ನವದೆಹಲಿ: ಅಕ್ರಮ ಹಣ ವರ್ಗಾವಣೆ ಹಾಗೂ ಬೇನಾಮಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದು ಬುಧವಾರವೇ ಬಿಡುಗಡೆಗೊಂಡಿದ್ದರೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ತೆರಳದೆ ದೆಹಲಿಯಲ್ಲೇ ಬಿಡಾರಹೂಡಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರು ಮತ್ತು ವಕೀಲರ ಭೇಟಿಯಲ್ಲಿ ನಿರತರಾಗಿದ್ದಾರೆ. ಇಂದು ಬೆಂಗಳೂರಿಗೆ ತೆರಳಲಿದ್ದಾರೆ.


COMMERCIAL BREAK
SCROLL TO CONTINUE READING

ಗುರುವಾರ ರಾತ್ರಿ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಸಂಸದ ಡಿ.ಕೆ. ಸುರೇಶ್ ನಿವಾಸದಲ್ಲಿದ್ದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಧೈರ್ಯ ತುಂಬಿದರು.


ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ ಹಾಗೂ ದಯನ್ ಕೃಷ್ಣನ್ ಅವರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್ ಸುದೀರ್ಘವಾದ ಸಮಾಲೋಚನೆ ನಡೆಸಿದರು. ಇಂದು ಬೆಳಿಗ್ಗೆ 11.50ಕ್ಕೆ ಡಿ.ಕೆ. ಶಿವಕುಮಾರ್ ದೆಹಲಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.