ಮೈಸೂರು: ಈ ವರ್ಷ ಶಾಲೆಗಳನ್ನು ಆರಂಭಿಸುವುದು ಬೇಡ ಎನ್ನುವುದು ಸರ್ಕಾರಕ್ಕೆ ನನ್ನ ವೈಯುಕ್ತಿಕ ಸಲಹೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಈ ವರ್ಷ ಶಾಲೆಗಳನ್ನ ಆರಂಭಿಸುವುದು ಬೇಡ. ಆನ್‌ಲೈನ್ ಕ್ಲಾಸ್ (Online Class) ಮಾಡಿ ಎಲ್ಲರನ್ನು ಪಾಸ್ ಮಾಡಲಿ. ಸಂಪೂರ್ಣ ಕೊರೊನಾ ಮುಕ್ತವಾದ ನಂತರ ಶಾಲೆಗಳನ್ನ ಆರಂಭಿಸಲಿ. ತರಾತುರಿಯಲ್ಲಿ ಶಾಲೆ ಆರಂಭಿಸೋದು ಬೇಡ ಎಂದು ಹೇಳಿದರು.
ಇದೇ ವೇಳೆ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ. ಜನ ನಮ್ಮ ಸರ್ಕಾರ ಮತ್ತು ಈಗಿನ ಸರ್ಕಾರವನ್ನು ಹೋಲಿಕೆ ಮಾಡಿ ನೋಡುತ್ತಿದ್ದಾರೆ. ಇವು ಕಾಂಗ್ರೆಸ್ ಪರವಾದ ಮತಗಳಾಗಿವೆ ಎಂದು ಹೇಳಿದರು.
ರಾಜ್ಯದಲ್ಲೂ ಬ್ಯಾನ್ ಆಗುತ್ತಾ ಪಟಾಕಿ? ರಾಜ್ಯ ಸರ್ಕಾರದ ಯೋಚನೆ ಏನು?
ಶಿರಾದಲ್ಲಿ ಕಳೆದ ಬಾರಿ ಅಪಪ್ರಚಾರ ಆಗಿತ್ತು. ರಾಜರಾಜೇಶ್ವರಿ ನಗರದಲ್ಲಿ ಕಳೆದ ಬಾರಿ ಕಾಂಗ್ರೆಸ್ ಗೆದ್ದಿತ್ತು. ಪ್ರಚಾರದ ಸಂದರ್ಭದಲ್ಲಿ ಜನರು ಕಾಂಗ್ರೆಸ್ ಪರ ಒಲವು ತೋರಿದ್ದರು. ಈ ಎಲ್ಲಾ ಕಾರಣಗಳಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಯಡಿಯೂರಪ್ಪ ಬದಲಾವಣೆಯ ನಿಶ್ಚಿತ:
ಉಪಚುನಾವಣೆ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆ. ಬಿಜೆಪಿ ನಾಯಕರು ಮುಖ್ಯಮಂತ್ರಿ ಬದಲಾವಣೆ ಮಾಡುತ್ತಾರೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯೋದಿಲ್ಲ. 'i am very confident ಯಡಿಯೂರಪ್ಪ ಬದಲಾಗ್ತಾರೆ'. ಇದನ್ನು ನನಗೆ ದೆಹಲಿಯಿಂದಿ ಬಂದಿರುವ ಮಾಹಿತಿ ಆಧಾರದ ಮೇಲೆ ಹೇಳುತ್ತಿದ್ದೇನೆ ಎಂದರು.
#ಉತ್ತರಕೊಡಿ_ಬಿಎಸ್‌ವೈ : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್
ನಾನು ಯಡಿಯೂರಪ್ಪ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು ಒಂದು ಕಾರಣ ಇರಬಹುದು. ಇದಕ್ಕೂ ಮಿಗಿಲಾಗಿ ಹಲವು ದಿನದಿಂದ ಮುಖ್ಯಮಂತ್ರಿ ಬದಲಾವಣೆ ಮಾಡುವ ಚಿಂತನೆ ಬಿಜೆಪಿಯಲ್ಲಿ ಇದೆ.
ಹಾಗಾಗಿ ಉಪಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೇಳಗಿಳಿಯುತ್ತಾರೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಟ್ರಂಪ್ ಸೋಲು ಖಚಿತ :
ಇದೇ ವೇಳೆ ಅಮೇರಿಕಾದ ಅಧ್ಯಕ್ಷೀಯ ಚುನಾವಣೆ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಅಮೆರಿಕಾದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಸರು ನಡೆಯೋದಿಲ್ಲ. ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಂಡಿತವಾಗಿ ಸೋಲು ಅನುಭವಿಸುತ್ತಾರೆ. ಟ್ರಂಪ್ ಮೋದಿ ಹೆಸರು ಹೋಳಿಕೊಂಡು ಮತ ಕೇಳಿದ್ದರು. ಅಮೆರಿಕಾದ ಚುನಾವಣೆಯೇ ಬೇರೆ. ಅಲ್ಲಿನ ಜನ ಮೋದಿ ನೋಡಿ ವೋಟು ಹಾಕಲ್ಲ. ಅನಿವಾಸಿ ಭಾರತೀಯರು ಕೂಡ ಮೋದಿ ಮುಖ ನೋಡಿಕೊಂಡು ವೋಟು ಕೊಡಲ್ಲ. ಭಾರತದಲ್ಲೇ ಮೋದಿ ವಿರುದ್ಧ ಜನಾಭಿಪ್ರಾಯ ಶುರುವಾಗಿದೆ ಎಂದರು.
ಅರ್ಥ ವ್ಯವಸ್ಥೆ ಹಾಳು ಮಾಡಿದ ಮೋದಿ :
ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಅರ್ಥ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ. ದೇಶದ ಜಿಡಿಪಿ ಪಾತಾಳಕ್ಕೆ ಕುಸಿದಿದೆ. ಹೀಗಾಗಿ ಯುವ ಜನರು ನರೇಂದ್ರ ಮೋದಿ ವಿರುದ್ಧ ಸಿಟ್ಟು ಹೊರಹಾಕುತ್ತಿದ್ದಾರೆ. ಬಿಹಾರದ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಬಿಜೆಪಿಯ ಮಿತ್ರಪಕ್ಷದ ನಾಯಕ ಸಿಎಂ ನಿತೀಶ್ ಕುನಾರ್ ಮೇಲೆ ಜನ ಈರುಳ್ಳಿ ಎಸೆದಿದ್ದಾರೆ. ಇದು ಮೋದಿ ವಿರುದ್ಧದ ಜನಾಭಿಪ್ರಾಯಕ್ಕೆ ಉದಾಹರಣೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.