ಬೆಂಗಳೂರು : ಬೆಂಗಳೂರು ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದ ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪ್ರಮುಖ ಮುಖಂಡರ ಸಭೆ ಜೆಪಿ ನಗರದ ಮಾಜಿ ಮುಖ್ಯಮಂತ್ರಿಗಳ ಅವರ ನಿವಾಸದಲ್ಲಿ ಮಾತಾನ್ನಾಡಿ,ನಾನು ಹೇಳಿರುವುದು ಸಿ.ಪಿ.ಯೋಗೇಶ್ವರ್ ಅವರ ಹೆಸರನ್ನು. ಅವರನ್ನು ಅಭ್ಯರ್ಥಿ ಮಾಡಿ ಎಂದಿದ್ದೆ,ಸಿ.ಪಿ.ಯೋಗೇಶ್ವರ್ ಅವರು ಕೂಡ ಮಂಜುನಾಥ್ ಅವರೇ ನಿಲ್ಲಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಮಿತ್ರ ಪಕ್ಷದ ವರಿಷ್ಠರು, ರಾಜ್ಯದ ಬಿಜೆಪಿ ನಾಯಕರ ಭಾವನೆಗಳನ್ನು ನಾವು ಗೌರವಿಸಬೇಕಿದೆ. ಭಾನುವಾರ ನಾನು ನಮ್ಮ ತಂದೆಯವರ ಜತೆ ಎರಡು ಗಂಟೆ ಕಾಲ ಚರ್ಚೆ ಮಾಡಿದೆ.ಮಂಜುನಾಥ್ ಅವರ ಸ್ಪರ್ಧೆ ವಿಚಾರವನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ. ನನ್ನ ತಂಗಿ ಮನೆಯಲ್ಲಿ ಕಣ್ಣೀರು ಹಾಕ್ತಾ ಇದಾಳೆ, ನಮ್ಮನ್ನು ಯಾಕೆ ರಾಜಕೀಯಕ್ಕೆ ಎಳೆಯುತ್ತಿರಿ, ನೆಮ್ಮದಿಯಿಂದ ಇದ್ದೇವೆ, ನಮಗೆ ರಾಜಕೀಯ ಬೇಡ ಅಂತ ಅಳ್ತಾ ಕೂತಿದ್ದಾಳೆ. ಇದು ನಮ್ಮ ಮನೆಯ ಪರಿಸ್ಥಿತಿ. ನನ್ನ ನೋವು ನನಗೇ ಗೊತ್ತು. ಆದರೆ, ಆ ಕಿರಾತಕರನ್ನು ಮಣಿಸಲೇಬೇಕು. ಇದು ನನ್ನ ಗುರಿ, ಎಂದರು.


COMMERCIAL BREAK
SCROLL TO CONTINUE READING

ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ:ಕಹಿಯನ್ನು ಮರೆತು ಕೆಲಸ ಮಾಡೋಣ.ಹಿಂದೆ ಆಗಿರುವ ತಪ್ಪುಗಳನ್ನು ಸರಿ ಮಾಡಿಕೊಂಡು ಮುಂದೆ ಹೋಗೋಣ. ನಿಷ್ಠಾವಂತ ಕಾರ್ಯಕರ್ತರು ನೀವಿದ್ದೀರಿ, ಎಂದು ಮುಖಂಡರ ಅಭಿಪ್ರಾಯ ಆಲಿಸಿದರು. ನಂತರ ಎಲ್ಲರ ಅಭಿಪ್ರಾಯ ಕೇಳಿದ ನಂತರ ಮುಖಂಡರಿಗೆ ಕೆಲ ಸ್ಪಷ್ಟ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ ಅವರು,ನಮ್ಮ ಕಾರ್ಯಕರ್ತರು, ಮುಖಂಡರು, ಪಕ್ಷದ ಹಿತರಕ್ಷಣೆ ಭರವಸೆ ನೀಡಿದರು.


