‘ತಾಳ್ಮೆ ಕಳೆದುಕೊಳ್ಳಬೇಡಿ` ಸಚಿವ ಸ್ಥಾನ ತಪ್ಪಿದ ಶಾಸಕರಿಗೆ ಡಿಕೆಶಿ ಸಂದೇಶ
ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿರುವ ಬಗ್ಗೆ ಅಸಮಾಧಾನಗೊಂಡಿರುವ ಶಾಸಕರಿಗೆ ಯಾವತ್ತೂ ತಾಳ್ಮೆಯನ್ನು ಕಳೆದುಕೊಳ್ಳಬೇಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿವಿ ಮಾತು ಹೇಳಿದ್ದಾರೆ.
ಬೆಂಗಳೂರು: ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿರುವ ಬಗ್ಗೆ ಅಸಮಾಧಾನಗೊಂಡಿರುವ ಶಾಸಕರಿಗೆ ಯಾವತ್ತೂ ತಾಳ್ಮೆಯನ್ನು ಕಳೆದುಕೊಳ್ಳಬೇಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿವಿ ಮಾತು ಹೇಳಿದ್ದಾರೆ.
ಇದನ್ನೂ ಓದಿ: ಹೊಸನಗರದಲ್ಲಿ ಕುಡಿಯುವ ನೀರಿಗೂ ಹಾಹಾಕಾರ.. ಸಗಣಿ ನೀರನ್ನ ಮೈಮೇಲೆ ಎರಚಿಕೊಂಡು ಪ್ರತಿಭಟನೆ
ಈ ಕುರಿತಾಗಿ ಶನಿವಾರದಂದು ಮಾತನಾಡಿರುವ ಅವರು " ಧರಂಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲಿ ನನಗೆ ಸಂಪುಟ ಸೇರಲು ಯಾವುದೇ ಅವಕಾಶ ಸಿಗಲಿಲ್ಲ.ಆದರೆ ನಾನು ನನ್ನ ತಾಳ್ಮೆ ಕಳೆದುಕೊಳ್ಳಲಿಲ್ಲ.ಅದೇ ರೀತಿ ಕ್ಯಾಬಿನೆಟ್ ಹುದ್ದೆಯನ್ನು ನಿರಾಕರಿಸಿದವರೂ ಸಹ ತಾಳ್ಮೆಯಿಂದಿರಬೇಕು.ಎಲ್ಲರಿಗೂ ಅವಕಾಶ ಬರುತ್ತವೆ ಎಂದು ಅವರು ಹೇಳಿದ್ದಾರೆ.
ಏತನ್ಮಧ್ಯೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿ ಅವರಿಗೆ ಮುಂಬರುವ ದಿನಗಳಲ್ಲಿ ಕ್ಯಾಬಿನೆಟ್ ಸ್ಥಾನ ನೀಡಬೇಕೆಂದು ಗುರು ಸಿದ್ದರಾಜಯೋಗೀಂದ್ರ ಸ್ವಾಮೀಜಿ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅನುಭವಿ ಮತ್ತು ಉತ್ತಮ ಸ್ವಭಾವದ ರಾಜಕಾರಣಿಗಳಾಗಿದ್ದು, ಅವರಿಗೆ ಸಂಪುಟ ಸ್ಥಾನ ಸಿಗಬೇಕಿತ್ತು.ಲಕ್ಷ್ಮಣ ಸವದಿ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ಪಕ್ಷಕ್ಕೆ ಲಾಭವಾಗಲಿದೆ ಎಂದರು.ಲಕ್ಷ್ಮಣ ಸವದಿ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಸಂದೇಶಗಳನ್ನು ಹಾಕಲಾರಂಭಿಸಿದ್ದಾರೆ. "ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಹೊಸ ಶಕ್ತಿ ಬಂದಿದೆ ಎಂದು ನೀವು ಸಿದ್ದರಾಮಯ್ಯಸಮರ್ಥಿಸಿಕೊಂಡಿದ್ದೀರಿ.ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸವದಿ ಕಾರಣ.ಆದರೆ,ನೀವು ಅವರನ್ನು ಮರೆತಿದ್ದೀರಿ" ಎನ್ನುವ ಪೋಸ್ಟ್ ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ. ದೇಶಪಾಂಡೆ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಸಚಿವ ಸಂಪುಟದ ಸ್ಥಾನ ವಂಚಿತರಾಗಿರುವ ಬಗ್ಗೆ ಅಸಮಾಧಾನಗೊಂಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