ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಜಮ್ಮು& ಕಾಶ್ಮೀರದ ಮಾಜಿ ಸಿಎಂ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಡಾ.ಫಾರೂಕ್ ಅಬ್ದುಲ್ಲಾ ಅವರು ಬುಧವಾರ ಬೆಳಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಸೌಜನ್ಯದ ಭೇಟಿಯಾಗಿ ಬಹುಹೊತ್ತು ಚರ್ಚೆ ನಡೆಸಿದರು.

Written by - Zee Kannada News Desk | Last Updated : Jun 7, 2023, 06:32 PM IST
  • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಸೌಜನ್ಯದ ಭೇಟಿಯಾದ ಡಾ.ಫಾರೂಕ್ ಅಬ್ದುಲ್ಲಾ
  • ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಡಾ.ಫಾರೂಕ್
  • ಸಭೆಯಲ್ಲಿ ಫಾರೂಖ್ ಅಬ್ದುಲ್ಲಾ ಅಬ್ದುಲ್ಲಾ ಅವರು ಅನೇಕ ವಿಚಾರಗಳ ಬಗ್ಗೆ ಪ್ರಸ್ತಾಪ
ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಜಮ್ಮು& ಕಾಶ್ಮೀರದ ಮಾಜಿ ಸಿಎಂ title=

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಡಾ.ಫಾರೂಕ್ ಅಬ್ದುಲ್ಲಾ ಅವರು ಬುಧವಾರ ಬೆಳಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಸೌಜನ್ಯದ ಭೇಟಿಯಾಗಿ ಬಹುಹೊತ್ತು ಚರ್ಚೆ ನಡೆಸಿದರು.

ಈ ಮಾತುಕತೆಯ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ ಅವರಿದ್ದ ಈ ಸಭೆಯಲ್ಲಿ ಫಾರೂಖ್ ಅಬ್ದುಲ್ಲಾ ಅಬ್ದುಲ್ಲಾ ಅವರು ಅನೇಕ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದರು.ಮಾಜಿ ಸಚಿವ ರೋಷನ್ ಬೇಗ್, ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಖ್ ಅವರೊಂದಿಗೆ ಮಾಜಿ ಪ್ರಧಾನಿಗಳ ನಿವಾಸಕ್ಕೆ ಅಗಲಿಸಿದ ಫಾರೂಖ್ ಅಬ್ದುಲ್ಲಾ ಅವರನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಇದನ್ನೂ ಓದಿ: Crime News: ಟ್ಯಾಕ್ಟರ್ ಆರ್ಭಟಕ್ಕೆ ಪುಟ್ಟ ಕಂದಮ್ಮ ಬಲಿ; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!

ಪ್ರಧಾನಿಗಳಾಗಿದ್ದಾಗ ದೇವೇಗೌಡರು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂದರ್ಭವನ್ನು ನೆನಪು ಮಾಡಿಕೊಂಡ ಅವರು, ಆ ನಂತರ ಕಣಿವೆ ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆ ಐತಿಹಾಸಿಕ ಎಂದು ತಿಳಿಸಿದರು.ಬಳಿಕ ಡಾ.ಫಾರೂಕ್ ಅಬ್ದುಲ್ಲಾ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜತೆಗೂಡಿ ಮಾಧ್ಯಮಗಳ ಜತೆ ಮಾತನಾಡಿದರು. ದೇಶದ ಹಿತದೃಷ್ಟಿಯಿಂದ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕು ಎಂದು ಅವರು ಪ್ರಾದೇಶಿಕ ಪಕ್ಷಗಳಿಗೆ ಕರೆ ನೀಡಿದರು.

