ಬೆಂಗಳೂರು: ಸದನದಲ್ಲಿ ಸಂಖ್ಯಾಬಲ ಕಡಿಮೆ ಇದೆ ಎದೆಗುಂದಬೇಡಿ. ಹಿಂದಿನ ಲೋಕಸಭೆಯಲ್ಲೂ ನಾನು ನಮ್ಮ ಪಕ್ಷದ ಪರವಾಗಿ ಒಬ್ಬನೇ ಇದ್ದೆ. ಈಗಲೂ ನಮಗೆ ಒಬ್ಬರೇ ಎಂಪಿ ಇದ್ದಾರೆ. ಹಾಗಂತ ನಮ್ಮ ಹೋರಾಟದ ಕೆಚ್ಚು ಕಡಿಮೆ ಆಗಿದೆಯಾ? ಎಂದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಪ್ರಶ್ನಿಸಿದ್ದಾರೆ.
ತಮ್ಮ ನಿವಾಸದಲ್ಲಿ ಕರೆದಿದ್ದ ಸಭೆಯಲ್ಲಿ ಪಕ್ಷದ ನೂತನ ಶಾಸಕರನ್ನು ಉದ್ದೇಶಿಸಿ ಅವರು ಕೆಲವು ಹಿತನುಡಿಗಳನ್ನು ಹೇಳಿದರು.
19 ಸೀಟು ಗೆದ್ದಿದ್ದೇವೆ ಎಂಬ ಆತಂಕ ಬೇಡ. 119 ಸೀಟು ಗೆಲ್ಲುವ ದಿಕ್ಕಿನಲ್ಲಿ ಕೆಲಸ ಮಾಡೋಣ. ನಾನು ಬದುಕಿರುವ ತನಕ ಪಕ್ಷಕ್ಕಾಗಿ ದುಡಿಯುತ್ತೇನೆ. ನೀವು ಯಾರೂ ಧೈರ್ಯ ಕಳೆದುಕೊಳ್ಳಬೇಡಿ.ಚುನಾವಣೆಯಲ್ಲಿ ಸೋಲು ಗೆಲವು ಸಾಮಾನ್ಯ. ನಾವು ಎಲ್ಲಿ ತಪ್ಪು ಮಾಡಿದ್ದೇವೆ ಎನ್ನುವುದನ್ನು ಅರ್ಥ ಮಾಡಿಕೊಳ್ಳೋಣ. ಜನರ ಜತೆ ನಿಂತು ಕೆಲಸ ಮಾಡೋಣ. ಪ್ರಾಮಾಣಿಕತೆ, ಬದ್ಧತೆ, ಆಚಲತೆಯಿಂದ ದುಡಿದರೆ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಷ್ಟವಲ್ಲ.
ಇದನ್ನೂ ಓದಿ- Indira Canteens: ಶೀಘ್ರವೇ ಇಂದಿರಾ ಕ್ಯಾಂಟೀನ್ಗಳಲ್ಲಿ ಅತ್ಯುತ್ತಮ ಆಹಾರ- ಕಾಂಗ್ರೆಸ್
ನಾನು ಕೂಡ ಸೋತಿದ್ದೇನೆ, ಗೆದ್ದಿದ್ದೇನೆ. ಸೋತಾಗ ಹೆದರಿ ಮನೆ ಸೇರಿಕೊಂಡಿಲ್ಲ, ಗೆದ್ದಾಗ ಬೀಗಿಲ್ಲ. ಎಲ್ಲಾ ಸಮಯದಲ್ಲೂ ಶ್ರದ್ಧೆ, ವಿನಯದಿಂದ ಜನರ ಕೆಲಸ ಮಾಡಿದ್ದೇನೆ. ಆಡಳಿತ ಪಕ್ಷದ ವಿರುದ್ಧ ಹೋರಾಟ ನಡೆಸಿದ್ದೇನೆ. 1962ರಲ್ಲಿ ಪಕ್ಷೇತರ ಶಾಸಕನಾಗಿ ಗೆದ್ದುಬಂದು ಈ ನೆಲ ಜಲಕ್ಕಾಗಿ ಹೋರಾಟ ನಡೆಸಿದವನು ನಾನು. ಒಬ್ಬನೇ ಶಾಸಕ ಎಂದು ನಾನು ಕೈಕಟ್ಟಿ ಕೂತಿದ್ದರೆ ಕಾವೇರಿ ನೀರಿನ ಸದ್ಬಳಕೆ ಸಾಧ್ಯ ಆಗುತ್ತಿತ್ತಾ? ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳು ತಲೆ ಎತ್ತುತ್ತಿದ್ದವಾ? ಮನಸ್ಸಿಟ್ಟು ಯೋಚನೆ ಮಾಡಿ, ಅಧೈರ್ಯಪಟ್ಟರೆ ಉಪಯೋಗವಿಲ್ಲ. ನಿಮ್ಮ ಜತೆ ಕುಮಾರಸ್ವಾಮಿ ಅವರು ನಿಲ್ಲುತ್ತಾರೆ, ಹೋರಾಟ ಮಾಡಿ ಎಂದು ಅವರು ಆಗ್ರಹಿಸಿದರು.
ಮುಂದೆ ಅನೇಕ ಚುನಾವಣೆಗಳು ಬರಲಿವೆ. ಲೋಕಸಭೆ ಚುನಾವಣೆ ಕೂಡ ಬರುತ್ತದೆ. ಈಗಿನಿಂದಲೇ ಕೆಲಸ ಮಾಡಿ. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿ. ನಿಮ್ಮ ಜತೆ ನಾನು, ಕುಮಾರಸ್ವಾಮಿ ಅವರು ಇರುತ್ತೇವೆ. ಹೆದರಿ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಹೆದರಿ ಕೂತರೆ ಏನನ್ನೂ ಸಾಧನೆ ಮಾಡಿದಂತೆ ಆಗುವುದಿಲ್ಲ ಎಂದು ಆರು ಸ್ಫೂರ್ತಿ ತುಂಬಿದರು.
ಇದನ್ನೂ ಓದಿ- ಕರ್ನಾಟಕದಲ್ಲಿ ಜಯಭೇರಿ ಬೆನ್ನಲ್ಲೇ 'ಪಂಚ ರಾಜ್ಯಗಳ' ಮೇಲೆ ಕಾಂಗ್ರೆಸ್ ಕಣ್ಣು!
ಇದೇ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ನೂತನ ಶಾಸಕರ ಜತೆ ಮಾತುಕತೆ ನಡೆಸಿದರು.ಈ ಸರಕಾರ ಗ್ಯಾರಂಟಿಗಳನ್ನು ಕೊಟ್ಟು ಅಧಿಕಾರಕ್ಕೆ ಬಂದಿದೆ. ಆಗಲೇ ಅಧಿಕಾರಕ್ಕಾಗಿ ಕಿರಿಕಿರಿ ಮಾಡಿಕೊಳ್ಳುತ್ತಿದ್ದಾರೆ. ನಮಗೆ ಅವರ ರಾಜಕೀಯ ಬೇಕಿಲ್ಲ. ಜನತೆಗೆ ಅವರು ಕೊಟ್ಟ ವಚನ ಪಾಲಿಸುವಂತೆ ಹೋರಾಟ ಮಾಡೋಣ ಎಂದರು.
ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಹಿರಿಯ ಶಾಸಕರಾದ ಜಿ.ಟಿ.ದೇವೇಗೌಡರು, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಪಕ್ಷದ ಎಲ್ಲಾ ನೂತನ ಶಾಸಕರು ಸಭೆಯಲ್ಲಿ ಹಾಜರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.