ಧಾನ್ಯಗಳ ಹೆಚ್ಚುವರಿ ಖರೀದಿಗೆ ಭಾರತೀಯ ಆಹಾರ ಮಂಡಳಿ ನಿಷೇಧ ಹೇರಿದ್ದು ಏಕೆ ಗೊತ್ತೇ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ "ಅನ್ನ ಭಾಗ್ಯ" ಯೋಜನೆಗೆ ಹೆಚ್ಚುವರಿ ಐದು ಕೆಜಿ ಅಕ್ಕಿ ನೀಡದೆ ಬಡವರ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪ ಮಾಡಿದರು.

Written by - Prashobh Devanahalli | Edited by - Manjunath N | Last Updated : Jun 15, 2023, 06:53 PM IST
  • ಈ ಭಾರಿ OMSSD ಹರಾಜಿನಲ್ಲಿ ಏಕಕಾಲದಲ್ಲಿ 10-100 ಮೆಟ್ರಿಕ್ ಟನ್ ಗಳಷ್ಟು ಅಕ್ಕಿ/ಗೋದಿ ಹರಾಜಿನ ಮೂಲಕ ಖರೀದಿಸಬಹುದು
  • ಈ ಹಿಂದೆ ಹರಾಜಿನಲ್ಲಿ ಗರಿಷ್ಟ 3000 ಮೆಟ್ರಿಕ್ ಟನ್ ದಾನ್ಯಗಳನ್ನ ಖರೀದಿಗೆ ಅವಕಾಶ ಇತ್ತು
  • ಸಣ್ಣ ಹಾಗೂ ಮಧ್ಯಮ ಖರೀದಿದಾರರು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಹಾಗೂ ಈ ಯೋಜನೆಯ (OMSSD) ಹೆಚ್ಚು ಜನರನ್ನ ತಲುಪಲು ಸಾಧ್ಯವಾಗಲಿದೆ
ಧಾನ್ಯಗಳ ಹೆಚ್ಚುವರಿ ಖರೀದಿಗೆ ಭಾರತೀಯ ಆಹಾರ ಮಂಡಳಿ ನಿಷೇಧ ಹೇರಿದ್ದು ಏಕೆ ಗೊತ್ತೇ? title=
ಸಾಂದರ್ಭಿಕ ಚಿತ್ರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ "ಅನ್ನ ಭಾಗ್ಯ" ಯೋಜನೆಗೆ ಹೆಚ್ಚುವರಿ ಐದು ಕೆಜಿ ಅಕ್ಕಿ ನೀಡದೆ ಬಡವರ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪ ಮಾಡಿದರು.

ಬುಧವಾರ ಶಕ್ತಿ ಭವನದಲ್ಲಿ ಮಾತನ್ನಾಡಿದ ಸಿಎಂ ಸಿದ್ದರಾಮಯ್ಯ, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ  ಭಾರತೀಯ ಆಹಾರ ಮಂಡಳಿ  ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ  ಮೆ.ಟನ್ ಅಗತ್ಯವಿದೆ ಎಂದು ಕೋರಿ ಜೂನ್‌ 9 ರಂದು  ಪತ್ರ ಬರೆಯಲಾಗಿತ್ತು. ಇದಕ್ಕೆ  ಜೂನ್‌ 12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‌ ಗೆ 3400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಜೂನ್ 13 ರಂದು  ಭಾರತ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯವು ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆಗೆ 15 ಲಕ್ಷ ಮೆ.ಟನ್ ಗೋಧಿ ಹಾಗೂ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಮಾರಾಟ  ಯೋಜನೆಯಡಿ (ಒ.ಎಂಎಸ್.ಎಸ್ ಡಿ) ಮಾರಾಟ ಮಾಡಲು ಸೂಚಿಸಿದೆ. ಅಲ್ಲದೆ ಈಶಾನ್ಯ ರಾಜ್ಯಗಳನ್ನು ಹೊರತು ಪಡಿಸಿ, ಇತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿರುವ ಪತ್ರದ ವಿವರಗಳನ್ನು ಓದಿ ಹೇಳಿದ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರ ರಾಜಕೀಯವಾಗಿ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿದರು.

ಭಾರತೀಯ ಆಹಾರ ಮಂಡಳಿ (FCI) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ಸ್ಪಷ್ಟನೆ ನೀಡಿದ್ದು,ಜೂನ್ ತಿಂಗಳ ದಾನ್ಯಗಳ ಹರಾಜು ರದ್ದು ಮಾಡಲಾಗಿದೆ.ಜೂನ್ ತಿಂಗಳಲ್ಲಿ ರಾಜ್ಯ ಸರ್ಕಾರಗಳು ಗೋದಿ ಹಾಗೂ ಅಕ್ಕಿ ಪಡೆಯಲು ಅವಕಾಶವಿಲ್ಲ.
ಗೋದಿ ಹಾಗೂ ಅಕ್ಕಿ ದಾನ್ಯಗಳ  ಬೆಲೆ ಏರಿಕೆ ಸಮತೋಲನ ಕಾಪಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಈ ಭಾರಿ OMSSD ಹರಾಜಿನಲ್ಲಿ ಏಕಕಾಲದಲ್ಲಿ 10-100 ಮೆಟ್ರಿಕ್ ಟನ್ ಗಳಷ್ಟು ಅಕ್ಕಿ/ಗೋದಿ ಹರಾಜಿನ ಮೂಲಕ ಖರೀದಿಸಬಹುದು. ಈ ಹಿಂದೆ ಹರಾಜಿನಲ್ಲಿ ಗರಿಷ್ಟ 3000 ಮೆಟ್ರಿಕ್ ಟನ್ ದಾನ್ಯಗಳನ್ನ ಖರೀದಿಗೆ ಅವಕಾಶ ಇತ್ತು. ಸಣ್ಣ ಹಾಗೂ ಮಧ್ಯಮ ಖರೀದಿದಾರರು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಹಾಗೂ ಈ ಯೋಜನೆಯ (OMSSD) ಹೆಚ್ಚು ಜನರನ್ನ ತಲುಪಲು ಸಾಧ್ಯವಾಗಲಿದೆ, ಜೊತೆಗೆ ಖರೀದಿ ಮಾಡಿದ ದಾನ್ಯಗಳು ಕೂಡಲೇ ಜನರಿಗೆ ತಲುಪಲು ಸಾಧ್ಯವಾಗಲಿದೆ ಎಂದು ಸಮರ್ಥನೆ ನೀಡಿದೆ.OMSSDಯ 2023-24 ಆರ್ಥಿಕ ವರ್ಷದ ಮೊದಲ ಹರಾಜು ಜೂನ್ 28ಕ್ಕೆ ನಡೆಯಲಿದೆ ಎಂದು ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News