ಬೆಂಗಳೂರು : ನಮ್ಮನ್ನ ಹುಡುಕಬೇಡಿ ಎಂದು ಪೋಷಕರಿಗೆ ಕರೆ ಮಾಡಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯರಿಬ್ಬರು ನಾಪತ್ತೆಯಾಗಿದ್ದಾರೆ ಎಂದು ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಓರ್ವ ವಿದ್ಯಾರ್ಥಿನಿ ಜುಲೈ 25ರಂದು ಸಂಜೆ 5 ಗಂಟೆಗೆ ಸ್ನೇಹಿತೆಯನ್ನು ಭೇಟಿಯಾಗಲು ಹೋಗಿದ್ದವಳು ಮನೆಗೆ ಬರುವುದು ವಿಳಂಬವಾಗಿತ್ತು. ಮೊಬೈಲ್ ಮನೆಯಲ್ಲೇ ಬಿಟ್ಟು ಹೋಗಿದ್ದರಿಂದ ಆಕೆಯ ಪೋಷಕರು ಮಗಳ ಸ್ನೇಹಿತೆಗೆ ಕರೆ ಮಾಡಿ ವಿಚಾರಿಸಿದಾಗ ವಸಂತನಗರದಲ್ಲಿದ್ದೇವೆ. ಸ್ವಲ್ಪ ಸಮಯದಲ್ಲಿ ಮನೆಗೆ ಬರುತ್ತಿದ್ದೇವೆ ಎಂದಿದ್ದರು.
ಇದನ್ನೂ ಓದಿ- Vinay Guruji : ಟ್ರೋಲ್ ಪೇಜ್ ಗಳ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ವಿನಯ್ ಗುರೂಜಿ
ಇದಾದ ಬಳಿಕ ಅವರ ಮಗಳ ಸ್ನೇಹಿತೆಯ ಫೋನ್ ಸಹ ಸ್ವಿಚ್ ಆಫ್ ಆಗಿತ್ತು. ಬಳಿಕ ಆಕೆಯ ಪೋಷಕರನ್ನು ಸಂಪರ್ಕಿಸಿದಾಗ 'ನಾವಿನ್ನು ಮನೆಗೆ ಬರಲ್ಲ ಇನ್ನು ಹುಡುಕಬೇಡಿ' ಎಂದು ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿರುವುದು ಗೊತ್ತಾಗಿದೆ.
ಇದನ್ನೂ ಓದಿ- BJP : ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ನೀಡುವಂತೆ ಮಠಾಧೀಶರಿಂದ ಹೈಕಮಾಂಡ್ ಗೆ ಪತ್ರ
ಸದ್ಯ ಇಬ್ಬರ ಪೋಷಕರು ಮಕ್ಕಳನ್ನು ನಾಪತ್ತೆಯಾಗಿರುವ ಬಗ್ಗೆ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ನಾಪತ್ತೆಯಾಗಿರುವ ಯುವತಿಯರಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.