ಇಂದು ದೆಹಲಿ ಹೈಕೋರ್ಟಿನಲ್ಲಿ ಡಿಕೆಶಿ ತಾಯಿ, ಪತ್ನಿ ಅರ್ಜಿ ವಿಚಾರಣೆ

ಡಿ.ಕೆ. ಶಿವಕುಮಾರ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಖಾನ್ ಮಾರ್ಕೆಟ್ ಬಳಿ ಇರುವ ಮುಖ್ಯ ಕಚೇರಿಯಲ್ಲಿ ಅಕ್ಟೋಬರ್ 17 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗೌರಮ್ಮ ಮತ್ತು ಉಷಾ ಅವರಿಗೆ ಸಮನ್ಸ್ ನೀಡಿದ್ದರು.

Last Updated : Oct 16, 2019, 07:25 AM IST
ಇಂದು ದೆಹಲಿ ಹೈಕೋರ್ಟಿನಲ್ಲಿ ಡಿಕೆಶಿ ತಾಯಿ, ಪತ್ನಿ ಅರ್ಜಿ ವಿಚಾರಣೆ

ನವದೆಹಲಿ: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೀಡಿರುವ ಸಮನ್ಸ್ ಅನ್ನು ರದ್ದುಗೊಳಿಸುವಂತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ತಾಯಿ  ಗೌರಮ್ಮ ಮತ್ತು ಪತ್ನಿ ಉಷಾ ಅವರು ಸಲ್ಲಿಸಿರುವ ಅರ್ಜಿಯನ್ನು ಮಂಗಳವಾರ ದೆಹಲಿ ಹೈಕೋರ್ಟ್ ಕೈಗೆತ್ತಿಕೊಳ್ಳಲಿದೆ.

ಡಿ.ಕೆ. ಶಿವಕುಮಾರ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಖಾನ್ ಮಾರ್ಕೆಟ್ ಬಳಿ ಇರುವ ಮುಖ್ಯ ಕಚೇರಿಯಲ್ಲಿ ಅಕ್ಟೋಬರ್ 17 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗೌರಮ್ಮ ಮತ್ತು ಉಷಾ ಅವರಿಗೆ ಸಮನ್ಸ್ ನೀಡಿದ್ದರು. ಈ ವಿಚಾರಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಗೌರಮ್ಮ ಮತ್ತು ಉಷಾ ದೆಹಲಿ ಹೈಕೋರ್ಟಿಗೆ ಮೊರೆ ಹೋಗಿದ್ದಾರೆ.

ಇದೇ ಡಿ.ಕೆ. ಶಿವಕುಮಾರ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಇತರೆ ಆರೋಪಿಗಳಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೀಡಿದ್ದ ಸಮನ್ಸ್ ಅನ್ನು ಕರ್ನಾಟಕ ಹೈಕೋರ್ಟ್ ತಡೆಹಿಡಿದು ಮಧ್ಯಂತರ ರಕ್ಷಣೆ ನೀಡಿತ್ತು. ಅಂದರೆ ಅವರನ್ನು ಬಂಧಿಸದಂತೆ ಸೂಚಿಸಿತ್ತು. ಇದೇ ಹಿನ್ನೆಲೆಯಲ್ಲಿ ತಮಗೂ ಮಧ್ಯಂತರ ರಕ್ಷಣೆ ಸಿಗಬಹುದೆಂದು ಗೌರಮ್ಮ ಮತ್ತು ಉಷಾ ದೆಹಲಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
 

More Stories

Trending News