ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಟಿ.ಜೆ.ಅಬ್ರಾಹಂ, ಸ್ನೇಹಜೀವಿ ಕೃಷ್ಣಾ ಹಾಗೂ ಪ್ರದೀಪ್ ಕುಮಾರ್ ಎಸ್​ಪಿ ಎಂಬವರು ನೀಡಿರುವ ದೂರಿನ ಮೇರೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌, ಈ ಪ್ರಾಸಿಕ್ಯೂಷನ್ ಕಾನೂನಿಗೆ ವಿರುದ್ಧವಾಗಿದೆʼ ಎಂದು ಹೇಳಿದ್ದಾರೆ.   


COMMERCIAL BREAK
SCROLL TO CONTINUE READING

ವಿಧಾನಸೌಧದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ʼ78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಮಾಡಿದ್ದೇವೆ. ರಾಜ್ಯಪಾಲರು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವಕ್ಕೆ ಮಾರಕವಾದ ಪತ್ರ ಕಳುಹಿಸಿದ್ದಾರೆ. ರಾಜ್ಯಪಾಲರ 26.7.2024ರ ನೋಟಿಸ್ ಸಂಬಂಧ ಏಪ್ರಿಲ್ 1ರಂದು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದೇವೆ. ಆ ದೂರಿನಲ್ಲಿ ತಿರುಳು ಇಲ್ಲ. ಸಂವಿಧಾನದ ಅಂಶಗಳನ್ನು ತಿಳಿ ತಿಳಿಯಾಗಿ ಹೇಳಿದ್ದೇವೆ. ಇದು ರಾಜಕೀಯ ಪಿತೂರಿ. ಮುಡಾ ಪ್ರಕರಣದಲ್ಲಿ ಯಾವುದೇ ಲೋಪದೋಷ ಆಗಿಲ್ಲ ಎಂದು ರಾಜ್ಯಪಾಲರಿಗೆ ತಿಳಿಸಿದ್ದೇವೆʼ ಎಂದು ತಿಳಿಸಿದ್ದಾರೆ. 


ಇದನ್ನೂ ಓದಿ: ದೇಶದ್ರೋಹಿಗಳು ದೇಶಪ್ರೇಮದ ಪಾಠ ಮಾಡುತ್ತಿರುವುದು ಇಂದಿನ ದುರಂತ: ಡಿಸಿಎಂ ಡಿ. ಕೆ. ಶಿವಕುಮಾರ್


ಸರ್ಕಾರ ರಾಜ್ಯಪಾಲರ ಕೈ ಕೆಳಗೆ ಕೆಲಸ ಮಾಡುತ್ತದೆ. ಸಂವಿಧಾನದ ಮೌಲ್ಯ ಎತ್ತಿ ಹಿಡಿಯಬೇಕು ಎಂದು ನಾವು ಕೆಲಸ ಮಾಡುತ್ತಿದ್ದೇವೆ. ಇಂದು ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಪತ್ರ ಕಳುಹಿಸಿದ್ದಾರೆ. ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡಬೇಕಾದರೆ ಪ್ರಕರಣದ ಸಂಬಂಧ ತನಿಖೆ ನಡೆಸಿ, ತನಿಖೆಯ ರಿಪೋರ್ಟ್ ಬಂದಿದ್ದರೆ ಅನುಮತಿ ನೀಡಬಹುದಾಗಿತ್ತು ಎಂದು ಡಿಕೆಶಿ ಹೇಳಿದ್ದಾರೆ.  



ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತದಲ್ಲಿ ತನಿಖೆ ನಡೆದಿದೆ. ಅವರ ವಿರುದ್ಧ ಲೋಕಾಯುಕ್ತ, ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಅನುಮತಿ ಕೋರಿ ಮನವಿ ಮಾಡಿದ್ದಾರೆ. ಅಕ್ರಮ ಗಣಿಗಾರಿಕೆ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಮನವಿ ಸಲ್ಲಿಸಿದ್ದರು. ಜನಾರ್ದನ ರೆಡ್ಡಿ, ಅಣ್ಣಾಸಾಹೇಬ ಜೊಲ್ಲೆ, ಮುರುಗೇಶ್‌ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಲಾಗಿತ್ತು. ಅದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆದರೆ ಈ ಪ್ರಕರಣದಲ್ಲಿ ದೂರು ಬಂದ ಒಂದೇ ದಿನದಲ್ಲಿ ರಾಜ್ಯಪಾಲರು ನೋಟಿಸ್ ಕಳುಹಿಸಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 136 ಶಾಸಕರ ಬಲದ ಮತ್ತು ರಾಜ್ಯದ ಜನರ ವಿರುದ್ಧದ ತೀರ್ಮಾನವಾಗಿದೆ ಎಂದು ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. 


ಇದನ್ನೂ ಓದಿ: ವೈದ್ಯರ ಮುಷ್ಕರ: ಗಡಿಜಿಲ್ಲೆ ಆಸ್ಪತ್ರೆಗಳಲ್ಲಿ ರೋಗಿಗಳ ಪರದಾಟ, ಚಿಕಿತ್ಸೆ ಸಿಗದೇ ವಾಪಾಸ್!!


ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡುತ್ತಿದ್ದಾರೆ. ಪ್ರಹ್ಲಾದ್ ಜೋಶಿ,‌ ಎಚ್‌.ಡಿ.ಕುಮಾರಸ್ವಾಮಿ ಈ ಸರ್ಕಾರ ಬೀಳಿಸುತ್ತೇವೆಂದು ಹೇಳಿಕೆ ನೀಡಿದ್ದಾರೆ. ಅದಕ್ಕೆ ಪೂರಕವಾಗಿ ಈ ಪೂರ್ವಾನುಮತಿ ನೀಡಲಾಗಿದೆ. ಇಡೀ ಸಂಪುಟ ಸಚಿವರು ಸಿಎಂ ಸಿದ್ದರಾಮಯ್ಯರ ಬೆನ್ನಿಗೆ ನಿಂತಿದ್ದಾರೆ. ಪಕ್ಷವೂ ಸಿಎಂ ಬೆನ್ನಿಗೆ ನಿಂತಿದೆ. ಯಾವುದೇ ಪ್ರಕರಣ ಇಲ್ಲ. ಅದರೂ ಸಿಎಂ ಮೇಲೆ ಕೇಸ್ ಮಾಡಿದ್ದಾರೆ. ಕಾನೂನು ರೀತಿಯ ಹೋರಾಟ ಮಾಡುತ್ತೇವೆ. ರಾಜಕೀಯವಾಗಿಯೂ ಹೋರಾಟ ಮಾಡುತ್ತೇವೆ. ಈ ಪ್ರಾಸಿಕ್ಯೂಷನ್ ಕಾನೂನಿಗೆ ವಿರುದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.