ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇ-ಕೆವೈಸಿ ಮಾಡಿಸುವುದು ಹೇಗೆ ಗೊತ್ತೇ?
ಕೇಂದ್ರ ಸರ್ಕಾರದ ಪಿ ಎಂ ಕಿಸಾನ್ ಯೋಜನೆಯಡಿ ಸುಮಾರು ರೈತರಿಗೆ ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿರುತ್ತದೆ.
ಬೆಂಗಳೂರು: ಕೇಂದ್ರ ಸರ್ಕಾರದ ಪಿ ಎಂ ಕಿಸಾನ್ ಯೋಜನೆಯಡಿ ಸುಮಾರು ರೈತರಿಗೆ ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿರುತ್ತದೆ.
ಈ ಸಂಬಂಧ ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿರುವುದರಿಂದ ಕೇಂದ್ರ ಸರ್ಕಾರವು ಇ-ಕೆವೈಸಿ ಕುರಿತಾದ ಕೈಪಿಡಿಯನ್ನು ಬಿಡುಗಡೆಗೊಳಿಸಿದೆ.
ಆದ್ದರಿಂದ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಿರುವ ಎಲ್ಲಾ ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ.
ಇದನ್ನೂ ಓದಿ : ಶಿವಮೊಗ್ಗ ರಂಗಾಯಣದಲ್ಲಿ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭ
ರೈತರು http://pmkisan.gov.in ಪೋರ್ಟಲ್‌ನ Farmer's Corner ನ e-KYC ಅವಕಾಶದಡಿ ಈಗಾಗಲೇ ಪಿ ಎಂ ಕಿಸಾನ್ ಯೋಜನೆಯಡಿ ಫಲಾನುಭವಿಯಾಗಿರುವ ಪ್ರತಿಯೊಬ್ಬ ರೈತನ ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು.
ನಂತರ ಮೊಬೈಲ್ ಗೆ ಒಟಿಪಿ ಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿಯನ್ನು ಪೋರ್ಟಲ್‌ನಲ್ಲಿ ದಾಖಲಿಸಿ “SUBMIT FOR AUTH” ಎಂಬ ಬಟನ್ ಒತ್ತಬೇಕು.ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು e-KYC successfully submitted ಎಂಬ ವಾಕ್ಯವು ಗೋಚರಿಸುತ್ತದೆ.
ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ.ಈಗಾಗಲೇ ಇ-ಕೆವೈಸಿ ಆಗಿದ್ದರೆ, e-KYC already done ಎಂಬ ಮಾಹಿತಿ ಗೋಚರಿಸುತ್ತದೆ.
ಮೇಲೆ ತಿಳಿಸಿದಂತೆ, ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿ ಗಾಗಿ ಕಳುಹಿಸಿದ ಒಟಿಪಿಯು ಸ್ವೀಕೃತವಾಗುವುದಿಲ್ಲವೋ ಅವರು ಸಿಎಸ್‌ಸಿ (Citizen Service Centers– ನಾಗರೀಕ ಸೇವಾ ಕೇಂದ್ರಗಳಿಗೆ) ಗೆ ತೆರಳಿ, ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿರುತ್ತದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಲಾಗುತ್ತದೆ.
ಈ ಯೋಜನೆಯ ಪ್ರತಿ ಫಲಾನುಭವಿ ರೈತನು, ಕೇಂದ್ರ ಸರ್ಕಾರವು ಮುಂದಿನ ಚಾತುರ್ಮಾಸಿಕದಲ್ಲಿ (ಏಪ್ರೀಲ್ 22 ರಿಂದ ಜುಲೈ 22 ರ ವರೆಗೆ) ನೀಡುವ ಆರ್ಥಿಕ ನೆರವು ಪಡೆಯಲು 31 ನೇ ಮಾರ್ಚ್ 2022 ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂರ್ಪಕ ಕೇಂದ್ರ ಅಥವಾ ನಾಗರೀಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.