಗಳಿಗೆ ಸೂಚನೆ ನೀಡಲಾಗಿತ್ತು. ಶೇಕಡಾ 70 ರಷ್ಟು ಸಂಸ್ಥೆಗಳು ಈ ಕಾರ್ಯಕ್ರಮ ಮಾಡಿವೆ. ಸರ್ಕಾರದ ವತಿಯಿಂದ ಮೊದಲ ಹಂತದಲ್ಲಿ ಈ ಆದೇಶ ನೀಡಿದ್ದೇವೆ. ಎಲ್ಲರೂ ಸ್ವಯಂ ಪ್ರೇರಿತರಾಗಿ ಭಾಷೆ ಹಾಗೂ ಸಂಸ್ಕೃತಿ ಕಾಪಾಡಿಕೊಂಡು ಹೋಗಲು ಸೂಚಿಸಿದ್ದೆವು. ಖಾಸಗಿ ಸಂಸ್ಥೆಗಳ ವಿರುದ್ಧ ಕಾನೂನು ಕೈಗೆತ್ತಿಕೊಳ್ಳದಂತೆ ನಾವು ನಿರ್ದೇಶನ ನೀಡಿದ್ದೆವು ಎಂದರು.
ಕನ್ನಡಕ್ಕೆ ಅಪಮಾನ ಮಾಡುವವರ ವಿರುದ್ಧ ನಾಡದ್ರೋಹದ ಕಾನೂನು ಕ್ರಮ ಕೈಗೊಳ್ಳುವ ಕಾಯ್ದೆ ತರಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, ನಮ್ಮ ರಾಜ್ಯದಲ್ಲಿ ಬೇರೆ ದೇಶ ಹಾಗೂ ರಾಜ್ಯಗಳ ಜನ ಬಂದು ಬದುಕು ನಡೆಸುತ್ತಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳು, ಅದರಲ್ಲೂ ಕ್ರೈಸ್ತ ಶಿಕ್ಷಣ ಸಂಸ್ಥೆಗಳು ಬಹಳ ಶ್ರದ್ಧೆಯಿಂದ ರಾಜ್ಯೋತ್ಸವವನ್ನು ಆಚರಣೆ ಮಾಡಿವೆ ಎಂದು ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