ಡಾ.ಸಿದ್ಧಲಿಂಗಯ್ಯನವರ ಬದುಕು-ಬರಹ ವಿಚಾರಸಂಕಿರಣ : ಪ್ರಬಂಧಗಳಿಗೆ ಆಹ್ವಾನ

ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಡಾ.ಸಿದ್ಧಲಿಂಗಯ್ಯನವರ ಬದುಕು-ಬರಹ ವಿಚಾರಸಂಕಿರಣಕ್ಕೆ ಪ್ರಬಂಧಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Jan 6, 2022, 02:05 AM IST
ಡಾ.ಸಿದ್ಧಲಿಂಗಯ್ಯನವರ ಬದುಕು-ಬರಹ ವಿಚಾರಸಂಕಿರಣ : ಪ್ರಬಂಧಗಳಿಗೆ ಆಹ್ವಾನ title=
file photo

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಡಾ.ಸಿದ್ಧಲಿಂಗಯ್ಯನವರ ಬದುಕು-ಬರಹ ವಿಚಾರಸಂಕಿರಣಕ್ಕೆ ಪ್ರಬಂಧಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಇದೇ ಜನವರಿ 21 ಮತ್ತು 22 ರಂದು ಡಾ.ಸಿದ್ಧಲಿಂಗಯ್ಯನವರ ಬದುಕು-ಬರಹ’’ ಎಂಬ ರಾಜ್ಯಮಟ್ಟದ ವಿಚಾರಸಂಕಿರಣಯನ್ನು ಹಮ್ಮಿಕೊಂಡಿದೆ. ಈ ವಿಚಾರಸಂಕಿರಣದಲ್ಲಿ ಪರ್ಯಾಯ ಗೋಷ್ಠಿಗಳು ನಡೆಯಲಿವೆ.ಈ ಗೋಷ್ಠಿಯಲ್ಲಿ ಡಾ.ಸಿದ್ಧಲಿಂಗಯ್ಯನವರ ಬದುಕು-ಬರಹ ಕುರಿತಾಗಿ ಪ್ರಬಂಧ ಮಂಡಿಸುವವರು ಅರ್ಜಿಯೊಂದಿಗೆ ಪ್ರಬಂಧವನ್ನು ಸಲ್ಲಿಸಬೇಕು.

ಇದನ್ನೂ ಓದಿ: ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ ಕರೋನವೈರಸ್ ಪ್ರಕರಣಗಳು ವರದಿ

ಪ್ರಬಂಧ ಸಲ್ಲಿಸಲು ಜ.12 ಕೊನೆಯ ದಿನವಾಗಿದ್ದು, ಇದರೊಳಗೆ ಅಕಾಡೆಮಿಗೆ ರಿಜಿಸ್ಟರ್ ಅಂಚೆ ಅಥವಾ ಕೊರಿಯರ್ ಮೂಲಕ ನಿಬಂಧನೆಗೊಳಪಟ್ಟು ಅರ್ಜಿಯೊಂದಿಗೆ ಪ್ರಬಂಧಗಳನ್ನು ಸಲ್ಲಿಸಲು ಕೋರಿದೆ.ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್  http://sahithyaacademy.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News