ಇದನ್ನೂ ಓದಿ-ಮಂಡ್ಯ ಬಿಜೆಪಿಯಿಂದ ಜನರಿಗೆ ತಪ್ಪು ಮಾಹಿತಿ ಪ್ರಚಾರ


ರಾಮನಗರ ಕ್ಷೇತ್ರದ ಜನರು ಯಾವತ್ತೂ ಜಾತಿ ಮೇಲೆ ಚುನಾವಣೆ ಮಾಡಿದವರಲ್ಲ,ನಾನೆಂದೂ ಗುತ್ತಿಗೆದಾರರಿಂದ ಹಣ ಕೇಳಿದವನಲ್ಲ, ಚುನಾವಣೆ ಅದ ಮೇಲೆ ನಾನು ಊರುಗಳಲ್ಲಿ ಜಗಳ ತಂದಿಡಲಿಲ್ಲ.ನಿಮ್ಮಲ್ಲಿ ಒಬ್ಬನಾಗಿ ಪಕ್ಷಕ್ಕೆ ದುಡಿಮೆ ಮಾಡಿದ್ದೇನೆ. ಇವತ್ತು ಕಾಂಗ್ರೆಸ್ ನವರು ಯಾವ ರೀತಿ ನಡೆದುಕೊಳ್ಕುತ್ತಿದ್ದಾರೆ. ನಾನು ಯಾವ ರೀತಿ ನಡೆದುಕೊಂಡಿದ್ದೇನೆ.ಈ ಚುನಾವಣೆಯನ್ನು ಸವಾಲಾಗಿ ಸ್ವೀಕಾರ ಮಾಡಿ ಎಂದು ನಿಮಗೆ (ಕಾರ್ಯಕರ್ತರಿಗೆ) ಮನವಿ ಮಾಡುತ್ತೇನೆ.ರಾಮನಗರ ಜನರು ನಿಖಿಲ್ ರನ್ನು ಸೋಲಿಸಿದ್ದಾರೆ ಎಂದು ನಾನು ದೋಷ ಕೊಡಲ್ಲ,ನಮ್ಮದೇ ತಪ್ಪುಗಳಿಂದ ನಿಖಿಲ್ ಸೋತಿದ್ದಾರೆ, ಆ ತಪ್ಪುಗಳನ್ನು ಸರಿ ಮಾಡೋಣ.


ದೇವೇಗೌಡರು ಕಣ್ಣೀರು ಹಾಕೋದು ಅವರ ಕುಟುಂಬಕ್ಕೆ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ,ಅವರಿಗೆ ಆತ್ಮಸಾಕ್ಷಿ ಅನ್ನೋದು ಇದೆಯಾ? ಅವರು ಏನೆಲ್ಲಾ ಮಾಡಿದ್ದಾರೆ, ಏನೆಲ್ಲಾ ಕೆಡುಕು ಮಾಡಿದ್ದಾರೆ ಎನ್ನುವುದು ಈ ರಾಜ್ಯಕ್ಕೆ ಗೊತ್ತಿದೆ.ನಾವು ಹಾಗೆ ಮಾಡಿದ್ದೇವೆಯಾ? ಖಂಡಿತಾ ಇಲ್ಲ.ಇಡೀ ವಿಶ್ವವೇ ಮೋದಿ ಅವರನ್ನು ಗೌರವಿಸುತ್ತದೆ.ಅಂತಹ ಮೋದಿ ಅವರು ಅವರು ದೇವೇಗೌಡರು ಬಂದರೆ ಎಷ್ಟು ಗೌರವ ಕೊಡುತ್ತಾರೆ, ತಂದೆಯಂತೆ ಆದರಿಸುತ್ತಾರೆ. ಇದನ್ನು ಆ ವ್ಯಕ್ತಿ ಅರ್ಥ ಮಾಡ್ಕೊಳ್ಳಬೇಕು,ನಮ್ಮ ಪಕ್ಷದಿಂದಲೇ ಬೆಳೆದು ಹೋದ ಮಾಗಡಿ ನಾಯಕನ ಬಗ್ಗೆ ಪ್ರಸ್ತಾಪ ಮಾಡಿದ ಹೆಚ್ಡಿಕೆ,ಗೌಡರ ಮನೆಯಲ್ಲಿ ಅಳಿಯನನ್ನೇ ಹರಕೆಯ ಕುರಿ ಮಾಡಲು ಹೊರಟಿದ್ದಾರೆ ಎಂದು ಹೇಳಿದ್ದಾರೆ.ಆ ವ್ಯಕ್ತಿಗೆ ಸತ್ಯ ಗೊತ್ತಿಲ್ಲ. ಮಂಜುನಾಥ್ ಅವರು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ.ಲಕ್ಷಾಂತರ ಬಡ ಜನರ ಹೃದಯ ಕಾಪಾಡಿದ್ದಾರೆ,ದೇಶದಲ್ಲಿಯೇ ಅವರ ಸೇವೆಯನ್ನು ಕೊಂಡಾಡುತ್ತಾರೆ.ಅಂತಹ ವ್ಯಕ್ತಿ ದೆಹಲಿಗೆ ಹೋದರೆ ಇಡೀ ದೇಶಕ್ಕೆ ಸೇವೆ ಮಾಡಬಹುದು.ಅವರನ್ನು ಹರಕೆಯ ಕುರಿ ಮಾಡುತ್ತಿಲ್ಲ ನಾವು.ಎಲ್ಲರೂ ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿದ್ದಾರೆ, ಎಂದರು.


