ಸಿಎಂ ಆಗಿದ್ದಾಗಲೇ ಚನ್ನಪಟ್ಟಣಕ್ಕೆ ಏನೂ ಮಾಡದ ಕುಮಾರಣ್ಣ ಈಗೇನು ಮಾಡುತ್ತಾರೆ: ಡಿಸಿಎಂ ಪ್ರಶ್ನೆ
ಕುಮಾರಸ್ವಾಮಿ ನಮ್ಮ ಕೈ ಬಿಟ್ಟು ಹೋಗಿದ್ದಾರೆ ಎಂದು ಜನರಿಗೆ ಅರಿವಾಗಿದೆ. ಆ ಕ್ಷೇತ್ರದಲ್ಲಿ ಅವರು ಎರಡು ಬಾರಿ ನಿಂತರು, ಅವರ ಧರ್ಮಪತ್ನಿಯವರನ್ನು ನಿಲ್ಲಿಸಿದರು. ಈಗ ನಿರೀಕ್ಷೆಯಂತೆ ತಮ್ಮ ಪುತ್ರನನ್ನೂ ನಿಲ್ಲಿಸಿದ್ದಾರೆ. ಅವರು ಕಾರ್ಯಕರ್ತರಿಗೆ ಟಿಕೆಟ್ ನೀಡುವುದಿಲ್ಲ ಎಂದು ನಮಗೆ ಮುಂಚಿತವಾಗಿ ಖಚಿತವಾಗಿ ಗೊತ್ತಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ಇದ್ದಾಗಲೇ ತಾನು ಪ್ರತಿನಿಧಿಸುತ್ತಿದ್ದ ಚನ್ನಪಟ್ಟಣ ಕ್ಷೇತ್ರದ ಜನರಿಗೆ ಕುಮಾರಣ್ಣ ಏನೂ ಮಾಡಲಿಲ್ಲ. ಈಗ ಈ ಕ್ಷೇತ್ರದ ಶಾಸಕ ಸ್ಥಾನವೂ ಇಲ್ಲದಿರುವಾಗ ಅವರು ಏನು ತಾನೇ ಮಾಡಲು ಸಾಧ್ಯ? ಇದು ಕ್ಷೇತ್ರದ ಜನರಿಗೂ ಚನ್ನಾಗಿ ಗೊತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಇಂದು ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ, ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಕೇಳಿದಾಗ, ನಾವು ಚುನಾವಣೆಗಾಗಿ ಚನ್ನಪಟ್ಟಣದಲ್ಲಿ ಕೆಲಸ ಮಾಡುತ್ತಿಲ್ಲ. ಅಲ್ಲಿ ಶಾಸಕ ಸ್ಥಾನ ತೆರವಾದಾಗಿನಿಂದಲೂ ನಾನು ಹಾಗೂ ರಾಮಲಿಂಗಾರೆಡ್ಡಿ ಅವರು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ:ಒಳಮೀಸಲಾತಿ ಜಾರಿಗೆ ವಿರುದ್ಧವಾಗಿದ್ದೇವೆ ಎಂಬ ಆರೋಪ ಸತ್ಯಕ್ಕೆ ದೂರ: ಗೃಹ ಸಚಿವ ಜಿ.ಪರಮೇಶ್ವರ
ಆ ಕ್ಷೇತ್ರದ ಜನರ ಮನೆ ಬಾಗಿಲಿಗೆ ಸರ್ಕಾರ ಹೋಗಿ ಅವರ ಕಷ್ಟಗಳನ್ನು ಆಲಿಸಿದೆ. ಪಂಚಾಯ್ತಿ ವ್ಯಾಪ್ತಿಯಲ್ಲಿ ಜನರ ಸಮಸ್ಯೆ ಕೇಳಲು ಕಾರ್ಯಕ್ರಮ ಮಾಡಿದಾಗ ಸುಮಾರು 22 ಸಾವಿರ ಕುಟುಂಬಗಳು ಅರ್ಜಿ ಸಲ್ಲಿಸಿವೆ. ತಮಗೆ ಮನೆ, ನಿವೇಶನ ನೀಡಿಲ್ಲ, ಬಗರ್ ಹುಕ್ಕುಂ ಸಾಗುವಳಿ ಸಭೆ ಮಾಡಿಲ್ಲ, ರಸ್ತೆ ಇಲ್ಲ. ನಮ್ಮ ಕಷ್ಟ ಕೇಳಲು ಈ ಹಿಂದೆ ಶಾಸಕರಾಗಿದ್ದ ಕುಮಾರಣ್ಣ ಬಂದಿಲ್ಲ ಎಂದು ಜನ ಸಮಸ್ಯೆ ಹೇಳಿಕೊಂಡರು. ಈ ಹಿನ್ನೆಲೆಯಲ್ಲಿ ನಾನು ಹಾಗೂ ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಚನ್ನಪಟ್ಟಣಕ್ಕೆ ₹500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿ ರಸ್ತೆ, ನೀರಾವರಿ ಯೋಜನೆಗೆ ಮುಂದಾಗಿದ್ದೇವೆ. ಇದರ ಜತೆಗೆ ಕ್ಷೇತ್ರದ ಜನರಿಗೆ 5 ಸಾವಿರ ಮನೆಗಳನ್ನು ಮಂಜೂರು ಮಾಡಲಾಗಿದೆ. ನಿವೇಶನ ಹಂಚಿಕೆ ಮಾಡಲು ಸರ್ಕಾರಿ ಜಾಗ ಗುರುತಿಸಿ ಬಡಾವಣೆ ನಿರ್ಮಾಣ ಕೆಲಸ ಮಾಡುತ್ತಿದ್ದೇವೆ. ಹಕ್ಕುಪತ್ರ ನೀಡುವ ಹಂತಕ್ಕೆ ಕೆಲಸ ಬಂದು ನಿಂತಿದೆ. ಇದರ ಜತೆಗೆ ಎಲ್ಲಾ ಗ್ರಾಮಗಳಲ್ಲಿ ಜಮೀನು ಖರೀದಿ ಮಾಡಲು ಮುಂದಾಗಿದ್ದೇವೆ ಎಂದು ವಿವರಿಸಿದರು.
ನಾವು ಚುನಾವಣೆಗಿಂತ ಕ್ಷೇತ್ರದ ಜನರ ಬದುಕು ಬದಲಾವಣೆ ಮಾಡುವತ್ತ ಗಮನ ಹರಿಸುತ್ತಿದ್ದೇವೆ. ಕುಮಾರಸ್ವಾಮಿ ನಮ್ಮ ಕೈ ಬಿಟ್ಟು ಹೋಗಿದ್ದಾರೆ ಎಂದು ಜನರಿಗೆ ಅರಿವಾಗಿದೆ. ಆ ಕ್ಷೇತ್ರದಲ್ಲಿ ಅವರು ಎರಡು ಬಾರಿ ನಿಂತರು, ಅವರ ಧರ್ಮಪತ್ನಿಯವರನ್ನು ನಿಲ್ಲಿಸಿದರು. ಈಗ ನಿರೀಕ್ಷೆಯಂತೆ ತಮ್ಮ ಪುತ್ರನನ್ನೂ ನಿಲ್ಲಿಸಿದ್ದಾರೆ. ಅವರು ಕಾರ್ಯಕರ್ತರಿಗೆ ಟಿಕೆಟ್ ನೀಡುವುದಿಲ್ಲ ಎಂದು ನಮಗೆ ಮುಂಚಿತವಾಗಿ ಖಚಿತವಾಗಿ ಗೊತ್ತಿತ್ತು. ಅವರು ಏನಾದರೂ ಮಾಡಿಕೊಳ್ಳಲಿ, ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ಚನ್ನಪಟ್ಟಣ ತಾಲ್ಲೂಕಿನ ಜನತೆ ಬಗ್ಗೆ ನಮಗೆ ವಿಶ್ವಾಸವಿದೆ. ಅವರು ಈ ಬಾರಿ ನಮ್ಮ ಕೈ ಹಿಡಿಯಲಿದ್ದಾರೆ. ನಮ್ಮ ಸರ್ಕಾರ ಬಲಿಷ್ಠವಾಗಿದೆ. ಅವರ ಕಷ್ಟಕ್ಕೆ ಆಗುವವರು ನಾವು ಎಂದು ಜನರಿಗೂ ಗೊತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:ಒಳಮೀಸಲಾತಿ ಜಾರಿಗೆ ವಿರುದ್ಧವಾಗಿದ್ದೇವೆ ಎಂಬ ಆರೋಪ ಸತ್ಯಕ್ಕೆ ದೂರ: ಗೃಹ ಸಚಿವ ಜಿ.ಪರಮೇಶ್ವರ
