ಪೊಲೀಸರಿಗೆ ಕೆಲಸ ಕೊಡಬೇಡಿ: ಗೃಹ ಸಚಿವರ ಎಚ್ಚರಿಕೆ

ನಾಳೆಯಿಂದ ರಾಜ್ಯದ ಶಾಲೆ ಹಾಗೂ ಕಾಲೇಜುಗಳಲ್ಲಿ ಯಥಾಸ್ಥಿತಿ ಇರಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.ಈ ಮೂಲಕ ಹಲವು ಗೊಂದಲಗಳಿಗೆ ತೆರೆ ಬಿದ್ದಂತಾಗಿದೆ.   

Written by - Zee Kannada News Desk | Last Updated : Feb 10, 2022, 08:47 PM IST
  • ನಾಳೆಯಿಂದ ರಾಜ್ಯದ ಶಾಲೆ ಹಾಗೂ ಕಾಲೇಜುಗಳಲ್ಲಿ ಯಥಾಸ್ಥಿತಿ ಇರಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.ಈ ಮೂಲಕ ಹಲವು ಗೊಂದಲಗಳಿಗೆ ತೆರೆ ಬಿದ್ದಂತಾಗಿದೆ.
ಪೊಲೀಸರಿಗೆ ಕೆಲಸ ಕೊಡಬೇಡಿ: ಗೃಹ ಸಚಿವರ ಎಚ್ಚರಿಕೆ title=

ಬೆಂಗಳೂರು: ನಾಳೆಯಿಂದ ರಾಜ್ಯದ ಶಾಲೆ ಹಾಗೂ ಕಾಲೇಜುಗಳಲ್ಲಿ ಯಥಾಸ್ಥಿತಿ ಇರಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.ಈ ಮೂಲಕ ಹಲವು ಗೊಂದಲಗಳಿಗೆ ತೆರೆ ಬಿದ್ದಂತಾಗಿದೆ.

ಇದನ್ನೂ ಓದಿ : High Court : 'ತೀರ್ಪು ಬರುವವರೆಗೂ ಧಾರ್ಮಿಕ ಉಡುಗೆ ತೊಡಬಾರದು' : ಹೈಕೋರ್ಟ್‌ ಖಡಕ್ ಸೂಚನೆ

ಹೈಕೋರ್ಟ್ ನಲ್ಲಿ ನಡೆಯುತ್ತಿದ್ದ ವಿಚಾರಣೆ ಮುಂದೂಡಿಕೆಯಾಗಿದೆ.ಯಾವುದೇ ಧಾರ್ಮಿಕ ಗುರುತುಗಳನ್ನು ಬಳಸಬಾರದು ಎಂದು ಹೈಕೋರ್ಟ್ ಹೇಳಿದೆ.ನಾಳೆಯಿಂದ ಯಥಾಸ್ಥಿತಿ ಮುಂದುವರೆಯಬಹುದು.ಹೀಗಾಗಿ ನಾಳೆಯಿಂದ ರಾಜ್ಯದ ಶಾಲೆ, ಕಾಲೇಜುಗಳಲ್ಲಿ ಯಥಾಸ್ಥಿತಿ ಇರಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಹಿಜಾಬ್, ಕೇಸರಿ ಶಾಲು ವಿವಾದದ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಕಿಡಿ

ಹಂತ-ಹಂತವಾಗಿ ಶಾಲೆಗಳನ್ನು ತೆರೆಯಲಾಗುತ್ತದೆ.ಪರೀಕ್ಷೆ ಇರುವ ಕಾರಣ ಆ ಕಡೆ ಗಮನಕೊಡಬೇಕಿದೆ.ಪೊಲೀಸರಿಗೆ ಕೆಲಸ ಕೊಡದಂತೆ ಶಾಂತಿ ಕಾಪಾಡಬೇಕು.ಸಿಎಂ ಜೊತೆ ಸಭೆ ಇದ್ದು ಅಲ್ಲಿಗೆ ತೆರಳುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ರಾಜ್ಯದ ಹಿಜಬ್ ವಿವಾದ ದೇಶಾದ್ಯಂತ ಸದ್ದು ಮಾಡುತ್ತಿದ್ದು, ಜಾಗತಿಕ ಮಟ್ಟದಲ್ಲೂ ಚರ್ಚೆಯಾಗುತ್ತಿದೆ.ರಾಜ್ಯ ಸರ್ಕಾರ ಕೂಡ ಶಾಂತಿ ಕಾಪಾಡಲು ಹಲವು ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು  Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News