ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ?: ಸಿಎಂಗೆ ಎಚ್ಡಿಕೆ ಟಾಂಗ್
HD Kumaraswamy: ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು.
HD Kumaraswamy: ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ 'ಮೈತ್ರಿದ್ರೋಹ'ಕ್ಕೆ ಏನು ಹೇಳುವುದು @ಸಿದ್ದರಾಮಯ್ಯನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, 'ಮೀರುಸಾದಿಕ'ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಹೇಳಿ, ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ?
ಇದನ್ನೂ ಓದಿ- ಜೆಡಿಎಸ್ ಸರ್ಕಾರ ಉರುಳಿದ್ದಕ್ಕೆ ಬೇರೆಯವರ ಮೇಲೆ ಆರೋಪ ನಿರರ್ಥಕ : ಮುಖ್ಯಮಂತ್ರಿ ಸಿದ್ದರಾಮಯ್ಯ
ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ. ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು?
ಇಷ್ಟಕ್ಕೂ ಇನ್ನೊಬ್ಬರು ಇದ್ದ, ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ? ಅದೆಂಥ ಶೋಭೆ? ಛೀ! ಛೀ!! ಎಂದು ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ
ವೆಸ್ಟ್ ಎಂಡ್ ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ..
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.