ಸರ್ಕಾರಿ ಶಾಲೆಗಳಿಗೆ ದೇಣಿಗೆ ನೀಡಿ ಶಾಲೆಗಳ ಚಿತ್ರಣವೇ ಬದಲಾಗುತ್ತದೆ-ಸಚಿವ ಮಧು ಬಂಗಾರಪ್ಪ
ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ʼನಮ್ಮ ಶಾಲೆ ನಮ್ಮ ಜವಾಬ್ದಾರಿʼ ಎಂಬ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಉದ್ಯೋಗಿಗಳು, ಉದ್ಯಮಿಗಳು, ಪಾಲಕರು ಮತ್ತು ಹಳೆ ವಿದ್ಯಾರ್ಥಿಗಳು ಶಾಲೆಗೆ ದೇಣಿಗೆ ನೀಡಿ ಪ್ರಗತಿಯ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಮನವಿ ಮಾಡಿದ್ದಾರೆ.
ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ʼನಮ್ಮ ಶಾಲೆ ನಮ್ಮ ಜವಾಬ್ದಾರಿʼ ಎಂಬ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಉದ್ಯೋಗಿಗಳು, ಉದ್ಯಮಿಗಳು, ಪಾಲಕರು ಮತ್ತು ಹಳೆ ವಿದ್ಯಾರ್ಥಿಗಳು ಶಾಲೆಗೆ ದೇಣಿಗೆ ನೀಡಿ ಪ್ರಗತಿಯ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ 45 ಸಾವಿರ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿವೆ. 56 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ಪಿಯು ವಿದ್ಯಾರ್ಥಿಗಳೂ ಸೇರಿ ಒಟ್ಟು 1.05 ಕೋಟಿ ವಿದ್ಯಾರ್ಥಿಗಳಿದ್ದಾರೆ. ಕಳೆದ ದಶಕಗಳಲ್ಲಿ ಇಲ್ಲಿ ಕಲಿತು ಹೋದವರ ಸಂಖ್ಯೆ ಲೆಕ್ಕಕ್ಕೆ ಸಿಗದು. ಅವರು ತಾವು ಕಲಿತ ಶಾಲೆಗಳಿಗೆ ಮರಳಬೇಕು. ಕನಿಷ್ಠ ₹5 ಸಾವಿರ ದೇಣಿಗೆ ನೀಡಬೇಕು ಅಥವಾ ಇಷ್ಟವಾದುದ್ದನ್ನು ಕೊಡುಗೆ ನೀಡಬೇಕು. ಇದರಿಂದ ಸರ್ಕಾರಿ ಶಾಲೆಗಳ ಚಿತ್ರಣವೇ ಬದಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಕಲಿತ ಸಿದ್ದರಾಮನಹುಂಡಿಯ ಸರ್ಕಾರಿ ಶಾಲೆಗೆ ₹10 ಲಕ್ಷ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರು ಕಲಿತ ಶಾಲೆಗೆ ನಾನು ₹10 ಲಕ್ಷ ದೇಣಿಗೆ ನೀಡಿದ್ದೇನೆ. ಹಲವು ಶಾಸಕರೂ ಇಂತಹ ಕೆಲಸಕ್ಕೆ ಮುಂದಾಗಿದ್ದಾರೆ. ಇದೊಂದು ಕ್ರಾಂತಿಕಾರಕ ನಡೆಯಾಗಬೇಕು. ಸರ್ಕಾರಿ ಶಾಲೆಗಳಿಗೆ ದೇಣಿಗೆ ಕೊಟ್ಟು ನೋಡಿ; ದೇಶದ ಭವಿಷ್ಯವೇ ಬದಲಾದಿತು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.