ಯಾರಿಂದ ಬೇಕಾದರೂ ಪ್ರಚಾರ ಮಾಡಿಸಲಿ : ಯದುವೀರ್ ಅವರಿಂದ ಪ್ರಚಾರ ಮಾಡಿಸುತ್ತಿರುವ ಬಗ್ಗೆ ಕೇಳಿದಾಗ, ಅವರ ಪಕ್ಷದವರು ಅವರಿಗೆ ಬೇಕಾದವರಿಂದ ಪ್ರಚಾರ ಮಾಡಿಸಲಿ. ಅದರಲ್ಲಿ ತಪ್ಪಿಲ್ಲ. ಯದುವೀರ್ ಅವರು ಪ್ರಚಾರಕ್ಕೆ ಬರಬಾರದು ಎಂದು ನಾನ್ಯಾಕೆ ಹೇಳಲಿ? ಅವರ ಪಕ್ಷದ ನಾಯಕರು, ಕುಟುಂಬದವರು ಎಲ್ಲರೂ ಬರಲಿ. ನಮ್ಮ ಪರವಾಗಿ ಜನ ಇದ್ದಾರೆ. ನಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ ಎಂದು ತಿಳಿಸಿದರು.
ಕ್ಷೇತ್ರದಲ್ಲಿ ಪ್ರಬಲವಾಗಿರುವ ಒಕ್ಕಲಿಗರು ಕೈ ಹಿಡಿಯುತ್ತಾರಾ ಎಂದು ಕೇಳಿದಾಗ, ನಾವು ಜಾತಿ ಮೇಲೆ ರಾಜಕಾರಣ ಮಾಡುವುದಿಲ್ಲ. ನೀತಿ ಮೇಲೆ ರಾಜಕಾರಣ ಮಾಡುತ್ತೇವೆ. ಎಲ್ಲಾ ವರ್ಗದ ಜನರ ಪರವಾಗಿ ಕೆಲಸ ಮಾಡುತ್ತೇವೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕುರುಬರು, ತಿಗಳರು, ಬೆಸ್ತರು, ಮುಸಲ್ಮಾನರು, ಒಕ್ಕಲಿಗರು, ಆಚಾರರು ಸೇರಿದಂತೆ ಎಲ್ಲಾ ವರ್ಗದ ಜನ ಇದ್ದಾರೆ. ನಾವು ಎಲ್ಲರ ಪರವಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ:ಹೆಚ್ಎಂಟಿ ಜಾಗಕ್ಕೆ ಸಚಿವ ಈಶ್ವರ ಖಂಡ್ರೆ ಅತಿಕ್ರಮ ಪ್ರವೇಶ; ಹೆಚ್.ಡಿ.ಕುಮಾರಸ್ವಾಮಿ ಕಿಡಿ
ನ್ಯಾಯಾಲಯದ ತೀರ್ಮಾನ ಸ್ವಾಗತಿಸುತ್ತೇವೆ : ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಸಿಕ್ಕ ಬಗ್ಗೆ ಕೇಳಿದಾಗ, "ನ್ಯಾಯಾಲಯದ ತೀರ್ಪನ್ನು ನಾವು ಪ್ರಶ್ನೆ ಮಾಡುವುದಿಲ್ಲ. ನ್ಯಾಯಾಲಯದ ತೀರ್ಪನ್ನು ಸರ್ಕಾರ ಬಹಳ ಗೌರವದಿಂದ ಸ್ವಾಗತಿಸುತ್ತದೆ ಎಂದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