ಬೆಂಗಳೂರು: ಸಿದ್ದರಾಮಯ್ಯ ತಮ್ಮ ಕಾಲು ಭದ್ರವಾಗಿ ಇಟ್ಟುಕೊಳ್ಳಲಿ ಎಂಬ ಸಚಿವ ಸಿ.ಟಿ. ರವಿ ಹೇಳಿಕೆಗೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಟಾಂಗ್ ನೀಡಿದ್ದು, ಸಿ.ಟಿ ರವಿ ಅವರೇ ನೀವಿನ್ನೂ ಯುವಕರು ಹೆಚ್ಚು ಸ್ಪೀಡಾಗಿ ಹೋಗ್ಬೇಡಿ, ಜೋಪಾನ ಎಂದಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಕಾಲು ಎಳೆಯುವವರ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಅವರ ಕಾಲು ಭದ್ರವಾಗಿ ಇರಿಸಿಕೊಳ್ಳಲಿ ಎಂದು ಸಚಿವ ಸಿ.ಟಿ. ರವಿ ಹೇಳಿದ್ದರು.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಸಿ.ಟಿ ರವಿ ಅವರೇ, ನಾನು ಕಾಲು ಜಾರದ ಹಾಗೆ ಎಚ್ಚರದಿಂದ ನಾಲ್ಕು ದಶಕಗಳ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ನೀವು ಇನ್ನೂ ಯುವಕರು, ಹೆಚ್ಚು ಸ್ಪೀಡಾಗಿ ಹೋಗ್ಬೇಡಿ, ಜೋಪಾನ. ಅಪಘಾತ ಮಾಡಿಬಿಟ್ಟರೆ ಎಲ್ಲ ಸಂದರ್ಭಗಳಲ್ಲಿಯೂ ರಕ್ಷಣೆಗೆ ಹಿತೈಷಿಗಳಿರುವುದಿಲ್ಲ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಸನ್ಮಾನ್ಯ @CTRavi_BJP
ಅವರೇ,
ನಾನು ಕಾಲು ಜಾರದ ಹಾಗೆ ಎಚ್ಚರದಿಂದ ನಾಲ್ಕು ದಶಕಗಳ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ.
ನೀವು ಇನ್ನೂ ಯುವಕರು,
ಹೆಚ್ಚು ಸ್ಪೀಡಾಗಿ ಹೋಗ್ಬೇಡಿ, ಜೋಪಾನ.
ಅಪಘಾತ ಮಾಡಿಬಿಟ್ಟರೆ
ಎಲ್ಲ ಸಂದರ್ಭಗಳಲ್ಲಿಯೂ ರಕ್ಷಣೆಗೆ ಹಿತೈಷಿಗಳಿರುವುದಿಲ್ಲ.@INCKarnataka pic.twitter.com/BUjjZnuW99— Siddaramaiah (@siddaramaiah) August 30, 2019