ರಾಜಕೀಯ ದ್ವೇಷದಿಂದ ನಮ್ಮ ಧ್ವನಿ ಅಡಗಿಸಲು ಸಾಧ್ಯವಿಲ್ಲ: ಡಿಕೆಶಿ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ 1 ರೂಪಾಯಿಯೂ ದುರ್ಬಳಕೆಯಾಗಿಲ್ಲ. ಈ ಪ್ರಕರಣ ಮುಗಿದ ಅಧ್ಯಾಯ. ಹೀಗಾಗಿ ಈಗ ವಿಚಾರಣೆಗೆ ಕರೆದಿರುವುದೇ ತಪ್ಪು ಎಂದು ಡಿಕೆಶಿ ಹೇಳಿದ್ದಾರೆ.
ನವದೆಹಲಿ: ರಾಜಕೀಯ ದ್ವೇಷದಿಂದ ಸುಳ್ಳು ಪ್ರಕರಣ ದಾಖಲಿಸಿ ಕಾಂಗ್ರೆಸ್ ಪಕ್ಷದ ಧ್ವನಿ ಅಡಗಿಸಲು ಸಾಧ್ಯವಿಲ್ಲ’ವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಂಗಳವಾರ ಮಾತನಾಡಿದ ಅವರು, ‘ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಕಚೇರಿ ಮೇಲೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಸುತ್ತಿದೆ. ಪಕ್ಷದ ಕಚೇರಿ ನಮಗೆ ದೇವಾಲಯವಿದ್ದಂತೆ. ಆದರೆ, ಕೇಂದ್ರ ಸರ್ಕಾರ ಪೊಲೀಸರನ್ನು ಬಳಸಿಕೊಂಡು ಅಲ್ಲಿಗೆ ಯಾರೂ ಬರಬಾರದು, ಅಲ್ಲಿ ಯಾರೂ ಸೇರುವಂತಿಲ್ಲವೆಂದು ದಬ್ಬಾಳಿಕೆ ನಡೆಸುತ್ತಿದೆ. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಲು ಇಲ್ಲಿಗೆ ಬಂದಿದ್ದೇವೆ. ಇಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದು, ಅದರ ಬಗ್ಗೆಯೂ ನಮಗೆ ಅರಿವಿದೆ’ ಎಂದು ಹೇಳಿದ್ದಾರೆ.
‘ಸೂರ್ಯ ಹುಟ್ಟುತ್ತಾನೆ, ಮುಳುಗುತ್ತಾನೆ. ಅದೇ ರೀತಿ ಎಲ್ಲರಿಗೂ ರಾಜಕೀಯದಲ್ಲಿ ದಿನಗಳು ಬದಲಾಗುತ್ತವೆ. ಬಿಜೆಪಿಯವರು ಇದನ್ನು ಅರ್ಥ ಮಾಡಿಕೊಂಡಂತೆ ಕಾಣುತ್ತಿಲ್ಲ. ಏನೇ ಆದರೂ ನಾವು ನಮ್ಮ ನಾಯಕರ ಜೊತೆ ಇರುತ್ತೇವೆ. ಕಷ್ಟಕಾಲದಲ್ಲಿ ಅವರ ಜೊತೆಗೆ ನಿಂತು ಧೈರ್ಯ ತುಂಬುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇವೆ’ ಎಂದು ಡಿಕೆಶಿ ಹೇಳಿದ್ದಾರೆ.
