ಬೆಂಗಳೂರು: ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ, ಸುದೀರ್ಘ ಚರ್ಚೆ ಬಳಿಕವೇ ನಿಗಮ‌  ಮಂಡಳಿಗಳಿಗೆ ನೇಮಕ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.


COMMERCIAL BREAK
SCROLL TO CONTINUE READING

ನಿಗಮ, ಮಂಡಳಿಗಳಿಗೆ ನೇಮಕ‌ ಪಟ್ಟಿಯಲ್ಲಿ ಕೆಲವರ ಹೆಸರು ಕೈಬಿಟ್ಟಿರುವುದಕ್ಕೆ ಅಸಮಾಧಾನ ಇದೆ, ಸಚಿವರುಗಳು ತಮ್ಮ ಅಭಿಪ್ರಾಯ ಕೇಳಿಲ್ಲ ಎಂದು ಹೇಳಿದರು. 
"ಈ ನೇಮಕದ ಬಗ್ಗೆ ಸಿದ್ದರಾಮಯ್ಯ ಅವರು, ನಾನು ಹಾಗೂ ಪ್ರಧಾನ ಕಾರ್ಯದರ್ಶಿಗಳು ಕೂತು ಚರ್ಚೆ ಮಾಡಿದ್ದೇವೆ. ಎಲ್ಲರ ಅಭಿಪ್ರಾಯವನ್ನು ಪಡೆದಿದ್ದೇವೆ. ಕೆಲವರು ಇಂತಹವರಿಗೆ ಸ್ಥಾನ ನೀಡಬೇಕು ಎಂಬ ಪಟ್ಟಿ ಕೊಟ್ಟಿದ್ದಾರೆ. ಆ ಪತ್ರವನ್ನು ನಿಮ್ಮ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. 


ಮಂತ್ರಿ ಆಗಬೇಕು, ದೊಡ್ಡ ಮಂಡಳಿಗಳು ಸಿಗಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಎರಡು ವರ್ಷಗಳ ನಂತರ ಮತ್ತೆ ಬದಲಾವಣೆ ಆಗುತ್ತದೆ. ಅವಧಿ ಮುಗಿದ ನಂತರ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದ್ದೇವೆ ಎಂದು ಹೇಳಿದರು. 


ಇದನ್ನೂ ಓದಿ: ಬಿಜೆಪಿ ಸಂಸದರನ್ನು ಗೆಲ್ಲಿಸುವಂತೆ ಜನರಿಗೆ ಕರೆ ನೀಡಿದ ಕಾಂಗ್ರೆಸ್‌ ಶಾಸಕ! 


ಪಕ್ಷ ಯಾವುದೇ ಹುದ್ದೆ ಕೊಟ್ಟರು ಸೇವೆ ಮಾಡಬೇಕು. ಯಾರೂ ಗಾಬರಿಯಾಗುವ ಅವಶ್ಯಕತೆಯಿಲ್ಲ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬ್ಲಾಕ್‌ ನಲ್ಲಿ ದುಡಿದಂತ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುತ್ತೇವೆ ಎಂದು ಹೇಳಿದರು. 


ಈಗ 39 ಜನ ಶಾಸಕರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಚುನಾವಣಾ ಸಮಯದಲ್ಲಿ ಕೆಲವರಿಗೆ ಮಾತು ಕೊಡಲಾಗಿತ್ತು. ಅದರಂತೆ ಒಂದಷ್ಟು ಜನರಿಗೆ ಹುದ್ದೆ ನೀಡಲಾಗಿದೆ. ಎಲ್ಲರನ್ನೂ ತೃಪ್ತಿ ಪಡಿಸಿದ್ದೇವೆ ಎಂದು ಹೇಳುವುದಿಲ್ಲ. ಪ್ರತಿ ಕ್ಷೇತ್ರದಲ್ಲಿ ಇಬ್ಬರು, ಮೂವರು ಆಕಾಂಕ್ಷಿಗಳಿದ್ದರು. ಪ್ರಸ್ತುತ ಕೆಲವರಿಗೆ ಅವಕಾಶ ನೀಡಲಾಗಿದೆ. ಮುಂದೆ ಉಳಿದವರಿಗೆ ಅವಕಾಶ ಕಲ್ಪಿಸಲಾಗುವುದು. ನಾವು ಎಲ್ಲರನ್ನೂ ಗೌರವಿಸಿ ಕೆಲಸ ಮಾಡಿದ್ದೇವೆ, ಮಾಡುತ್ತೇವೆ ಎಂದು ಹೇಳಿದರು. 


ಇನ್ನೂ ನೂರಾರು ಕಾರ್ಯಕರ್ತರಿಗೆ ಅವಕಾಶ ನೀಡಲು ಹುದ್ದೆಗಳನ್ನು ಸೃಷ್ಟಿ ಮಾಡಿದ್ದೇವೆ. ಕಾರ್ಯಕರ್ತರಿಗೆ ಸ್ಥಳೀಯ ಮಟ್ಟದಲ್ಲಿ ಆಸ್ಪತ್ರೆ ಸಮಿತಿ, ಬಗರ್‌ ಹುಕುಂ ಸಾಗುವಳಿ ಸಮಿತಿ, ಆಶ್ರಯ ಸಮಿತಿ, ಮುನಿಸಿಪಾಲಿಟಿ ಸೇರಿದಂತೆ ವಿವಿಧ ಸಮಿತಿಗಳಲ್ಲಿ ಅವಕಾಶ ನೀಡಲಾಗುವುದು. ಈ ವಿಚಾರದಲ್ಲಿ ಮಾಧ್ಯಮಗಳು ಅನಗತ್ಯ ಗೊಂದಲ ಮೂಡಿಸುವ ಪ್ರಶ್ನೆ ಕೇಳಿದರೆ ನಾನು ಕೇಳುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ಉತ್ತರ ನೀಡಿದ್ದಾರೆ ಎಂದು ಹೇಳಿದರು. 


ಇದನ್ನೂ ಓದಿ: ಹುಟ್ಟುವ ಮೊದಲೇ I.N.D.I.A ಒಕ್ಕೂಟ ಸತ್ತಿತ್ತು : ಪ್ರಹ್ಲಾದ ಜೋಶಿ ಟೀಕೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.