ಯಾರೂ ನಿರಾಶರಾಗಬೇಕಿಲ್ಲ. ನಿಧಾನವಾಗಿ ದಾರಿ ಸಿಗುತ್ತದೆ. ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕು. ಇದು ಬಹಳ ಮುಖ್ಯವಾದ ವಿಚಾರ ಎಂದರು ಅವರು. ಧರ್ಮದ ಆಧಾರದ ಮೇಲೆ ದೇಶ ವಿಭಜನೆ ಬೇಕಾ? ದೇಶ ಒಗ್ಗಟ್ಟಾಗಿರುವುದು ಬೇಕಾ? ಇದು ವಿವಿಧತೆಯ ದೇಶ. ಕರ್ನಾಟಕ ಕಾಶ್ಮೀರ ನಡುವೆ ಸಾಮ್ಯತೆಗಳಿಲ್ಲ. ದೇಶ ಉಳಿಬೇಕು ಅಂದರೆ ನಾವೆಲ್ಲರೂ ಉಳಿಬೇಕು ಎಂದು ಅವರು ಒತ್ತಿ ಹೇಳಿದರು.

ಇದನ್ನೂ ಓದಿ:  Crime News : ಪಾರ್ಟಿ ಕೊಡಿಸಿದವನಿಗೆ ಥ್ಯಾಂಕ್ಸ್‌ ಬದಲಾಗಿ, ತಲೆ ಬುರುಡೆಯನ್ನೇ ಬಿಚ್ಚಿದ್ದ ಸ್ನೇಹಿತರು!

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದು ಒಂದು ಸೌಜನ್ಯದ ಭೇಟಿ. ಅವರು ಪ್ರಧಾನಿಯಾಗಿದ್ದಾಗ ಕಾಶ್ಮಿರಕ್ಕೆ ನೀಡಿದ ಕೊಡುಗೆಗೆ ಧನ್ಯವಾದ ಹೇಳಿದ್ದೇನೆ. ದೇಶದ ಯಾವೊಬ್ಬ ಉನ್ನತ ನಾಯಕರು ಕೂಡ ಕಾಶ್ಮೀರಕ್ಕೆ ಬಾರದಿದ್ದಾಗ ದೇವೇಗೌಡರು ಬಂದಿದ್ದರು. ಗಡಿ ಭಾಗಕ್ಕೂ ಭೇಟಿ ನೀಡಿದ್ದರು. ಆ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. ಹೀಗಾಗಿ ಅವರಿಗೆ ಕೃತಜ್ಞತೆಯನ್ನು ತಿಳಿಸಿದ್ದೇನೆ ಎಂದರು. ಕಾಶ್ಮೀರಿ ಫೈಲ್ಸ್, ಕೇರಳ ಫೈಲ್ಸ್ ಸಿನಿಮಾಗಳ ಬಳಿಕ ಮತ್ತೊಂದು ಚಿತ್ರ ಬಿಡುಗಡೆ ವಿಚಾರ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಫಾರೂಕ್ ಅಬ್ದುಲ್ಲಾ ಅವರು, ಈ ಚಿತ್ರಗಳು ದೇಶವನ್ನು ವಿಭಜನೆ ಮಾಡುವುದಕ್ಕೆ ಮಾಡಿರುವ ಚಿತ್ರಗಳು ಎಂದು ಟೀಕಿಸಿದರು.

ರೈಲು ದುರಂತದ ಬಗ್ಗೆ ತನಿಖೆ ಆಗಲಿ:

ಒಡಿಶಾ ರೈಲು ದುರಂತ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಅವರು, ಇದು ಬಹಳ ನೋವಿನ ಸಂಗತಿ. ಬಹಳ ದೊಡ್ಡ ಆಘಾತ. ತನಿಖೆ ನಡೆಯಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ ಅವರು, ಜನರಿಗೆ ಗೊತ್ತಾಗಬೇಕು ಯಾಕೆ ಘಟನೆ ಆಗಿದೆ ಅಂತ. ರೈಲು ದುರಂತದಲ್ಲಿ 300 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಕುಟುಂಬಗಳು ಸಂಕಷ್ಟದಲ್ಲಿವೆ. ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಗಾಗಿ, ಈ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News