ಇದನ್ನೂ ಓದಿ: Answer Madi Modi: ಪ್ರಧಾನಿ ಮೋದಿಗೆ ಸಿದ್ದರಾಮಯ್ಯರಿಂದ ಪ್ರಶ್ನೆಗಳ ಸುರಿಮಳೆ
‘ನಮ್ಮ ಸಂಸದರು ಈಗಾಗಲೇ ಜಂತರ್‍ಮಂತರ್‍ನಲ್ಲಿ ಪ್ರತಿಭಟನೆ ಮಾಡಿದ್ದಾರೆ. ಅವರನ್ನು ಬಂಧಿಸಿ 3 ದಿನ ದೆಹಲಿಯ ಹೊರಗಿರುವ ಠಾಣೆಯಲ್ಲಿ ಇಟ್ಟಿದ್ದರು. ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಏಕೈಕ ಸಂಸದರನ್ನು ಪೊಲೀಸರು ಯಾವ ರೀತಿ ನಡೆಸಿಕೊಂಡಿದ್ದಾರೆಂದು ನೋಡಿದ್ದೇವೆ. ನಮ್ಮ ನಾಯಕರು, ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಯಾವ ರೀತಿ ನಡೆಸಿಕೊಂಡಿದ್ದಾರೆಂಬುದು ಎಲ್ಲರಿಗೂ ಗೊತ್ತಿದೆ. ಯುವ ಕಾಂಗ್ರೆಸ್ ಅಧ್ಯಕ್ಷರು ಹೋರಾಟ ಮಾಡದೇ ಇನ್ಯಾರು ಮಾಡಲು ಸಾಧ್ಯ? ಅವರು ದೇಶದ ಯುವಕರ ಪ್ರತಿನಿಧಿ. ಸರ್ಕಾರ ಇವರೆಲ್ಲರಿಗೂ ಯಾವ ರೀತಿ ಕಿರುಕುಳ ನೀಡುತ್ತಿದೆ? ರಾಹುಲ್ ಗಾಂಧಿ ಅವರನ್ನು 40 ತಾಸು ವಿಚಾರಣೆ ಮಾಡುವುದೇನಿತ್ತು? ಇದರಲ್ಲಿ ಷಡ್ಯಂತ್ರವಿದೆ’ ಎಂದು ಡಿಕೆಶಿ ಗುಡುಗಿದ್ದಾರೆ.
ಬೆಂಗಳೂರಿನಲ್ಲೊಂದು ಹೃದಯಸ್ಪರ್ಶಿ ಘಟನೆ: ತಾಯಿ-ಮಗಳನ್ನು ಒಂದು ಮಾಡಿದ ಪೊಲೀಸರು
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ 1 ರೂಪಾಯಿಯೂ ದುರ್ಬಳಕೆಯಾಗಿಲ್ಲ. ಈ ಪ್ರಕರಣ ಮುಗಿದ ಅಧ್ಯಾಯ. ಹೀಗಾಗಿ ಈಗ ವಿಚಾರಣೆಗೆ ಕರೆದಿರುವುದೇ ತಪ್ಪು. ಕೇವಲ ಕಾಂಗ್ರೆಸ್ ನಾಯಕರ ವಿರುದ್ಧದ ಪ್ರಕರಣದ ವಿಚಾರಣೆ ಮಾತ್ರ ಯಾಕೆ? ಬೇರೆ ಪ್ರಕರಣಗಳ ವಿಚಾರಣೆ ಯಾಕಿಲ್ಲ?’ ಎಂದು ಡಿಕೆಶಿ ಪ್ರಶ್ನಿಸಿದರು.
ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ‘10 ಶಾಸಕರು ಸೂರತ್‍ನಲ್ಲಿದ್ದಾರೆ ಎಂದು ಯಾರೋ ಕರೆ ಮಾಡಿ ಹೇಳಿದ್ದಾರೆ. ಆದರೆ ನನಗೆ ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಾನು ಮಹಾರಾಷ್ಟ್ರದ ಉಸ್ತುವಾರಿಯೂ ಅಲ್ಲ. ನಾನು ಕರ್ನಾಟಕದಲ್ಲಿ ಪಕ್ಷದ ಅಧ್ಯಕ್ಷನಾಗಿದ್ದು, ರಾಜ್ಯಕ್ಕೆ ಸಂಬಂಧಿಸಿದ ವಿಚಾರ ಇದ್ದರೆ ಆ ಬಗ್ಗೆ ಮಾತ್ರ ಮಾತನಾಡುತ್ತೇನೆ’ ಎಂದು ಹೇಳಿದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.