ಚಾಮರಾಜನಗರ: ಶಾಲಾ ವಿದ್ಯಾರ್ಥಿಗಳಿಗೆ ಹೆಬ್ಬುಲಿ, ಪೆಪ್ಸಿ ಸೇರಿದಂತೆ ವಿಚಿತ್ರವಾದ ಹೇರ್ ಕಟ್ ನ್ನು ಮಾಡಬೇಡಿ ಎಂದು ಶಿಜ್ಷಕರೊಬ್ಬರು ಸವಿತಾ ಸಮಾಜದ ಸಂಘದ ಅಧ್ಯಕ್ಷರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.
ಕೊಳ್ಳೇಗಾಲದ ಬಾಪುನಗರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶಾಂತರಾಜು ಎಂಬವರು ಈ ಪತ್ರವನ್ನು ಬರೆದು ಸವಿತಾ ಸಮಾಜ ಸಂಘದ ಅಧ್ಯಕ್ಷರಿಗೆ ಮನವಿ ಮಾಡಿಕೊಂಡಿದ್ದಾರೆ.ಇದಕ್ಕೆ ಸಕಾರಾತ್ಮಕವಾಗಿ ಸ್ಪಂದನೆ ದೊರೆತಿದ್ದು ಶಾಲಾ ವಿದ್ಯಾರ್ಥಿಗಳಿಗೆ ಶಿಸ್ತುಬದ್ಧವಾದ ಹೇರ್ ಕಟಿಂಗ್ ಮಾಡಲು ಹೇರ್ ಸಲೂನ್ ಗಳಿಗೆ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ವಿವಿಧ ಧರ್ಮಗಳಲ್ಲಿ ʼದಯವೇ ಧರ್ಮದ ಮೂಲʼ ಎಂದಿದ್ದಾರೆ : ಸಿಎಂ ಸಿದ್ದರಾಮಯ್ಯ
ಚಿತ್ರ ವಿಚಿತ್ರ ಕಟಿಂಗ್ ಗೆ ಬೇಸರ: ಶಾಲಾ ವಿದ್ಯಾರ್ಥಿಗಳು ಇತ್ತೀಚಿನ ದಿನಗಳಲ್ಲಿ ಹೆಬ್ಬುಲಿ ಕಟಿಂಗ್, ಪೆಪ್ಸಿ ಕಟಿಂಗ್, ಚೈನಾ ಕಟಿಂಗ್ ಎಂದು ವಿಚಿತ್ರವಾದ ಹೇರ್ ಸ್ಟೈಲ್ ಮಾಡಿಕೊಂಡು ಬರುತ್ತಿದ್ದು ನೋಡಲು ಹಿಂಸೆ ಆಗುತ್ತಿದೆ ಎಂದು ಕೊಳ್ಳೇಗಾಲ ಸವಿತಾ ಸಮಾಜದ ಸಂಘದ ಅಧ್ಯಕ್ಷ ರಾಚಶೆಟ್ಟಿ ಅವರಿಗೆ ಕೋರಿಕೊಂಡಿದ್ದಾರೆ.
ಇದನ್ನೂ ಓದಿ: ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಅದನ್ನು ಯಾರು ಸೃಷ್ಟಿಸಿದವರು..? : ಗೃಹ ಸಚಿವರ ಪ್ರಶ್ನೆ
ಈಗಾಗಲೇ, ಸಾಕಷ್ಟು ಬಾರಿ ಹೇಳಿದರೂ, ಪಾಲಕರಿಗೆ ಚಿತ್ರ-ವಿಚಿತ್ರ ಕಟಿಂಗ್ ಮಾಡಿಸಬೇಡಿ ಎಂದು ತಿಳಿಸಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಈ ರೀತಿ ಕಟಿಂಗ್ ಮಾಡಿಸಿಕೊಂಡು ಬರುವುದು ಶಾಲಾ ವಾತಾವರಣಕ್ಕೆ ಅಪಹಾಸ್ಯದ ರೀತಿ ಆಗುತ್ತಿದ್ದು ಸಲೂನ್ ಶಾಪ್ ಗಳಿಗೆ ಈ ಬಗ್ಗೆ ಆದೇಶ ಕೊಟ್ಟು ವಿದ್ಯಾರ್ಥಿಗಳಿಗೆ ಹೆಬ್ಬುಲಿ ಕಟಿಂಗ್ ಮಾಡಬಾರದು ಎಂದು ಸೂಚಿಸಿ ಎಂದು ಮನವಿ ಮಾಡಿದ್ದಾರೆ.
ಈ ಸಂಬಂಧ ಶಾಂತರಾಜು ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳ ಜೀವನ ಶಿಸ್ತಿನಿಂದ ಇರಬೇಕೆಂದು ಪತ್ರ ಬರೆದಿದ್ದೇನೆ, ಅದಕ್ಕೆ ಸಂಘವೂ ಮೀಟಿಂಗ್ ಕರೆದಿದ್ದು ಎಲ್ಲಾ ಸಲೂನ್ ನವರಿಗೂ ಈ ಬಗ್ಗೆ ಸೂಚನೆ ಕೊಡುತ್ತೇನೆ ಎಂದು ಭರವಸೆ ಕೊಟ್ಟಿದ್ದಾರೆ, ಕಾಲೇಜು ವಿದ್ಯಾರ್ಥಿಗಳು ತಮ್ಮಿಚ್ಛೆಯ ಕಟಿಂಗ್ ಮಾಡಿಸಿಕೊಳ್ಳಲಿ ಆದರೆ ಶಾಲಾ ವಿದ್ಯಾರ್ಥಿಗಳು ಚಿತ್ರ-ವಿಚಿತ್ರ ಕಟಿಂಗ್ ಮಾಡಿಸಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.