ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಲೈ ಮಹದೇಶ್ವರ ಬೆಟ್ಟ ಶ್ರಮಿಕ ಶೂದ್ರ ವರ್ಗದ ದೊಡ್ಡ ಅಧ್ಯಾತ್ಮಿಕ ಕ್ಷೇತ್ರ. ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ: ಸಿಎಂ ಮಹತ್ವದ ಘೋಷಣೆ 

Written by - Yashaswini V | Last Updated : Sep 27, 2023, 11:58 AM IST
  • ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ.
  • ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ.
  • ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ  title=

ಚಾಮರಾಜನಗರ: ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ.  ವ್ಯವಸಾಯಕ್ಕೆಂದು ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. 

ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು. 

ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ದೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೈ ಮಾದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. 

ಇದನ್ನೂ ಓದಿ- ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು: ಸಿಎಂ ಸಿದ್ದರಾಮಯ್ಯ

ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದು  ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿಗಳು ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಪಟ್ಟದ ಗುರುಸ್ವಾಮಿಗಳು, ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಅಧ್ಯಕ್ಷತೆಯನ್ನು ಹನೂರು ಶಾಸಕ ಎಂ.ಆರ್.ಮಂಜುನಾಥ್ ವಹಿಸಿದ್ದರು. ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಜಿಲ್ಲೆಯ ಶಾಸಕರು ಮತ್ತು ನಾಯಕರು ಉಪಸ್ಥಿತರಿದ್ದರು.

ಇದನ್ನೂ ಓದಿ- ವಿದ್ಯೆ ಕಲಿತು ಜಾತಿವಾದಿಗಳಾದರೆ ಪ್ರಯೋಜನವಿಲ್ಲ: ಸಿಎಂ ಸಿದ್ದರಾಮಯ್ಯ

ರಾಷ್ಟ್ರಪತಿ ಭವನ ಇನ್ನು ಮುಂದೆ ತಪೋಭವನ: 
ಮಲೈ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಾದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು. ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News