ಬೆಂಗಳೂರು: ಚುನಾವಣೆಯಲ್ಲಿ ಸೋಲುವ ಭಯದಿಂದ ಬಿಜೆಪಿ ಸರ್ಕಾರವು ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮವನ್ನು ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಈ ಬಗ್ಗೆ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
‘ಮತದಾನದ ಹಕ್ಕು ಮೂಲಭೂತ ಹಕ್ಕಾಗಿದ್ದು, ಅದನ್ನು ಕಸಿಯುವ ಉದ್ದೇಶದಿಂದ ಈ ಅಕ್ರಮ ನಡೆಸಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಮಂತ್ರಿಗಳು ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲುವ ಭಯದಿಂದ ಬಿಜೆಪಿ ಸರ್ಕಾರ ಇಂತಹ ಅಕ್ರಮಕ್ಕೆ ಮುಂದಾಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆ, ಮತದಾರರಿಗೆ ಮಾಡಿರುವ ಅಪಮಾನ’ವೆಂದು ಡಿಕೆಶಿ ಕಿಡಿಕಾರಿದ್ದಾರೆ.
ಮತದಾನದ ಹಕ್ಕು ಮೂಲಭೂತ ಹಕ್ಕಾಗಿದ್ದು ಅದನ್ನು ಕಸಿಯುವ ಉದ್ದೇಶದಿಂದ ಈ ಅಕ್ರಮ ನಡೆಸಲಾಗಿದೆ.
ಮುಖ್ಯಮಂತ್ರಿಗಳು ಹಾಗೂ ಮಂತ್ರಿಗಳು ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ.
ಚುನಾವಣೆಯಲ್ಲಿ ಸೋಲುವ ಭಯದಿಂದ ಬಿಜೆಪಿ ಸರ್ಕಾರ ಇಂತಹ ಅಕ್ರಮಕ್ಕೆ ಮುಂದಾಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆ, ಮತದಾರರಿಗೆ ಮಾಡಿರುವ ಅಪಮಾನ.
- @DKShivakumar pic.twitter.com/JrPsYkoHCF— Karnataka Congress (@INCKarnataka) November 18, 2022
ಇದನ್ನೂ ಓದಿ: ಮತದಾರರ ಪಟ್ಟಿ ಪರಿಷ್ಕರಣೆ ʼಕಾಂತಾರʼದ ಗುಳಿಗ-ಪಂಜುರ್ಲಿಯ ದಂತಕತೆ ಅಲ್ಲ
‘ಮತದಾರರ ಪಟ್ಟಿ ಅಕ್ರಮ ಪರಿಷ್ಕರಣೆ ಪ್ರಕರಣದ ಎಲ್ಲಾ ತಪ್ಪಿತಸ್ಥರನ್ನು ತಕ್ಷಣ ಬಂಧಿಸಬೇಕು. ಇಲ್ಲದಿದ್ದರೆ ಈ ವಿಚಾರವಾಗಿ ನಾವು ದೆಹಲಿ ಮಟ್ಟದಲ್ಲೂ ಹೋರಾಟ ನಡೆಸುತ್ತೇವೆ. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸುಮೊಟೊ ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡುತ್ತೇನೆ’ ಅಂತಾ ಡಿಕೆಶಿ ಹೇಳಿದ್ದಾರೆ.
ಮತದಾರರ ಪಟ್ಟಿ ಅಕ್ರಮ ಪರಿಷ್ಕರಣೆ ಪ್ರಕರಣದ ಎಲ್ಲಾ ತಪ್ಪಿತಸ್ಥರನ್ನು ತಕ್ಷಣ ಬಂಧಿಸಬೇಕು.
ಇಲ್ಲದಿದ್ದರೆ ಈ ವಿಚಾರವಾಗಿ ನಾವು ದೆಹಲಿ ಮಟ್ಟದಲ್ಲೂ ಹೋರಾಟ ನಡೆಸುತ್ತೇವೆ.
ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸುಮೊಟೊ ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡುತ್ತೇನೆ.
- @DKShivakumar pic.twitter.com/d9DH46uCSR— Karnataka Congress (@INCKarnataka) November 18, 2022
‘ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆ, ಮತದಾರರ ಮಾಹಿತಿ ಸಂಗ್ರಹ ಗಂಭೀರ ಅಪರಾಧ. ಚುನಾವಣಾ ಆಯೋಗವು ಈ ಪ್ರಕರಣವನ್ನು ಡಿವಿಸಿಗೆ ನೀಡಿದ್ದು, ಇದು ಡಿವಿಸಿಯಿಂದ ತನಿಖೆಯಾಗುವ ವಿಚಾರವಲ್ಲ. ನಾಳೆ ಮಧ್ಯಾಹ್ನ ಚುನಾವಣಾ ಆಯೋಗದ ಅಧಿಕಾರಿಗಳನ್ನು ನಾನು, ಸಿದ್ದರಾಮಯ್ಯನವರು ಹಾಗೂ ಪಕ್ಷದ ಇತರೆ ನಾಯಕರು ಭೇಟಿ ಮಾಡಲಿದ್ದೇವೆ’ ಅಂತಾ ಡಿಕೆಶಿ ಹೇಳಿದ್ದಾರೆ.
ಇದನ್ನೂ ಓದಿ: “ಅವರಿಗೆ ಅಪಮಾನವಾಗಿದ್ದರೆ ಮಾನನಷ್ಟ ಮೊಕದ್ದಮೆ ಹಾಕಲಿ”
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.