ಬೆಂಗಳೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ಇವರ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ನಿರುದ್ಯೋಗಿ ಮಹಿಳೆಯರಿಗೆ 30 ದಿನಗಳ “ಮಹಿಳಾ ಹೊಲಿಗೆ ಯಂತ್ರದ” ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: Budget 2022 : ಜನವರಿ 31 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ!
ಅರ್ಜಿದಾರರು 18 ರಿಂದ 45 ವರ್ಷದೊಳಗಿರಬೇಕು. ಕನಿಷ್ಟ 8ನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು ಹಾಗೂ ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವದು. ಅರ್ಜಿ ಸಲ್ಲಿಸಲು ಫೆಬ್ರವರಿ 13 ರಂದು ಕೊನೆ ದಿನವಾಗಿದ್ದು, ಫೆ. 14ರ ಬೆಳಿಗ್ಗೆ 10-30 ಗಂಟೆಗೆ ಸಂದರ್ಶನ ನಡೆಯಲಿದೆ. ಹಾಗೂ ಫೆ. 15 ರಿಂದ ತರಬೇತಿಗಳು ಪ್ರಾರಂಭಗೊಳ್ಳಲಿವೆ.
ಇದನ್ನೂ ಓದಿ: ನೀವು ಕೂಡ ತಡರಾತ್ರಿ ಆಹಾರ ಸೇವಿಸುತ್ತೀರಾ? ಮಾರಣಾಂತಿಕ ಕಾಯಿಲೆಗೆ ಕಾರಣವಾದೀತು ಎಚ್ಚರ!
ಅರ್ಜಿ ಸಲ್ಲಿಸಲಿಚ್ಛಿಸುವವರು ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಆಶೋಕ ಸರ್ಕಲ್ ಹತ್ತಿರ, ಕೊಪ್ಪಳ ಫೋನ್ ನಂಬರ್. 08539-231038, ಈ ವಿಳಾಸಕ್ಕೆ ಸಲ್ಲಿಸಬಹುದು. ಆಯ್ಕೆಯಾದ ಅರ್ಜಿದಾರರಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ಆಸಕ್ತರು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆರ್‌ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.