ಹಾಸನ: ಜನಸಾಮಾನ್ಯರ ನೋವುಗಳನ್ನು ದೂರ ಮಾಡಲು ದೇವರು ತಮಗೆ ಪುನರ್ಜನ್ಮ ನೀಡಿ ಮುಖ್ಯಮಂತ್ರಿಯಾಗುವ ಅವಕಾಶ ನೀಡಿದ್ದಾನೆ. ರೈತ ಕುಟುಂಬಗಳು ದುಡುಕಿ ಪ್ರಾಣ ಕಳೆದು ಕೊಳ್ಳಬೇಡಿ ತಾಳ್ಮೆ ವಹಿಸಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ   


COMMERCIAL BREAK
SCROLL TO CONTINUE READING

ಸೆ. 23ರಂದು ಹಾಸನ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 1650 ಕೋಟಿ ರೂಪಾಯಿ ಅಂದಾಜು ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಬಡವರು, ರೈತರು ಸಂಕಷ್ಟಗಳನ್ನು ತೀರಿಸಲು ಶಕ್ತಿಮೀರಿ ಪ್ರಯತ್ನಿಸುತ್ತಿದ್ದು ಸ್ವಲ್ಪ ಸಮಾಧಾನದಿಂದ ಕಾಯುವಂತೆ ತಿಳಿಸಿದರು .


ರಾಜ್ಯದಲ್ಲಿ 44 ಲಕ್ಷ  ರೈತ ಕುಟುಂಬಗಳು ಮಾಡಿದ್ದ 40 ಸಾವಿರ ಕೋಟಿ ರೂಪಾಯಿಗಳ ಸಾಲ ಮನ್ನಾ ಮಾಡಲಾಗಿದೆ . ಖಾಸಗಿ ಲೇವಾದೇವಿ ದಾರ ಅಕ್ರಮ ಬಡ್ಡಿ ವಸೂಲಾತಿಗೂ ಶೀಘ್ರದಲ್ಲೇ ಕಡಿವಾಣ ಬೀಳಲಿದ್ದು ಯಾರು ಅಂಜುವ ಅಗತ್ಯ ಇಲ್ಲ ಎಂದು  ಮುಖ್ಯಮಂತ್ರಿ ಅವರು ಕರೆ ನೀಡಿದರು.