ಬೆಂಗಳೂರು : ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದು, ಅವರಿಗೆ ಧನ್ಯವಾದಗಳು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ನಿವಾಸಿಗಳ ಭೇಟಿ ಬಳಿಕ ಮಾಧ್ಯಮಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು. ಬರ ಪರಿಹಾರ ವಿಳಂಬಕ್ಕೆ ಚುನಾವಣಾ ಆಯೋಗ ಕಾರಣ ಎಂಬ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ ಅವರು ಪ್ರತಿಕ್ರಿಯಿಸಿದರು.
ಇದನ್ನೂ ಓದಿ:ಲಕ್ಷಾಂತರ ಅಭಿಮಾನಿಗಳ ರಾಕ್‌ಸ್ಟಾರ್ ಇನ್ನಿಲ್ಲ.!
ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದರು.
ನಾವು ಬರ ಪರಿಹಾರ ನೀಡುವಂತೆ ಮನವಿ ನೀಡಿ ಎಷ್ಟು ತಿಂಗಳುಗಳಾಗಿವೆ? ನಾವು ಬರ ಪರಿಹಾರ ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗದ ನಿರ್ಬಂಧ ಇರಲಿಲ್ಲ. ಈಗ ಚುನಾವಣಾ ಆಯೋಗದ ನೆಪ ಹೇಳುತ್ತಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್‌ನ ತೆರಿಗೆ ಹೋರಾಟಕ್ಕೆ ನಿರ್ಮಲಾ ಸೀತಾರಾಮನ್ ಟಾಂಗ್
ಕೇಂದ್ರ ಸರ್ಕಾರದ ಅಕ್ಷಮ್ಯ ಅಪರಾಧದ ಬಗ್ಗೆ ಜನರಿಗೂ ಅರಿವಾಗಿದೆ. ಈ ಮೂಲಕ ಡಿ.ಕೆ. ಸುರೇಶ್ ಅವರ ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ಪಾಲಿನ ಹೋರಾಟ ಒಪ್ಪಿಕೊಂಡಿದ್ದಾರೆ. ಅವರಿಗೆ ಧನ್ಯವಾದಗಳು"
ಅಧಿಕಾರ ಇದ್ದಾಗ ಕುಮಾರಸ್ವಾಮಿ ಯಾಕೆ ಮಾಡಲಿಲ್ಲ?: ಮೇಕೆದಾಟು ಯೋಜನೆ ವಿಚಾರವಾಗಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಮಾತನಾಡಿ, ಇಲ್ಲಿನ ಜನರ ಕಷ್ಟಕ್ಕೆ ಪರಿಹಾರ ನೀಡಿ ಧೈರ್ಯ ತುಂಬುವವರು ನಾವು. ಬೇರೆ ಅಭ್ಯರ್ಥಿಗಳು ನಮ್ಮಂತೆ ಜನರಿಗೆ ಅಭಯ ನೀಡುವುದಿಲ್ಲ. ಕುಮಾರಸ್ವಾಮಿ ಅವರು ಈಗ ಮೇಕೆದಾಟು, ಮಹದಾಯಿ ಯೋಜನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ.
ಅಧಿಕಾರ ಇದ್ದಾಗ ಈ ವಿಚಾರದಲ್ಲಿ ಏನೂ ಮಾಡದವರು ಈಗ ಏನು ಮಾಡುತ್ತಾರೆ. ನಾನು ಮೇಕೆದಾಟು ಪಾದಯಾತ್ರೆ ಮಾಡುವಾಗ ಅವರು ಕೊಟ್ಟಿರುವ ಹೇಳಿಕೆ ನೋಡಿ. ನಮ್ಮ ಪಾದಯಾತ್ರೆ ಸಂದರ್ಭದಲ್ಲಿ ಕಬಾಬ್ ತಿನ್ನೋಕೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದಿದ್ದ ಕುಮಾರಸ್ವಾಮಿ ಅವರು ಈಗ ಪಾದಯಾತ್ರೆ ಬಗ್ಗೆ ಮಾತಾಡುತ್ತಿದ್ದಾರೆ. ಮಂಡ್ಯಕ್ಕೆ ಬಂದ ನಂತರ ಅವರಿಗೆ ಬಿಸಿ ತಟ್ಟಿರುವಂತೆ ಕಾಣುತ್ತಿದೆ.
ಇದನ್ನೂ ಓದಿ:ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿ ಅಂತಾ ಆಹ್ವಾನ ಬಂದಿತ್ತು: ವೀಣಾ ಕಾಶಪ್ಪನರ್
ನಾವು ಹೋರಾಟ ಮಾಡಿದ್ದು ರಾಜ್ಯದ ಜನತೆಗಾಗಿ. ರಾಜಕಾರಣದಲ್ಲಿ ಅದು ನಮ್ಮ ಬದ್ಧತೆ. ಅದನ್ನು ಅವರಿಂದ ಸಹಿಸಲು ಆಗಲಿಲ್ಲ. ಅವರು ಏನಾದರೂ ಮಾಡಿಕೊಳ್ಳಲಿ. ಕಾವೇರಿ ಜಲಾನಯನ ಪ್ರದೇಶದ ಜನರಿಗೆ, ಬೆಂಗಳೂರು ಜನರಿಗೆ ಕುಡಿಯುವ ನೀರು ಪೂರೈಸಲು ನಾನು ನೀರಾವರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ.
ನಾನು ಕೊಟ್ಟ ಮಾತಿನಂತೆ ನಡೆಯುತ್ತೇನೆ ಎಂದು ಜನರಿಗೆ ನಂಬಿಕೆ ಇದೆ. ಅವರ ನಂಬಿಕೆಗೆ ತಕ್ಕಂತೆ ನಡೆಯುತ್ತೇನೆ. ಇದು ಮತದಾರರಿಗೆ ಮನವರಿಕೆಯಾಗಿದೆ ಎಂದು ತಿಳಿಸಿದರು. ಅಲ್ಲದೆ, ಬೆಂಗಳೂರಿನಲ್ಲಿ ಕೆ.ಎಚ್ ಮುನಿಯಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅವರ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ. ಅದರ ಬಗ್ಗೆ ತಿಳಿದು ಮಾತನಾಡುತ್ತೇನೆ ಎಂದು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.