ಉಚಿತ ವಸತಿ ಶಾಲೆಗೆ ನಿಮ್ಮ ಮಗುವನ್ನು ದಾಖಲಿಸಬೇಕೇ? ಇಲ್ಲಿದೆ ಸುವರ್ಣಾವಕಾಶ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2022-23ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿಗಳಿಗೆ (ಆಂಗ್ಲ ಮಾಧ್ಯಮ) ಸಹ ಶಿಕ್ಷಣ ಪ್ರವೇಶ ಪಡೆಯಲು ಅಲ್ಪಸಂಖ್ಯಾತರ ಸಮುದಾಯ ಮತ್ತು ಇತರೆ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2022-23ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿಗಳಿಗೆ (ಆಂಗ್ಲ ಮಾಧ್ಯಮ) ಸಹ ಶಿಕ್ಷಣ ಪ್ರವೇಶ ಪಡೆಯಲು ಅಲ್ಪಸಂಖ್ಯಾತರ ಸಮುದಾಯ ಮತ್ತು ಇತರೆ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಶಾಲೆಯಲ್ಲಿ 6 ರಿಂದ 10ನೇ ತರಗತಿಗೆ ಒಟ್ಟು 250 ಸಂಖ್ಯಾಬಲದಲ್ಲಿ ತರಗತಿವಾರು 50 ಸಂಖ್ಯಾ ಬಲವಿದ್ದು, 6ನೇ ತರಗತಿಗೆ 50 ಸೀಟುಗಳು ಖಾಲಿ ಇದೆ.ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75%ರಷ್ಟು ಮತ್ತು ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ.25%ರಷ್ಟು ಸ್ಥಾನ ಮೀಸಲಿರಿಸಿದ್ದು, 7 ರಿಂದ 10ನೇ ತರಗತಿಗೆ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು.
ಇದನ್ನೂ ಓದಿ: IPL 2022: ಐಪಿಎಲ್ ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ದಾಖಲೆ ನಿರ್ಮಿಸಿದ ಉಮ್ರಾನ್ ಮಲಿಕ್
ಪ್ರವೇಶವು ಉಚಿತವಾಗಿದ್ದು, ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಊಟ, ಮಂಚ, ಹಾಸಿಗೆ, ಹೊದಿಗೆ, ಪಠ್ಯಪುಸ್ತಕ, ಸಮವಸ್ತ್ರ, ಲೇಖನ ಸಾಮಗ್ರಿ, ಗ್ರಂಥಾಲಯ, ಕಂಪ್ಯೂಟರ್ & ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸಲಾಗುವುದು.
ಶಾಲಾ ದಾಖಲಾತಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಅರ್ಜಿ ಪಡೆದು ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ, ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ನಕಲು, ವಿದ್ಯಾರ್ಥಿಯ ಪೋಟೋ, ರೇಷನ್ ಕಾರ್ಡ್ ಇತ್ಯಾದಿಗಳನ್ನು ಲಗತ್ತಿಸಿ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಿಗೆ ಸಲ್ಲಿಸುವುದು.ಅಥವಾ ಅಥವಾ ಸೇವಾ-ಸಿಂಧು ಪೋರ್ಟಲ್ https://sevasindhu.karnataka.gov.in/.../DepartmentServices ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಮಗಳ ಮದುವೆಯಲ್ಲಿ ಕೋವಿಡ್-19 ಬಗ್ಗೆ ಜಾಗೃತಿ ಮೂಡಿಸಿದ ಕುಟುಂಬ
ಅರ್ಜಿಗಳಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಮೊ.ಸಂ.: 9632933397, 9972238296, 8317403213, 8618020010, ಹೊಸಕೋಟೆ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ ದೂ..ಸಂ.: 080-27931899, ಮೊ.ಸಂ.: 8310397004 ಹಾಗೂ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನಂ.216, 2ನೇ ಮಹಡಿ, ಜಿಲ್ಲಾಧಿಕಾರಿಗಳ ಹೊಸ ಸಂಕೀರ್ಣ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110, ದೂರವಾಣಿ ಸಂಖ್ಯೆ: 080-29787455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.