ಬೆಂಗಳೂರು: ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.



COMMERCIAL BREAK
SCROLL TO CONTINUE READING

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 'ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು  ಮುಂದೂಡುವುದು ಒಳಿತು' ಎಂದು ಸಲಹೆ ನೀಡಿದ್ದಾರೆ.



ಇದಲ್ಲದೆ ಪ್ರತಿ ಯೂನಿಟ್ಗೆ  20 ಪೈಸೆಯಿಂದ 50 ಪೈಸೆವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಕುಮಾರಸ್ವಾಮಿ ಮತ್ತೊಂದು ಟ್ವೀಟ್ ಮಾಡಿದ್ದಾರೆ.