ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಹೇಳಿದೆ. ಆದರೆ ನಮ್ಮ ಬಳಿಯೇ ನೀರಿಲ್ಲ, ಇನ್ನೂ ತಮಿಳುನಾಡಿಗೆ ಬಿಡುವುದು ಎಲ್ಲಿಂದ? ನಾವು ನೀರು ಬಿಡುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ್ದೇವೆ ಅಂತಾ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು “ಬುಧವಾರ ಅಥವಾ ಗುರುವಾರ ಕಾವೇರಿ ನೀರಾವರಿ ಪ್ರಾಧಿಕಾರದ ಸಭೆ ನಡೆಯಬಹುದು. ಅಲ್ಲಿ ನಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುತ್ತೇವೆ. ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚರ್ಚೆ ನಡೆಸಿ ನೀರು ಬಿಡಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲವೆಂಬ ತೀರ್ಮಾನಕ್ಕೆ ಬಂದಿದ್ದೇವೆ" ಎಂದರು.


ಇದನ್ನೂ ಓದಿ: ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 2 ದಿನ ಪ್ರಗತಿ ಪರಿಶೀಲನಾ ಸಭೆ


‘ತಮಿಳುನಾಡಿನವರು 12 ಸಾವಿರ ಕ್ಯೂಸೆಕ್ಸ್ ಬೇಡಿಕೆ ಇಟ್ಟಿದ್ದರು. ಅದನ್ನು 5 ಸಾವಿರ ಕ್ಯೂಸೆಕ್ಸ್‍ಗೆ ಇಳಿಸಿದ್ದಾರೆ. ಮೊದಲು ಕುಡಿಯುವ ನೀರಿಗೆ ಆದ್ಯತೆ ನೀಡಿ ನಂತರ ರೈತರಿಗೆ ಹರಿಸುವ ಬಗ್ಗೆ ಯೋಚನೆ ಮಾಡುತ್ತೇವೆ. ಬೆಂಗಳೂರಿಗೆ ಮಳೆ ಬಿದ್ದಾಗ ಆಶಾಭಾವನೆ ಮೂಡಿತ್ತು, ಈಗ ಮಳೆ ಬರದೆ ಸಂಕಷ್ಟ ಎದುರಾಗಿದೆ’ ಎಂದು ಡಿಕೆಶಿ ತಿಳಿಸಿದರು.


‘ಸುಪ್ರೀಂಕೋರ್ಟಿಗೆ ಅಫಿಡವಿಟ್ ಹಾಕಿದ್ದೆವು, ಅವರು ನಾವು ಮಧ್ಯಸ್ಥಿಕೆ ವಹಿಸುವುದಿಲ್ಲವೆಂದು ಎರಡೂ ರಾಜ್ಯಗಳಿಗೆ ತಿಳಿಸಿದ್ದಾರೆ. ವಾಸ್ತವಾಂಶವನ್ನು ಎಲ್ಲರಿಗೂ ತಿಳಿಸಿದ್ದೇವೆ. ದೆಹಲಿಯಲ್ಲಿರುವ ನಮ್ಮ ಕಾನೂನು ತಜ್ಞರ ಬಳಿ ಮಾತನಾಡುತ್ತೇನೆ. ನಾವು ಕದ್ದು ಮುಚ್ಚಿ ಏನನ್ನೂ ಮಾಡುತ್ತಿಲ್ಲ. ರಾಜ್ಯಕ್ಕೆ ಭೇಟಿ ನೀಡಿ ನಮ್ಮ ಪರಿಸ್ಥಿತಿ ನೋಡಿ’ ಎಂದು ಹೇಳಿದ್ದೇವೆ ಅಂತಾ ಡಿಕೆಶಿ ಹೇಳಿದರು.


ಇದನ್ನೂ ಓದಿ: ಸರ್ಕಾರ ನೀರು ಬಿಡುವುದಿಲ್ಲವೆಂದು ಗಟ್ಟಿಯಾಗಿ ನಿಂತರೆ ನಾವು ಜೊತೆ ನಿಲ್ಲುತ್ತೇವೆ: ಬಸವರಾಜ ಬೊಮ್ಮಾಯಿ


ಕಾವೇರಿ ನೀರಿನ ವಿಚಾರದಲ್ಲಿ ರಾಜಕಾರಣ ಮಾಡಲಾಗುತ್ತಿದೆಯೇ ಎನ್ನುವ ಪ್ರಶ್ನೆಗೆ “ನ್ಯಾಯಾಧೀಶರ ವಿರುದ್ದ ಹಾಗೂ ಸಮಿತಿಯಲ್ಲಿ ಹಿರಿಯ ಅಧಿಕಾರಿಗಳ ಆರೋಪ ಮಾಡುವುದು ತಪ್ಪು. ವಿರೋಧ ಪಕ್ಷದವರ ಬಗ್ಗೆ ಹೆಚ್ಚು ಹೇಳುವುದಿಲ್ಲ, ಸಹಕಾರ ಕೊಡಿ ಎಂದು ಕೇಳುತ್ತೇನೆ. ಜನ ನಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎನ್ನುವ ನಂಬಿಕೆ ಇದೆ" ಎಂದು ಡಿಕೆಶಿ ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.