ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ: ಡಿ.ಕೆ. ಶಿವಕುಮಾರ್
ರಾಜ್ಯಸಭೆ ಚುನಾವಣೆ ಮತದಾನ ಮುಗಿದ ನಂತರ ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಅವರು ಮಾತನಾಡಿದರು. ನಮ್ಮ ಪಕ್ಷದ ಶಾಸಕರನ್ನು ಕಾಂಗ್ರೆಸ್ವರು ಹೈಜಾಕ್ ಮಾಡಿದ್ದಾರೆ ಎಂದು ಜೆಡಿಎಸ್ ಪಕ್ಷದ ಕುಮಾರಸ್ವಾಮಿ ಆರೋಪಿಸಿದ್ದರು. ಈ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ನಾವು ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯು ನಮಗಿಲ್ಲ. ಕಾಂಗ್ರೆಸ್ನ ಎಲ್ಲ 69 ಮಂದಿ ಪಕ್ಷಕ್ಕೇ ಮತ ನೀಡಿದ್ದಾರೆ. ಅದು ಸಮಾಧಾನದ ವಿಷಯ. ಬೇರೆ ಪಕ್ಷದ ವಿಚಾರ ನನಗೆ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಇದನ್ನೂ ಓದಿ: Airtel, Jio Or Vi: ನಿತ್ಯ ಡೇಟಾ ಲಿಮಿಟ್ ಖಾಲಿಯಾಯ್ತಾ? ಚಿಂತೆ ಬಿಟ್ಟು ಈ ಸುದ್ದಿಯನ್ನು ಓದಿ
ರಾಜ್ಯಸಭೆ ಚುನಾವಣೆ ಮತದಾನ ಮುಗಿದ ನಂತರ ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಅವರು ಮಾತನಾಡಿದರು. ನಮ್ಮ ಪಕ್ಷದ ಶಾಸಕರನ್ನು ಕಾಂಗ್ರೆಸ್ವರು ಹೈಜಾಕ್ ಮಾಡಿದ್ದಾರೆ ಎಂದು ಜೆಡಿಎಸ್ ಪಕ್ಷದ ಕುಮಾರಸ್ವಾಮಿ ಆರೋಪಿಸಿದ್ದರು. ಈ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ.
ನಾವು ಹೈಜಾಕ್ ಮಾಡಬೇಕು ಅಂತಿದ್ದರೆ ಅರ್ಧಡಜನ್ ಶಾಸಕರು ಇದ್ದರು. ಆದರೆ ನಮಗೆ ಅದರ ಅವಶ್ಯಕತೆ ಇಲ್ಲ. ಬೇರೆಯವರಿಗೆ ಮುಜುಗರ ಮಾಡುವುದು ನಮಗೆ ಬೇಕಿಲ್ಲ. ಅವರಿಗೆ ನಾವೇನು ಅಡ್ವೈಸ್ ಮಾಡಿದ್ದೇವೆ ಅಂತ ಬೇಕಿದ್ದರೆ ಅವರನ್ನೇ ಕೇಳಿ. ನಮ್ಮ ಪಕ್ಷದ 69 ಮಂದಿಗೆ ವಿಪ್ ನೀಡಿದ್ದೆವು. ಅವರೆಲ್ಲರೂ ನಮಗೇ ಮತಹಾಕಿದ್ದಾರೆ. ಅದನ್ನು ನಾನು ಕಣ್ಣಲ್ಲಿ ನೋಡಿದ್ದೇನೆ. ನನಗೆ ಅಷ್ಟು ಸಾಕು. ಬೇರೆಯವರ ವಿಚಾರ ನಾನು ಮಾತಾಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜೆಡಿಎಸ್ ಮುಖಂಡ ರೇವಣ್ಣ ನಿಮಗೆ ಮತಪತ್ರ ತೋರಿಸಿದರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಒಂದು ಪಕ್ಷದ ಮತಗಟ್ಟೆ ಎಜೆಂಟ್ ಆಗಿ ಗೌಪ್ಯ ಮತದಾನ ಪ್ರಕ್ರಿಯೆ ಬಗ್ಗೆ ಮಾತಾಡಲು ಹಕ್ಕಿಲ್ಲ. ಅದು ಸರಿಯೂ ಅಲ್ಲ. ನಾನು ಕಣ್ಣಲ್ಲಿ ಕಂಡಿದ್ದು ಮಾತ್ರ ಹೇಳಬಹುದು. ಬೇರೆ ಪಕ್ಷದ ಯಾರೂ ನನಗೆ ಮತಪತ್ರ ತೋರಿಸಿಲ್ಲ. ರೇವಣ್ಣನವರ ವಿಚಾರಕ್ಕೆ ಎರಡೂ ಪಕ್ಷದವರೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಗೌಪ್ಯ ಮತದಾನದ ಬಗ್ಗೆ ನಾನು ಮಾತಾಡುವುದಿಲ್ಲ, ಅದಕ್ಕೆ ನನಗೆ ಹಕ್ಕೂ ಇಲ್ಲ ಎಂದರು.
