ಕಿಡಿಗೇಡಿಗಳು ಏನೇ ಮಾಡಿದರೂ ತಲೆಕೆಡಿಸಿಕೊಳ್ಳಬೇಡಿ: ಮೈಸೂರು ಚಲೋ ಪಾದಯಾತ್ರೆಯಲ್ಲಿ ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಸ್ಪಷ್ಟ ಸಂದೇಶ
ಯಾರೇ ಕಿಡಿಗೇಡಿಗಳು ನೋವು ಕೊಟ್ಟರು ಅದಕ್ಕೆ ರಿಯಾಕ್ಟ್ ಮಾಡಬೇಡಿ, ಮಂಡ್ಯ ಜಿಲ್ಲೆಯ ಕಾರ್ಯಕರ್ತರು ಸ್ವಾಭಿಮಾನಿಗಳು ಇದ್ದಾರೆ. ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು ನಿಖಿಲ್ ಕುಮಾರಸ್ವಾಮಿ.
ಮಂಡ್ಯ: ಯಾರೇ ಕಿಡಿಗೇಡಿಗಳು ಬಂದು ಏನೇ ಚೇಷ್ಟೆ ಮಾಡಿದರೂ ಕಾರ್ಯಕರ್ತರು ತಾಳ್ಮೆ ಕಳೆದುಕೊಳ್ಳಬಾರದು. ನಮ್ಮ ಉದ್ದೇಶ ಪಾದಯಾತ್ರೆ, ನಮ್ಮ ಹೋರಾಟ ಮೂಡಾ, ವಾಲ್ಮೀಕಿ ಹಗರಣಗಳ ವಿರುದ್ಧ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿವಿಮಾತು ಹೇಳಿದ್ದಾರೆ.
ಇದನ್ನೂ ಓದಿ: 4,400 ರೂ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ: ಇಂದು ಎಷ್ಟಿದೆ 10 ಗ್ರಾಂ ಬಂಗಾರದ ಬೆಲೆ?
ಈ ಬಗ್ಗೆ ಮಾಧ್ಯಮಗಳ ಮೂಲಕ ಕಾರ್ಯಕರ್ತರಿಗೆ ಮನವಿ ಮಾಡಿದ ಅವರು, ನಿನ್ನೆಯ ದಿನ ಮಂಡ್ಯದಲ್ಲಿ ನಡೆದ ಘಟನೆ ಬೇಸರ ವ್ಯಕ್ತಪಡಿಸಿದರು.
ನಿನ್ನೆ ನಡೆದ ಘಟನೆಯ ಬಗ್ಗೆ ನಮ್ಮ ನಾಯಕರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಒಂದು ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಮಾಜಿ ಪ್ರಧಾನಿಗಳಾದ ದೇವೇಗೌಡರ ಸಂಬಂಧ ತುಂಬಾ ಅತ್ಯುತ್ತಮವಾಗಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಕಾರಣಕ್ಕೂ ಬೇರೆ ಬೇರೆ ರೀತಿಯ ಘಟನೆಗಳಿಗೆ ಅವಕಾಶ ಕೊಡಬಾರದು, ಕಾರ್ಯಕರ್ತರು ತಾಳ್ಮೆಯಿಂದ ಸಮಾಧಾನಕರವಾಗಿ ವರ್ತನೆ ಮಾಡಬೇಕು ಎಂದು ಹೇಳಿದರು.
ಯಾರೇ ಕಿಡಿಗೇಡಿಗಳು ನೋವು ಕೊಟ್ಟರು ಅದಕ್ಕೆ ರಿಯಾಕ್ಟ್ ಮಾಡಬೇಡಿ, ಮಂಡ್ಯ ಜಿಲ್ಲೆಯ ಕಾರ್ಯಕರ್ತರು ಸ್ವಾಭಿಮಾನಿಗಳು ಇದ್ದಾರೆ. ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು ನಿಖಿಲ್ ಕುಮಾರಸ್ವಾಮಿ.
ಈ ಘಟನೆ ಬಗ್ಗೆ ಕೋ ಆರ್ಡಿನೇಷನ್ ಕಮಿಟಿಯ ಎರಡು ಪಕ್ಷದ ಸದಸ್ಯರು ಈ ಘಟನೆಯ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೊಟ್ಟಿದ್ದಾರೆ. ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಅನ್ನೋದು ನೋಡೊಣ ಎಂದು ತಿಳಿಸಿದರು.
ಇದೇ ವೇಳೆ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಿದ್ದೇವೆ. ಮೈಸೂರು ಚಲೋ ಪಾದಯಾತ್ರೆ ಯಶಸ್ವಿಯಾಗಿ ಸಾಗುತ್ತಿದೆ. ಪಾದಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ರೈತರು ನಮ್ಮ ಜೊತೆ ಹೆಜ್ಜೆ ಹಾಕುತ್ತಿದ್ದಾರೆ ಎಂದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