ಡಾ.ಬಿ.ಆರ್.ಅಂಬೇಡ್ಕರ್ 66ನೇ ಪರಿನಿಬ್ಬಾಣ: ನ್ಯಾಷನಲ್ ಕಾಲೇಜಿನಲ್ಲಿ ಬೃಹತ್ ಸಮಾವೇಶ
![ಡಾ.ಬಿ.ಆರ್.ಅಂಬೇಡ್ಕರ್ 66ನೇ ಪರಿನಿಬ್ಬಾಣ: ನ್ಯಾಷನಲ್ ಕಾಲೇಜಿನಲ್ಲಿ ಬೃಹತ್ ಸಮಾವೇಶ ಡಾ.ಬಿ.ಆರ್.ಅಂಬೇಡ್ಕರ್ 66ನೇ ಪರಿನಿಬ್ಬಾಣ: ನ್ಯಾಷನಲ್ ಕಾಲೇಜಿನಲ್ಲಿ ಬೃಹತ್ ಸಮಾವೇಶ](https://kannada.cdn.zeenews.com/kannada/sites/default/files/styles/zm_500x286/public/2022/12/06/270233-dr-br-ambedkar.png?itok=khW5vaXI)
BR Ambedkar Death Anniversary: ದಲಿತ ಸಂಘರ್ಷ ಸಮಿತಿ ಐಕ್ಯತಾ ಹೋರಾಟ ಸಮಿತಿಯಿಂದ ನಡೆದ ಸಮಾವೇಶದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ಹಿನ್ನೆಲೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು.
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಹೆಸರಿನಲ್ಲಿ ಸಮಾವೇಶ ಅಯೋಜಿಸಲಾಗಿತ್ತು. ಈ ಸಮಾವೇಶದಲ್ಲಿ ಲಕ್ಷಾಂತರ ದಲಿತರು ಭಾಗಿಯಾಗಿದ್ದರು. ರಾಜ್ಯದ ಮೂಲೆ ಮೂಲೆಯಿಂದಲೂ ಜನರು ಸಮಾವೇಶಕ್ಕೆ ಆಗಮಿಸಿದ್ದರು.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ ಹಣ ಪಾವತಿಗೆ ಒಪ್ಪಿಗೆ
ದಲಿತ ಸಂಘರ್ಷ ಸಮಿತಿ ಐಕ್ಯತಾ ಹೋರಾಟ ಸಮಿತಿಯಿಂದ ನಡೆದ ಸಮಾವೇಶದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಅನೇಕ ಕಲಾತಂಡಗಳು ತಮ್ಮ ಕಲಾ ಪ್ರದರ್ಶನವನ್ನು ಪ್ರಸ್ತುತಪಡಿಸಿದವು.
ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ
ಡಾ.ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ಹಿನ್ನೆಲೆ ಆಯೋಜಿಸಿದ್ದ ಸಮಾವೇಶದಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ‘ಜೈ ಭೀಮ್… ಜೈ ಭೀಮ್’ ಎಂದು ಘೋಷಣೆ ಕೂಗುತ್ತಾ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಬುದ್ಧಿ ಕಲಿಸಬೇಕು ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಇದನ್ನೂ ಓದಿ: ಗುಜರಾತ್ ಎಕ್ಸಿಟ್ ಪೋಲ್ ಕರ್ನಾಟಕ ಚುನಾವಣೆ ಮೇಲೆ ಪರಿಣಾಮ : ಸಿಎಂ ಬೊಮ್ಮಾಯಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.