ಪುಸ್ತಕ ಪ್ರಕಟಿಸುವ ಹಂಬಲ ನಿಮ್ಮದಾಗಿದೆಯೇ? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶ ಇಲ್ಲಿದೆ..!

ಸಾರ್ವಜನಿಕ ಗ್ರಂಥಾಲಯ ವತಿಯಿಂದ 2021ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ 2022 ರ ಜನವರಿ 31 ರೊಳಗೆ ಕಾಪಿರೈಟ್ ಮಾಡಿಸಿ, ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ಸಲ್ಲಿಸಲು ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Jan 28, 2022, 03:48 AM IST
  • ತದನಂತರ ಬಂದ ಯಾವುದೇ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಅರ್ಜಿ ನಮೂನೆ ಮತ್ತು ನಿಬಂಧನೆಗಳ ಮಾಹಿತಿಗಾಗಿ ಇಲಾಖಾ ಅಂತರ್ಜಾಲ www.dpl.karnataka.gov.in ಇಲ್ಲಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪುಸ್ತಕ ಪ್ರಕಟಿಸುವ ಹಂಬಲ ನಿಮ್ಮದಾಗಿದೆಯೇ? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶ ಇಲ್ಲಿದೆ..! title=

ಬೆಂಗಳೂರು : ಸಾರ್ವಜನಿಕ ಗ್ರಂಥಾಲಯ ವತಿಯಿಂದ 2021ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ 2022 ರ ಜನವರಿ 31 ರೊಳಗೆ ಕಾಪಿರೈಟ್ ಮಾಡಿಸಿ, ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ಸಲ್ಲಿಸಲು ಆಹ್ವಾನಿಸಲಾಗಿದೆ.

ಇದನ್ನೂ ಓದಿ: ನೀವು ಕೂಡ ತಡರಾತ್ರಿ ಆಹಾರ ಸೇವಿಸುತ್ತೀರಾ? ಮಾರಣಾಂತಿಕ ಕಾಯಿಲೆಗೆ ಕಾರಣವಾದೀತು ಎಚ್ಚರ!

ಡಿಜಿಟಲ್ ಗ್ರಂಥಾಲಯ ಸೇವೆಯನ್ನು ಸಾರ್ವಜನಿಕ ಓದುಗರಿಗೆ ಒದಗಿಸಲು ಅನುಕೂಲವಾಗುವಂತೆ ಆಸಕ್ತಿಯುಳ್ಳ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಟಣೆ ಸಂಸ್ಥೆಗಳು ಪುಸ್ತಕವನ್ನು ಆಯ್ಕೆಗೆ ಸಲ್ಲಿಸುವಾಗ ತಮ್ಮ ಅನುಮತಿ ಪತ್ರದೊಂದಿಗೆ ಪುಸ್ತಕದ ಸಾಫ್ಟ್ ಕಾಪಿಯನ್ನು ಸಿ.ಡಿ.ರೂಪದಲ್ಲಿ (ನೋಂದಣಿ ಪತ್ರದ ಪ್ರತಿಯೊಂದಿಗೆ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು -560001 ಇಲ್ಲಿಗೆ 2022 ರ ಫೆಬ್ರವರಿ 5ರ ಸಂಜೆ 5 ಗಂಟೆಯೊಳಗೆ ಸಲ್ಲಿಸುವುದು.

ಇದನ್ನೂ ಓದಿ: ಕೊರೊನಾ ಪ್ರಕರಣಗಳ ಹೆಚ್ಚಳ, ಕೇಂದ್ರ ಸರ್ಕಾರ ಹೇಳಿದ್ದೇನು?

ತದನಂತರ ಬಂದ ಯಾವುದೇ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಅರ್ಜಿ ನಮೂನೆ ಮತ್ತು ನಿಬಂಧನೆಗಳ ಮಾಹಿತಿಗಾಗಿ ಇಲಾಖಾ ಅಂತರ್ಜಾಲ www.dpl.karnataka.gov.in ಇಲ್ಲಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News