ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೆಪ್ಟೆಂಬರ್ 1 ರಿಂದ ಅಧಿಕೃತ ಚಾಲನೆ ನೀಡಿದ ಜನತಾದರ್ಶನ ಕಾರ್ಯಕ್ರಮವನ್ನು ತಿಂಗಳಿಗೊಮ್ಮೆ ನಡೆಸುವಂತೆ ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಇನ್ನುಮುಂದೆ ಜನತಾದರ್ಶನ ಕಾರ್ಯಕ್ರಮ ತಿಂಗಳಿಗೊಮ್ಮೆ ನಡೆಯಲಿದೆ. ಒಂದು ತಿಂಗಳು ಬೆಂಗಳೂರಿನಲ್ಲಿ ಒಂದು ತಿಂಗಳು ಜಿಲ್ಲಾ ಕೇಂದ್ರದಲ್ಲಿ ಜನತಾದರ್ಶನ ನಡೆಸಲಾಗುವುದು. ದಿನಾಂಕ ಹಾಗೂ ಸ್ಥಳವನ್ನು ಮುಂಚಿತವಾಗಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.
ಸೆಪ್ಟೆಂಬರ್ 1 ರಿಂದ ಅಧಿಕೃತ ಚಾಲನೆ ನೀಡಿದ್ದ ಜನತಾದರ್ಶನ ಕಾರ್ಯಕ್ರಮ ಸೆ. 15ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದಿತ್ತು. ಜನತಾ ದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು. ಕುಮಾರಸ್ವಾಮಿ ಅವರು ಬೆಳಗಾವಿಯ ಜನತಾ ದರ್ಶನದಲ್ಲಿ ಅಹವಾಲುಗಳನ್ನು ಸ್ವೀಕರಿಸಿದರು.
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬೆಳಗಾವಿಯ ಜನತಾ ದರ್ಶನದಲ್ಲಿ ಅಹವಾಲುಗಳನ್ನು ಸ್ವೀಕರಿಸಿದರು. pic.twitter.com/DpCLUwbtKU
— CM of Karnataka (@CMofKarnataka) September 15, 2018