ನವದೆಹಲಿ: ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಒಳಪಟ್ಟಿದ್ದ ರಾಜ್ಯದ ಪ್ರಭಾವಿ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ರಾತ್ರಿ ದೆಹಲಿಯಲ್ಲಿ ಬಂಧಿಸಿದ್ದು, ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಆಗಸ್ಟ್ 30(ಶುಕ್ರವಾರ) ದಿಂದ ಸುದೀರ್ಘ ವಿಚಾರಣೆ ಒಳಪಟ್ಟಿರುವ ಡಿ.ಕೆ.ಶಿವಕುಮಾರ್ ತನಿಖೆಗೆ ಸಹಕರಿಸುತ್ತಿಲ್ಲ, ಹಾಗಾಗಿ ಅವರ ಬಂಧನ ಅನಿವಾರ್ಯ ಎಂಬ ನಿರ್ಧಾರಕ್ಕೆ ಬಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. 


ಡಿ.ಕೆ. ಶಿವಕುಮಾರ್ ಅವರ ಬಂಧನದ ನಂತರ ಆರೋಗ್ಯ ತಪಾಸಣೆಗಾಗಿ ಅವರನ್ನು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಅವರಿಗೆ ಎದೆ ನೋವು, ರಕ್ತದೊತ್ತಡ ಹಾಗೂ ಶುಗರ್ ಹೆಚ್ಚಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.


ಬಿಪಿ, ಶುಗರ್ ಕಂಟ್ರೋಲ್ ಗೆ ಬರದ ಕಾರಣ ಡಿಕೆಶಿ ಅವರನ್ನು ಇಂದು ಮುಂಜಾನೆ ಆಸ್ಪತ್ರೆಯ ವಿಶೇಷ ವಿಐಪಿ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ವಿಶೇಷ ತಜ್ಞರ ತಂಡದಿಂದ ಡಿ.ಕೆ. ಶಿವಕುಮಾರ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.