ರಾಜಕೀಯ ವಾಕ್ಸಮರದಲ್ಲಿ ನನ್ನ ಹೆಸರು ಎಳೆದು ತರಬೇಡಿ.ನಾನು ರಾಜಕೀಯದಲ್ಲಿ ಇಲ್ಲ - ಟಬು ರಾವ್

ಆರೋಪ ಪ್ರತ್ಯಾರೋಪಗಳ ಸಂದರ್ಭದಲ್ಲಿ ಅನಗತ್ಯವಾಗಿ ಬಿಜೆಪಿ ತಮ್ಮ ಹೆಸರನ್ನ ಎಳೆದು ತರುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ನಾನು ರಾಜಕೀಯದಲ್ಲಿ ಇಲ್ಲ.‌ ರಾಜಕೀಯ ಕುಟುಂಬದಲ್ಲಿರುವ ಒಬ್ಬ ಮಹಿಳೆ ಅಷ್ಟೇ. ರಾಜಕೀಯಕ್ಕೂ ನನಗು ಸಂಬಂಧವಿಲ್ಲ. ನಾನು ಮುಸ್ಲಿಂ ಕುಟುಂಬದಿಂದ ಬಂದು ಹಿಂದು ಕುಟುಂಬದಲ್ಲಿದ್ದೇನೆ ಎಂಬ ಒಂದೇ ಕಾರಣಕ್ಕೆ ಬಿಜೆಪಿ ತನ್ನ ರಾಜಕೀಯಕ್ಕಾಗಿ ನನ್ನ ಹೆಸರನ್ನ ತಳುಕು ಹಾಕುವುದು ಸರಿಯಲ್ಲ ಎಂದು ಟಬು ರಾವ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

ರಾಜಕೀಯ ವಾಕ್ಸಮರದಲ್ಲಿ ನನ್ನ ಹೆಸರು ಎಳೆದು ತರಬೇಡಿ.ನಾನು ರಾಜಕೀಯದಲ್ಲಿ ಇಲ್ಲ - ಟಬು ರಾವ್
Image Credit: file photo

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More