ಬೆಂಗಳೂರು: ಡಬಲ್ ಡೆಕ್ಕರ್ ಬಸ್ ಗಳನ್ನು ಸಿಲಿಕಾನ್ ಸಿಟಿಯ ರಸ್ತೆಗಿಳಿಸಲು ಬಿಎಂಟಿಸಿ ಚಿಂತನೆ ನಡೆಸಿದೆ. ಶೀಘ್ರದಲ್ಲೇ ಡಬಲ್ ಡೆಕ್ಕರ್ ಬಸ್ಸುಗಳನ್ನು ರಸ್ತೆಗಿಳಿಸುಂತೆ ಬಿಎಂಟಿಸಿ ಅಧ್ಯಕ್ಷ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಹೌದು, ಉದ್ಯಾನ ನಗರಿಯ ಪ್ರವಾಸಿ ತಾಣಗಳ ವೀಕ್ಷಣೆಗೆ ಡಬಲ್ ‌ಡೆಕ್ಕರ್ ಬಸ್ಗಳನ್ನು ಪರಿಚಯಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚಿಂತಿಸಿದೆ. ಮೂರು ದಶಕಗಳ ಹಿಂದೆ ನಗರದಲ್ಲಿ ಸಂಚಾರ ನಡೆಸಿದ್ದ ಡಬಲ್ ಡೆಕ್ಕರ್ ಬಸ್ಸುಗಳನ್ನು ಪರಿಚಯಿಸಲು ಮುಂದಾಗಿರುವ ಬಿಎಂಟಿಸಿ ಸದ್ಯ 5 ನಾನ್ ಎಸಿ ಡಬ್ಬಲ್ ಡೆಕ್ಕರ್ ಬಸ್ಸುಗಳ ಉತ್ಪಾದಕರಿಗಾಗಿ ಹುಡುಕಾಟದಲ್ಲಿ ತೊಡಗಿದೆ. 


ಡಬಲ್ ಡೆಕ್ಕರ್ ಬಸ್ಸುಗಳ ಬಗ್ಗೆ ಮಕ್ಕಳು ಮತ್ತು ಪೋಷಕರಿಂದ ಮನವಿಗಳು ಬಂದ ಹಿನ್ನೆಲೆ ಹಾಗೂ ಸಾರ್ವಜನಿಕ ಸಾರಿಗೆಯತ್ತ ಮಕ್ಕಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ಬರುತ್ತಿದೆ ಎಂದು ಬಿಎಂಟಿಸಿ ಅಧ್ಯಕ್ಷ ತಿಳಿಸಿದ್ದಾರೆ.