ಬೆಂಗಳೂರು:ಕೃಷಿ ಇಲಾಖೆಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ರೈತ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇ-ಕೆವೈಸಿ ಮಾಡಿಸಿಕೊಳ್ಳದ ರೈತರಿಗೆ ಮುಂದಿನ ಕಂತು ತಮ್ಮ ಖಾತೆಗೆ ಜಮೆ ಅಗುವುದಿಲ್ಲ ಹಾಗೂ ಮುಂದಿನ ಯೋಜನೆಯ ಆರ್ಥಿಕ ಸೌಲಭ್ಯದಿಂದ ವಂಚಿತರಾಗಬಹುದು. ಆದ್ದರಿಂದ ಇಲ್ಲಿಯವರೆಗೂ ಇ-ಕೆವೈಸಿ ಮಾಡಿಸದ ರೈತ ಫಲಾನುಭವಿಗಳು ತಮ್ಮ ಆಧಾರ್‍ಸಂಖ್ಯೆ ಹಾಗೂ ಆಧಾರ್‍ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಯೊಂದಿಗೆ ತಮ್ಮ ಹತ್ತಿರದ ಗ್ರಾಹಕರ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರ, ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಓಟಿಪಿ ಅಥವಾ ಬಯೋ-ಮೆಟ್ರಿಕ್ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ.


ಇದನ್ನೂ ಓದಿ: ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ


ರೈತರು ತಾವೇ ಸ್ವತಃ ಖುದ್ದಾಗಿ PM-kisan ವೆಬ್‍ಸೈಟ್(ತಂತ್ರಾಂಶ)ದಲ್ಲಿ ಲಿಂಕ್‍ನ್ನು ಬಳಸಿ ಓಟಿಪಿ ಮೂಲಕ ಇ-ಕೆವೈಸಿ ಮಾಡಿಕೊಳ್ಳಬಹುದು ಅಥವಾ ಸಮೀಪದ ಅಂಚೆ ಕಚೇರಿಗೆ ಭೇಟಿ ನೀಡಿ ಪೋಸ್ಟಲ್ ಅಕೌಂಟ್ (POSTAL ACCOUNT) ತೆರೆಯುವ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಬಹುದು ಅಥವಾ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವ ಮುಖ ತೋರಿಸುವ (Face Recognisation) ಆಪ್ ಮೂಲಕ ಡೌನ್‍ಲೋಡ್ ಮಾಡಿಕೊಂಡು ಆಧಾರ್ ಸಂಖ್ಯೆ ನೊಂದಾಯಿಸಿಕೊಳ್ಳಬಹುದು.


ಎಲ್ಲಾ  ರೈತರು ಇ-ಕೆವೈಸಿ ಮಾಡಿಸಿ ತಮ್ಮ ಅಕ್ಕಪಕ್ಕದ ರೈತರಿಗೆ ಮಾಡಿಸುವಂತೆ ತಿಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಂದಾಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಗಳಿಗೆ ಸಂಪರ್ಕಿಸಬೇಕು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.