ಇದನ್ನೂ ಓದಿ-ಇಂದು ಮಂಡ್ಯದಲ್ಲಿ ಗ್ಯಾರಂಟಿ ಸಮಾವೇಶ


ನಿಖಿಲ್ ಕುಮಾರಸ್ವಾಮಿ ಹೇಳಿಕೆ :
ಈ ಮೈತ್ರಿ ದೇವೇಗೌಡರು, ನರೇಂದ್ರ ಮೋದಿ ಅವರ ಮಟ್ಟದಲ್ಲಿ ಆಗಿದೆ,2018ರ ಸರ್ಕಾರದ ಅವಧಿಯಲ್ಲಿ ಅದ ಕಹಿ ಅನುಭವ, ತುಮಕೂರಿನಲ್ಲಿ ದೇವೆಗೌಡರ ಸೋಲನ್ನು ನಾವು ಮರೆತಿಲ್ಲ.ಕಳೆದ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದು ನಾವು ಮಾಡಿದ ಇನ್ನೊಂದು ದೊಡ್ಡ ತಪ್ಪು.ಅದನ್ನು ಸರಿ ಮಾಡಿಕೊಳ್ಳುವ ಕಾಲ ಸನ್ನಿಹಿತವಾಗಿದೆ, ಈ ಚುನಾವಣೆ ನಿರ್ಣಾಯಕ.ಇನ್ನು 45 ದಿನಗಳ ಕಾಲ ಪಕ್ಷದ ಪರವಾಗಿ ಪ್ರಚಾರ, ಕೆಲಸ ಮಾಡುತ್ತೇನೆ,ನಮ್ಮ ಪಕ್ಷದ ಪರವಾಗಿ ಫಲಿತಾಂಶ ಬರಲು ಕಾಯಾ ವಾಚಾ ಮನಸಾ ಕೆಲಸ ಮಾಡುತ್ತೇನೆ.ನನಗೆ ಹಾಗೂ ಕುಮಾರಣ್ಣ ಅವರಿಗೆ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಅತೀವ ಒತ್ತಡವಿದೆ. ಇದನ್ನು ಪ್ರಾಮಾಣಿಕವಾಗಿ ನಿಮ್ಮ (ಮುಖಂಡರು) ಮುಂದೆ ಇಡುತ್ತೇನೆ.ದೇವೇಗೌಡರು 30 ವರ್ಷದಿಂದ ಪಕ್ಷವನ್ನು ಕಟ್ಟಿದ್ದಾರೆ.ನಮ್ಮ ತಂದೆಯವರು 15 ವರ್ಷಗಳಿಂದ ಪಕ್ಷವನ್ನು ಉಳಿಸಿಕೊಂಡು ಬಂದಿದ್ದಾರೆ.ಹೀಗಾಗಿ ಪಕ್ಷದ ಉಳಿವಿಗಾಗಿ ನಾನು ಈ ಚುನಾವಣೆಯಲ್ಲಿ ದುಡಿಯುತ್ತೇನೆ, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇನೆ, ಎಂದರು.


ಮಂಡ್ಯ ನಮ್ಮ ಪಕ್ಷದ ಹೃದಯ ಇದ್ದಂತೆ. ಅಲ್ಲಿ ಒಮ್ಮೆ ಎಲ್ಲಾ ಕ್ಷೇತ್ರಗಳನ್ನು ಜೆಡಿಎಸ್ ಗೆದ್ದಿತ್ತು. ಕಳೆದ ಚುನಾವಣೆಯಲ್ಲಿ ಕೆ ಆರ್ ಪೇಟೆ ಬಿಟ್ಟು ಎಲ್ಲಾ ಕಡೆ ಸೋತಿದ್ದೇವೆ.ಎಷ್ಟು ನೋವಾಗುತ್ತೆ ಎನ್ನುವುದನ್ನು ಆಲೋಚನೆ ಮಾಡಿಹೀಗಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇನೆ, ನಾನು ಚುನಾವಣೆಗೆ ನಿಲ್ಲುವುದಿಲ್ಲ.ರಾಮನಗರ ಬಿಟ್ಟು ನಾನು ಎಲ್ಲಿಯೂ ಹೋಗುವುದಿಲ್ಲ,ರಾಮನಗರ ಹೊರತುಪಡಿಸಿ ನನ್ನ ರಾಜಕೀಯ ಜೀವನವನ್ನು ನಾನು ಊಹೆಯೂ ಮಾಡೋದಿಲ್ಲ.ನಮ್ಮ ಮೈತ್ರಿಕೂಟದ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು, ಇದು ನಮ್ಮ ಸಂಕಲ್ಪ, ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