ದೇವೇಗೌಡರ ಅಳಿಯನವರೇ ಬೇರೆ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ : ದಳದ ಕಾರ್ಯಕರ್ತರು ಮುಂದಿನ ತೀರ್ಮಾನ ಮಾಡಬೇಕು:ಡಿ.ಕೆ.ಸುರೇಶ್

ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ ಕಾರ್ಯಕರ್ತರು ಚಿಂತನೆ ಮಾಡಬೇಕು ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.   

Written by - Ranjitha R K | Last Updated : Mar 14, 2024, 06:37 PM IST
  • ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ
  • ಜೆಡಿಎಸ್ ಕಾರ್ಯಕರ್ತರು ತಮ್ಮ ಮುಂದಿನ ತೀರ್ಮಾನ ಮಾಡಬೇಕು
  • ಮಂಜುನಾಥ್ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಬಗ್ಗೆ ಡಿಕೆಸು ಅಭಿಪ್ರಾಯ
ದೇವೇಗೌಡರ ಅಳಿಯನವರೇ ಬೇರೆ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ : ದಳದ ಕಾರ್ಯಕರ್ತರು ಮುಂದಿನ ತೀರ್ಮಾನ ಮಾಡಬೇಕು:ಡಿ.ಕೆ.ಸುರೇಶ್ title=

ರಾಮನಗರ : ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಿರುವಾಗ ಜೆಡಿಎಸ್ ಕಾರ್ಯಕರ್ತರು ತಮ್ಮ ಮುಂದಿನ ತೀರ್ಮಾನ ಮಾಡಬೇಕು ಎಂದು ಸಂಸದ ಡಿ.ಕೆ. ಸುರೇಶ್  ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಡಾ. ಮಂಜುನಾಥ್ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.   

ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ ಕಾರ್ಯಕರ್ತರು ಚಿಂತನೆ ಮಾಡಬೇಕು. ದೇವೇಗೌಡರ ಬುದ್ಧಿವಂತ ಅಳಿಯನವರೇ ಬೇರೆ ಪಕ್ಷ ಆಯ್ಕೆ ಮಾಡಿಕೊಂಡ ನಂತರ ಅವರ ಕಾರ್ಯಕರ್ತರು ಉಳಿದ ವಿಚಾರ ತೀರ್ಮಾನ ಮಾಡಬೇಕು ಎಂದು ವ್ಯಂಗ್ಯವಾಡಿದ್ದಾರೆ. 

ಇದನ್ನೂ ಓದಿ: ನೀವು ಮಂಜುನಾಥ್ ಅವರ ಸಾಧನೆಗೆ ಸಮನಲ್ಲ : ಡಿಕೆಸು ವಿರುದ್ಧ ಹೆಚ್‌ಡಿಕೆ ಗರಂ

ಡಾ. ಮಂಜುನಾಥ್ ರಾಜಕಾರಣಕ್ಕೆ ಬರುತ್ತಿರುವುದನ್ನು ನಾನು ಸ್ವಾಗತಿಸುತ್ತೇನೆ. ಅವರು ದೇವೇಗೌಡರ ಕುಟುಂಬದವರು.ಇದು ನನ್ನ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಜಕಾರಣಕ್ಕೆ ಹೊಸತೇನಲ್ಲ ಎಂದು ಡಿಕೆ ಸುರೇಶ್ ಹೇಳಿದ್ದಾರೆ. 

ದೇವೇಗೌಡರ ಅಳಿಯನವರು ಚುನಾವಣೆ ಕಣದಲ್ಲಿದ್ದಾರೆ.ದೇವೇಗೌಡರ ಸಲಹೆ ಏನಿದೆಯೋ ಗೊತ್ತಿಲ್ಲ. ಆದರೆ, ದೇವೇಗೌಡರು ಕಟ್ಟಿದ ಪಕ್ಷಕ್ಕೆ ಈಗ ಜನಪ್ರಿಯತೆ ಇಲ್ಲ ಎಂಬುದನ್ನು ಅವರ ಕುಟುಂಬದ ಹಿರಿಯ ಸದಸ್ಯರೇ ಸ್ಪಷ್ಟಪಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಜೆಡಿಎಸ್ ಪಕ್ಷ ಹಾಗೂ ಅವರ ನಾಯಕತ್ವಕ್ಕೆ ಅಸ್ತಿತ್ವವಿಲ್ಲ ಎಂದು ಅವರದೇ ಕುಟುಂಬದವರು ಹೇಳುತ್ತಿದ್ದಾರೆ ಎಂದಿದ್ದಾರೆ. 

ಇದನ್ನೂ ಓದಿ: ಮೂಲಸೌಲಭ್ಯ ಕೊಡಿ ಇಲ್ಲಾ ಮತ ಕೇಳಲು ಬರಬೇಡಿ: ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News