ಇದನ್ನೂ ಓದಿ: ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಕಾವ್ಯಾ ಶಾ-ವರುಣ್
ಶ್ರೀನಿವಾಸಗೌಡರವರು, "ಜೆಡಿಎಸ್ನ ಕೆಲವರು ಕಾಂಗ್ರೆಸ್ ಅಭ್ಯರ್ಥಿಗೇ ಮತ ಹಾಕಿದ್ದಾರೆ" ಎಂದಿದ್ದಾರೆ. ಈ ಸಂಬಂಧ ಹೇಳಿಕೆ ನೀಡಿರುವ ಅವರು, ಬೇರೆಯವರ ವಿಚಾರ ನನಗೆ ಗೊತ್ತಿಲ್ಲ. ನನಗೆ ಬೇರೆ ಯಾರೂ ಮತಪತ್ರ ತೋರಿಸಿಲ್ಲ. ಹೀಗಾಗಿ ನಾನು ಅದರ ಬಗ್ಗೆ ಮಾತಾಡುವುದಿಲ್ಲ. ಶ್ರೀನಿವಾಸಗೌಡರು ನಮ್ಮ ಉತ್ತಮ ಸ್ನೇಹಿತರು. ಬಹಳ ಬೇಕಾದವರು. ಅದರಲ್ಲಿ ಎರಡು ಮಾತಿಲ್ಲ. ಅಸೆಂಬ್ಲಿಯಲ್ಲಿ ನಾವು ಧರಣಿ ಮಾಡಿದಾಗ ನಮ್ಮ ಜತೆ ಕೂತಿದ್ದರು. ಹೋರಾಟ ಮಾಡಿದ್ದರು. ಲೋಕಲ್ ಬಾಡಿ ಚುನಾವಣೆಯಲ್ಲಿ ನಮಗೇ ಬಹಳ ಸಹಾಯ ಮಾಡಿದ್ದಾರೆ. ನಿನ್ನೆ ನನ್ನ ಮನೆಗೂ ಬಂದು ಭೇಟಿ ಮಾಡಿದ್ದರು. ಹಿಂದೆ ಆಫೀಸಿಗೂ ಬಂದಿದ್ದರು. ಆದರೆ ಮತದಾನದ ವಿಚಾರದಲ್ಲಿ ಆವರೇನು ಮಾಡಿದ್ದಾರೋ ಗೊತ್ತಿಲ್ಲ. ಆತ್ಮಸಾಕ್ಷಿಯಿಂದ ಮತ ನೀಡಿ ಎಂದು ಕೇಳಿದ್ದೆವು. ಅವರೇನು ಮಾಡಿದ್ದಾರೋ, ಬೇರೆಯವರು ಏನೂ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಗೊತ್ತಿಲ್ಲದ ವಿಚಾರ ಹೇಗೆ ಮಾತಾಡಲಿ ಎಂದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.