ಬೆಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಸಾರ್ವಜನಿಕ ಓದುಗರ ಅನುಕೂಲಕ್ಕಾಗಿ ಡಿಜಿಟಲ್ ಗ್ರಂಥಾಲಯ ಸೇವೆಯನ್ನು ಪ್ರಾರಂಭಿಸಲಾಗಿದ್ದು, 2021 ನೇ ಸಾಲಿನ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಡಿಜಿಟಲ್ ಗ್ರಂಥಾಲಯ ಬಳಸಿಕೊಳ್ಳಲು ಉಚಿತವಾಗಿ ಡಿಜಿಟಲ್ ಗ್ರಂಥಾಲಯ ಸದಸ್ಯತ್ವ ನೋಂದಣಿ ಮಾಡಿಕೊಳ್ಳಬಹುದಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Chitrakoot Gang Rape Case: ಮಾಜಿ ಶಾಸಕ ಗಾಯತ್ರಿ ಪ್ರಜಾಪತಿಗೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ, 2 ಲಕ್ಷ ರೂ. ದಂಡ


ಜಾಲತಾಣ www.karnatakadigitalpubliclibrary.org ಮೂಲಕ e-Sarvajanika Granthalaya ಇ-ಗ್ರಂಥಾಲಯ ಸೇವೆ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಡಿಜಿಟಲ್ ಗ್ರಂಥಾಲಯದ ಸದಸ್ಯತ್ವವನ್ನು ಉಚಿತವಾಗಿ ಪಡೆದುಕೊಂಡು ಮೊಬೈಲ್, ಕಂಪ್ಯೂಟರ್, ಲ್ಯಾಪ್‍ಟಾಪ್, ಟ್ಯಾಬ್ ಮೂಲಕ ಪುಸ್ತಕಗಳು/ದಿನಪತ್ರಿಕೆಗಳು ಹಾಗೂ ನಿಯತಕಾಲಿಕೆಗಳನ್ನು ಉಚಿತವಾಗಿ ಓದಬಹುದು.


ಇದನ್ನೂ ಓದಿ: ಏನಿದು ನೊರೊವೈರಸ್? ಇದರ ಬಗ್ಗೆ ನಿಮಗೆಷ್ಟು ಗೊತ್ತು?


ಇ-ಸಾರ್ವಜನಿಕ ಗ್ರಂಥಾಲಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇ-ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆ ಪುಸ್ತಕಗಳು, ಸಿಇಟಿ/ಎನ್‍ಇಇಟಿ/ಯುಪಿಎಸ್‍ಸಿ/ಕೆಪಿಎಸ್‍ಸಿ ಅಲ್ಲದೇ ರಾಜ್ಯ ಸರ್ಕಾರದ ಸಿಬಿಎಸ್‍ಸಿ/ಐಸಿಎಸ್‍ಇ/ಎನ್‍ಸಿಇಆರ್‍ಟಿ ಪಠ್ಯಪುಸ್ತಕಗಳು ಮತ್ತು ವಿವಿಧ ಭಾಷೆಗಳ ಪ್ರಾದೇಶಿಕ, ರಾಷ್ಟ್ರೀಯ ದಿನಪತ್ರಿಕೆಗಳು ಹಾಗೂ ನಿಯತಕಾಲಿಕೆಗಳು ಲಭ್ಯವಿದ್ದು ವಿದ್ಯಾರ್ಥಿಗಳು ಸಾರ್ವಜನಿಕರು ಉಚಿತ ಸದಸ್ಯತ್ವ ಪಡೆದು ಇದರ ಸದುಪಯೋಗ ಪಡೆಯಬೇಕೆಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ(ಪ್ರ) ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