ಬೆಂಗಳೂರು: ಕರ್ನಾಟಕದ ಸುರಕ್ಷತೆಗೆ ಡಬಲ್ ಎಂಜಿನ್ ಸರ್ಕಾರ ಅಸ್ತಿತ್ವದಲ್ಲಿರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕರ್ನಾಟಕ ಪ್ರವಾಸದಲ್ಲಿರುವ ಅಮಿತ್ ಶಾ ಅವರ ಹೇಳಿಕೆಯನ್ನು ಉಲ್ಲೇಖಿಸಿ ಬಿಜೆಪಿ ಟ್ವೀಟ್ ಮಾಡಿದೆ.


COMMERCIAL BREAK
SCROLL TO CONTINUE READING

‘ಭಯೋತ್ಪಾದಕ ಸಂಘಟನೆ ಪಿಎಫ್ಐ ಮೇಲಿದ್ದ 1,700 ಪ್ರಕರಣಗಳನ್ನು ಕಾಂಗ್ರೆಸ್ ಹಿಂತೆಗೆದುಕೊಂಡಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಪ್ರಧಾನಿ ಮೋದಿಯವರು ಪಿಎಫ್ಐ ಸಂಘಟನೆಯನ್ನೇ ನಿಷೇಧ ಮಾಡಿದರು’ ಎಂದು ಕಾಂಗ್ರೆಸ್ ವಿರುದ್ಧ ಅಮಿತ್ ಶಾ ಗುಡುಗಿದ್ದಾರೆ.


“ಮಂಡ್ಯಕ್ಕೆ ದೇಶ ಬದಲಾವಣೆ ಮಾಡುವ ಶಕ್ತಿ ಇದೆ”


‘ಮಂಗಳೂರು ಬಂದರಿನ ಅಭಿವೃದ್ಧಿಗೆ ನಾವು ಪಣ ತೊಟ್ಟಿದ್ದೇವೆ. 2.5 ಸಾವಿರ ಕೋಟಿ ರೂ. ವೆಚ್ಚದ 5 ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ. ಹಾಗಾಗಿ ನೀವು ಜೆಡಿಎಸ್‌ಗೆ ಮತ ಹಾಕಿದರೆ ಕಾಂಗ್ರೆಸ್‌ಗೆ ಮತ ಹಾಕಿದಂತೆ. ಬಿಜೆಪಿಗೆ ಮತ ಹಾಕಿದರೆ ನವಭಾರತ, ನವ ಕರ್ನಾಟಕ ನಿರ್ಮಾಣಕ್ಕಾಗಿ ಮತ ಚಲಾಯಿಸಿದಂತೆ’ ಎಂದು ಅಮಿತ್ ಶಾ ಹೇಳಿದ್ದಾರೆ.


ಬಿ.ಎಸ್.ಯಡಿಯೂರಪ್ಪನವರು ಕೈಗೊಂಡ ಉಪಕ್ರಮಗಳನ್ನು ಇಡೀ ದೇಶವೇ ಸ್ಮರಿಸುತ್ತಿದೆ’ ಎಂದು ಅಮಿತ್ ಶಾ ಹೇಳಿದ್ದಾರೆ.


50% ಡಿಸ್ಕೌಂಟ್ ನಲ್ಲಿ ಮುಗಿಬಿದ್ದು ದಂಡ ಕಟ್ಟಿದ ವಾಹನ ಚಾಲಕರು..!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.