ಕುಮಾರಸ್ವಾಮಿ NDAಯಿಂದ ಆಚೆ ಬಂದು ನನಗೆ ಬೆಂಬಲ ನೀಡುವ ಬಗ್ಗೆ ಮಾತನಾಡಲಿ: ಡಿಕೆಶಿ ತಿರುಗೇಟು
ನಮಗೂ ಎನ್‌ಡಿಎಗೂ ಸಂಬಂಧವಿಲ್ಲ. ಅದರಿಂದ ಹೊರ ಬಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನನಗೆ ಬಂಬಲೆ ನೀಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರು : ಕುಮಾರಸ್ವಾಮಿ ಅವರು ಎನ್‌ಡಿಎ ಮೈತ್ರಿಕೂಟದವವರು. ನಮಗೂ ಎನ್‌ಡಿಎಗೂ ಸಂಬಂಧವಿಲ್ಲ. ಮೊದಲು ಅದರಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ. ಅವರು ಬೆಂಬಲ ನೀಡುವ ಕಾಲದಲ್ಲೇ ಬೆಂಬಲ ನೀಡಲಿಲ್ಲ. ಈಗೇನು ಬೆಂಬಲ ನೀಡುತ್ತಾರೆ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
ಶಿವಕುಮಾರ್ ಅವರು ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ 19 ಶಾಸಕರ ಬೆಂಬಲ ನೀಡುತ್ತೇವೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ಕುಮಾರಕೃಪಾ ಅತಿಥಿ ಗೃಹದ ಬಳಿ ಶನಿವಾರ ಕೇಳಿದಾಗ ಈ ರೀತಿ ಉತ್ತರಿಸಿದರು.
ಇದನ್ನೂ ಓದಿ: ಮಳೆ ಬರಲಿ- ರೈತರು, ಕೂಲಿ ಕಾರ್ಮಿಕರಿಗೆ ವಧು ಸಿಗಲೆಂದು ಯುವಕರ ಪಾದಯಾತ್ರೆ
ಕುಮಾರಸ್ವಾಮಿ ಅವರ ಮಾತು ಕೇಳಿ ಬಹಳ ಸಂತೋಷವಾಗಿದೆ. ಸದ್ಯ ನಮಗೆ ರಾಜ್ಯದ ಜನತೆ 136 ಸೀಟು ಜತೆ ಅಧಿಕಾರ ಕೊಟ್ಟಿದ್ದಾರೆ. ಅವರು ಉತ್ತಮ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ತಿದ್ದುವ ಕೆಲಸ ಮಾಡಲಿ. ಟೀಕೆ ಮಾಡುವುದನ್ನು ಬಿಟ್ಟು, ಸರ್ಕಾರವನ್ನು ತಿದ್ದಲಿ. ಕಾಂಗ್ರೆಸ್ ಹಾಗೂ ಬಿಜೆಪಿ ತಲಾ ಒಂದೊಂದು ಬಾರಿ ಅವರನ್ನು ಮುಖ್ಯಮಂತ್ರಿ ಮಾಡಿದೆ. ಅವರ ತಂದೆಯವರನ್ನು ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಿದೆ. ಅವರಿಗಿರುವ ಅಪಾರ ಅನುಭವದ ಮೂಲಕ ನಮಗೆ ಮಾರ್ಗದರ್ಶನ ನೀಡಲಿ. ಈಗ ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಅವರ ಪ್ರೀತಿ ವಿಶ್ವಾಸಕ್ಕೆ ನಮಸ್ಕಾರ ಎಂದು ತಿಳಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.