ಬೆಂಗಳೂರು: ಇಂದು ಸಂಜೆ 6 ಗಂಟೆಗೆ ರಾಜಭವನದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಮಾರಂಭದಲ್ಲಿ ಯಾವ ಕಾಂಗ್ರೆಸ್ ನಾಯಕರು ಭಾಗಿಯಾಗದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಖಡಕ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕುದುರೆ ವ್ಯಾಪಾರ ಮತ್ತು ಭ್ರಷ್ಟ ಮಾರ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದು ಅಸಂವಿಧಾನಿಕ ಮತ್ತು ಅನೈತಿಕ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಕಳಂಕ. ಹಾಗಾಗಿ ಈ ಅಪವಿತ್ರ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಲು ನಿರಾಕರಿಸುತ್ತೇನೆ. ಹಾಗೆಯೇ ಈ ಕಾರ್ಯಕ್ರಮದಲ್ಲಿ ಪಕ್ಷದ ಯಾವ ನಾಯಕರೂ ಭಾಗಿಯಾಗದಂತೆ ಸೂಚನೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
Swearing in of @BSYBJP as CM of Karnataka is unconstitutional & unethical based on horse trading and corrupt methods.
It’s a blot on our democracy.
I refuse to participate in this unholy event and instruct all @INCKarnataka leaders not to attend.
— Dinesh Gundu Rao / ದಿನೇಶ್ ಗುಂಡೂರಾವ್ (@dineshgrao) July 26, 2019