ಬೆಂಗಳೂರು:  ನಾನು ಹೇಳಿದ್ದೀನಿ ಎನ್ನುವ ಕಾರಣಕ್ಕೆ ನೀವು ನಂಬಬೇಡಿ. ಸತ್ಯ, ಸುಳ್ಳನ್ನು ಪರಾಮರ್ಷಿಸಿ, ವಿವೇಚಿಸಿ. ಸತ್ಯವನ್ನು ಧೈರ್ಯವಾಗಿ-ಬಹಿರಂಗವಾಗಿ ಮಾತಾಡುವ ಧೈರ್ಯವನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಬೆಳೆಸಿಕೊಳ್ಳಬೇಕು. ಇದೇ ಮಹರ್ಷಿ ವಾಲ್ಮೀಕಿ ಅವರಿಗೆ ನಾವು, ನೀವು ಸಲ್ಲಿಸುವ ಗೌರವ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.


ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿಯವರು ವಾಲ್ಮೀಕಿ ಸಮುದಾಯದವರು. ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿಯವರು ರಾಮಾಯಣ ಬರೆಯಲು ಸಾಧ್ಯವಾ? ಎಂದು ಕತೆ ಕಟ್ಟಿಬಿಟ್ಟರು. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು, ಶ್ಲೋಕಗಳ ಮೂಲಕ ಜಗತ್ಪ್ರಸಿದ್ಧ ರಾಮಾಯಣ ಮಹಾಕಾವ್ಯ ಬರೆದರಲ್ಲಾ ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ ಎಂದು ಹೇಳಿದರು.


ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲಾ ಕಲಿತರು, ಬರೆದರು. ಜಗತ್ತಿಗೇ ಪ್ರೇರಣೆ ಆದರು. ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ. ರಾಮನ‌ ಮಕ್ಕಳಾದ ಲವ ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿಗಳು. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದೊಂದು ಸಣ್ಣ ಉದಾಹರಣೆ ಎಂದು ಸಿಎಂ ಹೇಳಿದರು.


ಇದನ್ನೂ ಓದಿ: Rain Alert: ಮುಂದಿನ 24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ!


ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಆಯವ್ಯಯದಲ್ಲಿ ಮೊದಲಿಗೆ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತೀ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.


ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವಾಗಲೀ, ಬಿಜೆಪಿ ಅಧಿಕಾರದಲ್ಲಿರುವ ಒಂದೇ ಒಂದು ರಾಜ್ಯದಲ್ಲಾಗಲೀ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕಾಯ್ದೆಯನ್ನು ಜಾರಿಗೆ ತಂದಿಲ್ಲ.ಬರೀ ಬಾಯಿ ಮಾತಲ್ಲಿ ಸಮಾನತೆ ಬರಲ್ಲ. ಆರ್ಥಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು.ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಹೋಗದ ಹೊರತು ಸಮಾನತೆ ಬರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ ಎಂದು ಹೇಳಿದರು.


ನಮ್ಮ ಸರ್ಕಾರ ಎಲ್ಲಾ ಧರ್ಮ, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ಕೊಡಲು ಗ್ಯಾರಂಟಿಗಳನ್ನು ಜಾರಿಗೆ ತಂದರೆ ಇದನ್ನು ವಿರೋಧಿಸಿದವರು ಬಿಜೆಪಿಯವರು. ಆದ್ದರಿಂದ ಗ್ಯಾರಂಟಿಗಳ ಫಲಾನುಭವಿಗಳು ಬಿಜೆಪಿಯವರಿಗೆ ಸರಿಯಾಗಿ ಪಾಠ ಹೇಳಿ. ಬಿಜೆಪಿಯವರ ಸುಳ್ಳುಗಳಿಗೆ ತಲೆ ಕೊಟ್ಟು ಮೋಸ ಹೋಗದೆ ಬಿಜೆಪಿ ಸುಳ್ಳುಗಳಿಗೆ ಸರಿಯಾದ ಉತ್ತರ ಕೊಡಿ ಎಂದು ಸಿಎಂ ಮನವಿ ಮಾಡಿದರು.


ನಾವು ಜಾರಿಗೊಳಿಸಿದ ಬಡ್ತಿ ಮೀಸಲಾತಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯಿತು. ಅದನ್ನು ಮೊದಲಿಗೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಗುತ್ತಿಗೆಯಲ್ಲಿ ಮೀಸಲಾತಿ ಮೊದಲಿಗೆ ತಂದಿದ್ದು ನಮ್ಮ ಸರ್ಕಾರ. ಇದನ್ನು ನಾಡಿನ‌ ಜನತೆ ಅರ್ಥಮಾಡಿಕೊಳ್ಳಬೇಕು.ನಾನು ಹೇಳಿದ್ದೀನಿ ಎನ್ನುವ ಕಾರಣಕ್ಕೆ ನೀವು ಇದನ್ನೆಲ್ಲಾ ನಂಬಬೇಡಿ. ಸತ್ಯ, ಸುಳ್ಳನ್ನು ಪರಾಮರ್ಷಿಸಿ, ವಿವೇಚಿಸಿ. ಸತ್ಯವನ್ನು ಧೈರ್ಯವಾಗಿ-ಬಹಿರಂಗವಾಗಿ ಮಾತಾಡುವ ಧೈರ್ಯವನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಬೆಳೆಸಿಕೊಳ್ಳಬೇಕು. ಇದೇ ಮಹರ್ಷಿ ವಾಲ್ಮೀಕಿ ಅವರಿಗೆ ನಾವು, ನೀವು ಸಲ್ಲಿಸುವ ಗೌರವ ಎಂದು ಅವರು ಹೇಳಿದರು.


ಇದನ್ನೂ ಓದಿ: ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಪದ ಬಳಕೆ: ಐಜಿಪಿ ಚಂದ್ರಶೇಖರ್‌ ವಿರುದ್ದ ಕ್ರಮಕ್ಕೆ ಸೂಚನೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.